ಪದಾಧಿಕಾರಿ ಆಯ್ಕೆ ಸಭೆ
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಮೋಹನ್ ರಾವ್ ನಲವಾಡೆ ಸಲಹೆಕನ್ನಡಪ್ರಭ ವಾರ್ತೆ ಹನೂರು
ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಸಂಘದ ಪದಾಧಿಕಾರಿಗಳು ಮುಂದಾಗಬೇಕು ಎಂದು ಮಾನವ ಹಕ್ಕುಗಳು ಹಾಗೂ ಭ್ರಷ್ಟಚಾರ ನಿರ್ಮೂಲನಾ ಸಮಿತಿ ರಾಷ್ಟ್ರಾಧ್ಯಕ್ಷ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಮೋಹನ್ ರಾವ್ ನಲವಾಡೆ ತಿಳಿಸಿದರು.ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ನಮ್ಮ ಸುತ್ತ ಮುತ್ತ ಇಂದಿಗೂ ಕಾನೂನಿನ ಅರಿವಿನ ಕೊರತೆಯಿಂದ ತಮ್ಮದಲ್ಲದ ಶಿಕ್ಷೆಗೆ ಗುರಿಯಾಗುತ್ತಿರುವುದನ್ನು ನೋಡುತ್ತಿದ್ದೇವೆ. ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಈ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಮಾಡಲಾಗುವುದು. ನಮ್ಮ ಸಂಘದ ಪದಾಧಿಕಾರಿಗಳು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಏರ್ಪಡಿಸಿ ಸ್ಥಳೀಯ ನ್ಯಾಯಾಧೀಶರು ಹಾಗೂ ನುರಿತ ವಕೀಲರುಗಳಿಂದ ಸಲಹೆ, ಮಾರ್ಗದರ್ಶನ ಪಡೆಯುವ ಕೆಲಸವನ್ನು ಮಾಡಬೇಕು. ಬಾಲ್ಯ ವಿವಾಹ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಬಾಲ ಕಾರ್ಮಿಕ ಪದ್ಧತಿ ತಡೆಗಟ್ಟುವ ನಿಟ್ಟಿನಲ್ಲಿ ಸಂಘಟನೆ ಕಾರ್ಯನಿರ್ವಹಿಸಬೇಕು.
ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ, ಲಂಚಕ್ಕೆ ಬೇಡಿಕೆ ಸೇರಿದಂತೆ ಇನ್ನಿತರ ಕೆಲಸ ಕಾರ್ಯಗಳಿಗೆ ವಾಮ ಮಾರ್ಗಗಳ ಮೂಲಕ ಸಾರ್ವಜನಿಕರಿಂದ ಹಣ ವಸೂಲಿ ಮಾಡುವವರ ವಿರುದ್ಧ ಸೂಕ್ತ ದಾಖಲೆಗಳನ್ನು ಸಂಗ್ರಹಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮುಂದಾಗಬೇಕು. ಯಾವುದೇ ಕಾರಣಕ್ಕೂ ಸಂಘದ ಹೆಸರನ್ನು ಹೇಳಿಕೊಂಡು ಬ್ಲಾಕ್ ಮೇಲ್ ಮಾಡುವುದು, ಹಣ ಸಂಪಾದಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಅಂತಹವರ ವಿರುದ್ಧ ನಾವೇ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿರುವ ಉದಾಹರಣೆಗಳು ಇವೆ ಎಂದರು.ಸಭೆಯ ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ರೂಪುರೇಷೆಗಳು ಹಾಗೂ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಮಾನವ ಹಕ್ಕುಗಳು ಹಾಗೂ ಭ್ರಷ್ಟಚಾರ ನಿರ್ಮೂಲನ ಸಂಸ್ಥೆ ಹನೂರು ಘಟಕದ ಅಧ್ಯಕ್ಷ ಮಹೇಂದ್ರ ಉಪಾದ್ಯಕ್ಷ ರವಿ. ಎಸ್, ಮೀಡಿಯಾ ಕಾರ್ಯದರ್ಶಿ ಪ್ರಭುಸ್ವಾಮಿ ಎಂ, ಸದಸ್ಯರುಗಳಾದ ಕಾರ್ತಿಕ್, ಸಾಗರ್ ನಿಂಗಯ್ಯ,ಮಹೇಂದ್ರ ಎಂ, ವಿನೋದ್ ಡಿ, ಆಯ್ಕೆಯಾದರು.ಈ ಸಂದರ್ಭದಲ್ಲಿ ಸಂಘದ ತಮಿಳುನಾಡು ರಾಜ್ಯದ ಪ್ರಧಾನ ಕಾರ್ಯದರ್ಶಿ ಸೆಂದಿಲ್, ಹನೂರು ತಾಲೂಕು ಘಟಕದ ಅಧ್ಯಕ್ಷ ಮಹೇಂದ್ರ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
---------27ಸಿಎಚ್ಎನ್14
ಹನೂರು ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಾನವ ಹಕ್ಕುಗಳು ಹಾಗೂ ಭ್ರಷ್ಟಚಾರ ನಿರ್ಮೂಲನಾ ಸಮಿತಿ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮೋಹನ್ ರಾವ್ ನಲವಾಡೆ ಮಾತನಾಡಿದರು.