ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಘನತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳ ೨೦೧೬ರ ಸಂಬಂಧ ರಾಷ್ಟ್ರೀಯ ಹಸಿರು ನ್ಯಾಯಪೀಠದ ನಿರ್ದೇಶನಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ನೇತೃತ್ವ ವಹಿಸಿ ಮಾತನಾಡಿದರು.
ಬ್ರಾಂಡ್ ರೂಪ ಕೊಡಿ:ಕಸವನ್ನು ರಸಮಾಡಿ ನಗರ ಸ್ಥಳೀಯ ಸಂಸ್ಥೆಗಳು ತಯಾರಿಸಿದ ಗೊಬ್ಬರವನ್ನು ಬ್ರಾಂಡಿಂಗ್ ಮಾಡಲು ಕ್ರಮ ವಹಿಸಬೇಕು. ಪ್ರತಿ ತಿಂಗಳು ಮಾರಾಟ ಮಾಡಿದ ಗೊಬ್ಬರದ ಪ್ರಮಾಣ ಮತ್ತು ಅದರಿಂದ ಬರುವ ಆದಾಯದ ವರದಿಯನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸುವುದು. ತಯಾರಿಸಿದ ಗೊಬ್ಬರವನ್ನು ಅಧಿಕೃತ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ನಿಯಮಾನುಸಾರ ಮಾರಾಟ ಮಾಡಿ ಎಂದು ಸೂಚಿಸಿದರು.
ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿರುವ ಪೌಲ್ಟ್ರಿ ತ್ಯಾಜ್ಯವನ್ನು ನಿಯೋಜಿತ ಖಾಸಗಿ ಸಂಗ್ರಹಣಾದಾರರಿಗೆ ನೀಡಿ ಅದನ್ನು ಉಪಯೋಗ ಮಾಡಿಕೊಳ್ಳುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಪ್ರತಿ ಮಾಹೆಯಲ್ಲಿ ಘನತ್ಯಾಜ್ಯ ವಸ್ತು ವಿಲೇವಾರಿಯನ್ನು ಬೈಲಾದಂತೆ ಸೇವಾ ಶುಲ್ಕವನ್ನು ಸಂಗ್ರಹಿಸಿ ವರದಿ ಸಲ್ಲಿಸಿ ಎಂದರು.
ಕುಡಿಯುವ ನೀರು ಪರೀಕ್ಷಿಸಿ:
ಸಭೆಯಲ್ಲಿ ನ್ಯಾಯಾಧೀಶರಾದ ವಾಣಿ ಎ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ, ನಗರಸಭೆ ಆಯುಕ್ತ ಆರ್.ಮಂಜುನಾಥ್, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.