ಬೆಳೆ ವಿಮೆ ಮಾಡಿಸಲು ರೈತರಿಗೆ ಅರಿವು ಮೂಡಿಸಿ: ಡಿಸಿ

KannadaprabhaNewsNetwork |  
Published : Aug 01, 2025, 11:45 PM IST
ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆಯ ಪೋಸ್ಟರ್ ಬಿಡುಗಡೆ ಮಾಡಲಾಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಅತಿವೃಷ್ಟಿ, ಅನಾವೃಷ್ಟಿ, ಹವಾಮಾನ ಬದಲಾವಣೆ ಮುಂತಾದ ಪ್ರಕೃತಿ ವಿಕೋಪಗಳಿಂದ ಸಂಭವಿಸುವ ಬೆಳೆ ನಷ್ಟಕ್ಕೆ ವಿಮೆ ಸಹಕಾರಿ ಆಗಲಿದ್ದು, ಬೆಳೆ ವಿಮೆ ಮಾಡಿಸಿಕೊಳ್ಳಲು ರೈತರಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಹೇಳಿದರು.

ದೊಡ್ಡಬಳ್ಳಾಪುರ: ಅತಿವೃಷ್ಟಿ, ಅನಾವೃಷ್ಟಿ, ಹವಾಮಾನ ಬದಲಾವಣೆ ಮುಂತಾದ ಪ್ರಕೃತಿ ವಿಕೋಪಗಳಿಂದ ಸಂಭವಿಸುವ ಬೆಳೆ ನಷ್ಟಕ್ಕೆ ವಿಮೆ ಸಹಕಾರಿ ಆಗಲಿದ್ದು, ಬೆಳೆ ವಿಮೆ ಮಾಡಿಸಿಕೊಳ್ಳಲು ರೈತರಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ ಮುಂತಾದ ಪ್ರಕೃತಿ ವಿಪತ್ತಿನಿಂದ ಬೆಳೆ ನಾಶವಾಗಿ ನಷ್ಟವಾಗುತ್ತದೆ. ಬೆಳೆಯನ್ನೆ ನಂಬಿ ಜೀವನ ನಡೆಸುತ್ತಿರುವ ರೈತರಿಗೆ ಈ ನಷ್ಟ ಭರಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಬೆಳೆ ವಿಮೆಯ ಅವಶ್ಯಕತೆಯನ್ನು ರೈತರಿಗೆ ಮನದಟ್ಟು ಮಾಡಬೇಕು ಎಂದರು.

ಜಿಲ್ಲೆಯಲ್ಲಿನ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ ಮತ್ತು ಮಾವುಗೆ ವಿಮೆ ಕಲ್ಪಿಸಲಾಗಿದ್ದು. ಮಾವು ಬೆಳೆಗೆ ಪ್ರತಿ ಹೆಕ್ಟೇರಿಗೆ ₹80,000 ವಿಮಾ ಮೊತ್ತ ಸಿಗಲಿದ್ದು, ರೈತರು ಶೇ 5ರಂತೆ ₹4,000 ವಿಮೆ ಪಾವತಿ ಮಾಡಬೇಕು. ದ್ರಾಕ್ಷಿ ಬೆಳೆಗೆ ಪ್ರತಿ ಹೆಕ್ಟೇರಿಗೆ ₹2,80,000 ವಿಮಾ ಮೊತ್ತ ಸಿಗಲಿದ್ದು, ರೈತರು ಪ್ರತಿ ಹೆಕ್ಟೇರಿಗೆ ಶೇ.5 ರಂತೆ ₹14,000 ವಿಮೆ ಪಾವತಿ ಮಾಡಬೇಕು ಎಂದರು.

ರಾಷ್ಟ್ರೀಯ ಅಧಿಕೃತ ಬ್ಯಾಂಕು, ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಲ್ಲಿ ನೊಂದಾಯಿಸಬಹುದು. ಜೊತೆಗೆ ವಿಮೆ ಮಾಡಿಸುವ ರೈತರು FRUITS ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕು, ನೋಂದಣಿ ಸಂಖ್ಯೆಗೆ ಪಹಣಿ ವಿವರಗಳನ್ನು ಜೋಡಿಸಬೇಕಿರುತ್ತದೆ. ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆ ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿರುತ್ತದೆ. ಬೆಳೆ ಸಾಲ ಪಡೆದ ರೈತರನ್ನು ಸಂಬಂಧಿಸಿದ ಬ್ಯಾಂಕಿನವರು ವಿಮೆ ವ್ಯಾಪ್ತಿಗೆ ನೊಂದಾಯಿಸಲಿದ್ದು, ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಇಚ್ಛಿಸದ ರೈತರು ಸಂಬಂಧಿಸಿದ ಬ್ಯಾಂಕ್ ಶಾಖೆಯ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನ ಮುಂಚಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲಾಗುವುದು.

ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಶಿವಕುಮಾರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಗುಣವಂತ, ಜಂಟಿ ಕೃಷಿ ನಿರ್ದೇಶಕರಾದ ಕಲಾವತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

31ಕೆಡಿಬಿಪಿ1- ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆಯ ಪೋಸ್ಟರ್ ಬಿಡುಗಡೆ ಮಾಡಲಾಯಿತು.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ