ಹೆಣ್ಣುಮಕ್ಕಳಿಗೆ ತಪ್ಪದೇ ಶಿಕ್ಷಣ ನೀಡಿ: ಧರ್ಮರಾಜ್

KannadaprabhaNewsNetwork |  
Published : Jan 30, 2024, 02:02 AM IST
ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೇಟಿ ಬಚಾವೊ, ಬೇಟಿ ಪಡಾವೊ ಕಾರ್ಯಕ್ರಮದ ನಿಮಿತ್ತ ವಿಶೇಷ ಗ್ರಾಮ ಸಭೆ ನಡೆಯಿತು. | Kannada Prabha

ಸಾರಾಂಶ

ಬಾದ್ಯಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೇಟಿ ಬಚಾವೊ, ಬೇಟಿ ಪಡಾವೊ ಕಾರ್ಯಕ್ರಮದ ನಿಮಿತ್ತ ವಿಶೇಷ ಗ್ರಾಮ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಸುರಪುರ

ತಾಲೂಕಿನ ಬಾದ್ಯಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೇಟಿ ಬಚಾವೊ, ಬೇಟಿ ಪಡಾವೊ ಕಾರ್ಯಕ್ರಮದ ನಿಮಿತ್ತ ವಿಶೇಷ ಗ್ರಾಮ ಸಭೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗ್ರಾಪಂ ಮಾಜಿ ಅಧ್ಯಕ್ಷ ಧರ್ಮರಾಜ್ ಬಡಿಗೇರ, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪೋಷಕರು, ತಂದೆ-ತಾಯಂದಿರು ಮೊದಲಾದ್ಯತೆ ನೀಡಬೇಕು. ಹೆಣ್ಣು ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು ಎಂದರು.

ಬಾಲ್ಯ ವಿವಾಹ ತಡೆಯುವುದರ ಜತೆಗೆ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ ಭವಿಷ್ಯ ರೂಪಿಸಿಕೊಳ್ಳಲು ಪ್ರತಿಯೊಬ್ಬರೂ ನೆರವಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳೆರಡು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿವೆ. ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಮುಖ್ಯ ಶಿಕ್ಷಕ ಪ್ರಕಾಶ ಮುಡಬಿ, ಗ್ರಾಪಂ ಮಾಜಿ ಸದಸ್ಯ ಕೃಷ್ಣ, ಬೀರಲಿಂಗ ಮಗ್ಗದ್, ಯಂಕೋಬ ದೊರೆ, ಆನಂದ ದೊರೆ, ಅಂಗನವಾಡಿ ಮೇಲ್ವಿಚಾರಕಿ ಜಯಶ್ರೀ ಪಾಟೀಲ್, ಭಾಗ್ಯಮ್ಮ, ಅಂಗನವಾಡಿ ಶಿಕ್ಷಕಿ ಮರಿಲಿಂಗಮ್ಮ ಬಸವರಾಜೇಶ್ವರಿ ಬಡಿಗೇರ, ಮರೆಮ್ಮ, ಭೀಮವ್ವ ಸೇರಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

163 ವೈದ್ಯ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಅನೈತಿಕ ಸಂಬಂಧ ಮುಚ್ಚಿಕೊಳ್ಳಲುಸುಳ್ಳು ವಂಚನೆಯ ಕಥೆ ಕಟ್ಟಿದ ಪತಿ