ದುರ್ಗದ ಶಾಸಕ ವೀರೇಂದ್ರ ಪಪ್ಪಿಗೆ ಮಂತ್ರಿ ಮಾಡಿ

KannadaprabhaNewsNetwork |  
Published : May 28, 2026, 01:15 AM IST
ಚಿತ್ರದುರ್ಗ ಎರಡನೇ ಪುಟದ ಮಿಡ್ಲ್  | Kannada Prabha

ಸಾರಾಂಶ

ವೀರಶೈವ ಲಿಂಗಾಯಿತ ಯುವ ವೇದಿಕೆ ಜಿಲ್ಲಾಧ್ಯಕ್ಷ ಎಚ್.ಎಂ.ಮಂಜುನಾಥ ಆಗ್ರಹ

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಮುಂಬರುವ ಸಚಿವ ಸಂಪುಟ ಪುನರ್ ರಚನೆಯಲ್ಲಿ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಸಚಿವರನ್ನಾಗಿ ನೇಮಕ ಮಾಡುವಂತೆ ವೀರಶೈವ ಲಿಂಗಾಯಿತ ಯುವ ವೇದಿಕೆ ಜಿಲ್ಲಾಧ್ಯಕ್ಷ ಎಚ್.ಎಂ.ಮಂಜುನಾಥ್ ಕಾಂಗ್ರೆಸ್ ವರಿಷ್ಟರನ್ನು ಒತ್ತಾಯಿಸಿದ್ದಾರೆ.

ಪತ್ರಕರ್ತರ ಭವನದಲ್ಲಿ ಕೆ.ಸಿ.ವೀರೇಂದ್ರಪಪ್ಪಿರವರ ಅಭಿಮಾನಿಗಳ ಬಳಗದಿಂದ ಬುಧವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಟು ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಹಾಕಿಕೊಂಡಿರುವ ಶಾಸಕ ಕೆ.ಸಿ ವೀರೇಂದ್ರಪಪ್ಪಿ ರವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದರೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಶರವೇಗದಲ್ಲಿ ಅಭಿವೃದ್ಧಿಯಾಗಲಿದೆ. ಹಾಗಾಗಿ ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಚಿತ್ರದುರ್ಗ ಶಾಸಕರಿಗೆ ಆದ್ಯತೆ ನೀಡುವಂತೆ ಆಗ್ರಹಿಸಿದರು.

ಕೆಪಿಸಿಸಿ ಕಾರ್ಯದರ್ಶಿ ಚಂದ್ರಶೇಖರ್ ಮಾತನಾಡಿ, ಚಿತ್ರದುರ್ಗಕ್ಕೆ ಮೆಡಿಕಲ್ ಕಾಲೇಜು ಹಾಗೂ ಭದ್ರಾಮೇಲ್ದಂಡೆ ಯೋಜನೆಗಾಗಿ ಸಾಕಷ್ಟು ಹೋರಾಟ ಮಾಡಿರುವ ಶಾಸಕ ಕೆ.ಸಿ.ವೀರೇಂದ್ರಪಪ್ಪಿರವರಿಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಲೇಬೇಕು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡಲು ಹೊರಟಿರುವ ಇವರಿಗೆ ಸಚಿವ ಸ್ಥಾನ ನೀಡಿದರೆ ಕ್ಷೇತ್ರದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸಿದಂತಾಗುತ್ತದೆ ಎಂದು ಮನವಿ ಮಾಡಿದರು.

ಯುವಕರ ಕಣ್ಮಣಿ ಶಾಸಕ ಕೆ.ಸಿ.ವೀರೇಂದ್ರಪಪ್ಪಿಗೆ ಸಚಿವ ಸ್ಥಾನ ನೀಡಬೇಕು. ಚಿತ್ರದುರ್ಗದಲ್ಲಿ ರಸ್ತೆ ಅಗಲೀಕರಣದ ಕನಸು ಹೊತ್ತಿರುವ ವೀರೇಂದ್ರ ಅವರಿಗೆ ಸಚಿವ ಸ್ಥಾನ ಕೊಡಬೇಕೆಂಬುದು ನಮ್ಮ ಆಗ್ರಹ ಎಂದು ಭೀಮಸಮುದ್ರದ ಉದ್ಯಮಿ ಸಿರಾಜ್ ಕಾಂಗ್ರೆಸ್ ನಾಯಕರುಗಳಲ್ಲಿ ವಿನಂತಿಸಿದರು.

ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್ ಮಾತನಾಡಿ, ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ನೀರಿನ ಕೊರತೆಯನ್ನು ನೀಗಿಸಿರುವ ಶಾಸಕ ಕೆ.ಸಿ.ವೀರೇಂದ್ರಪಪ್ಪಿಗೆ ರಾಜ್ಯ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಕೊಡಬೇಕೆಂದು ಕೋರಿದರು. ದಲಿತ ಮುಖಂಡ ದೇವರಾಜ್ ಲಕ್ಷ್ಮಿಸಾಗರ, ರವಿಶಂಕರ್ ಇವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಲೆ ಶಿಥಿಲ ಕೊಠಡಿಗಳ ಸಮಗ್ರ ಮಾಹಿತಿ ನೀಡಿ: ಬಿಇಒ
ಸ್ವಾಯತ್ತ ಸಂಸ್ಕೃತಿಯ ದಿಕ್ಕು ತಪ್ಪಿಸುವವರ ಬಗ್ಗೆ ಎಚ್ಚರವಿರಲಿ: ಪ್ರೊ.ಎಸ್. ನಟರಾಜ ಬೂದಾಳು