ಜಿಲ್ಲೆಯಲ್ಲಿ ಸ್ಥಾಪಿಸಿದ ಸಹಾಯವಾಣಿ ಕೇಂದ್ರ ಸದ್ಬಳಕೆ ಮಾಡಿಕೊಳ್ಳಿ

KannadaprabhaNewsNetwork | Published : May 14, 2024 1:00 AM

ಸಾರಾಂಶ

ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆ ಕೈಗೊಳ್ಳಲು ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರೈತರಿಗೆ ಬಿತ್ತನೆ ಬೀಜ ವಿತರಿಸಿದರು. ಊರ್ಡಿಗೆರೆ ರೈತ ಸಂಪರ್ಕ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ರೈತರಿಗೆ ಬಿತ್ತನೆ ಬೀಜ ವಿತರಿಸಿದ ನಂತರ ಕೇಂದ್ರದಲ್ಲಿ ದಾಸ್ತಾನು ಮಾಡಲಾಗಿದ್ದ ಕೃಷಿ ಪರಿಕರ ಹಾಗೂ ಬಿತ್ತನೆ ಬೀಜದ ದಾಸ್ತಾನನ್ನು ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆ ಕೈಗೊಳ್ಳಲು ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರೈತರಿಗೆ ಬಿತ್ತನೆ ಬೀಜ ವಿತರಿಸಿದರು. ಊರ್ಡಿಗೆರೆ ರೈತ ಸಂಪರ್ಕ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ರೈತರಿಗೆ ಬಿತ್ತನೆ ಬೀಜ ವಿತರಿಸಿದ ನಂತರ ಕೇಂದ್ರದಲ್ಲಿ ದಾಸ್ತಾನು ಮಾಡಲಾಗಿದ್ದ ಕೃಷಿ ಪರಿಕರ ಹಾಗೂ ಬಿತ್ತನೆ ಬೀಜದ ದಾಸ್ತಾನನ್ನು ಪರಿಶೀಲಿಸಿದರು.

ಸಹಾಯವಾಣಿ ಕೇಂದ್ರ ಸ್ಥಾಪನೆ: ಜಿಲ್ಲೆಯನ್ನು 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೀವ್ರ ಬರ ಪೀಡಿತ ಪ್ರದೇಶವೆಂದು ಸರ್ಕಾರವು ಘೋಷಿಸಿರುವ ಹಿನ್ನೆಲೆಯಲ್ಲಿ ಸಮರ್ಪಕ ಬರ ಹಾಗೂ ಪ್ರಕೃತಿ ವಿಕೋಪ ನಿರ್ವಹಣೆಗಾಗಿ ಜಿಲ್ಲೆಯ 10 ತಾಲೂಕು ಕೇಂದ್ರ ಹಾಗೂ 3 ಉಪವಿಭಾಗಾಧಿಕಾರಿಗಳ ಕಚೇರಿಗಳಲ್ಲಿಯೂ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

ರೈತರ ಬೆಳೆ ನಷ್ಟ ಪರಿಹಾರ, ಕುಡಿಯುವ ನೀರಿನ ಸರಬರಾಜು ಮತ್ತು ಮೇವು ಲಭ್ಯತೆ ಸೇರಿದಂತೆ ಬರ ಪರಿಸ್ಥಿತಿ ನಿರ್ವಹಣೆ ಕುರಿತಂತೆ ಸಾರ್ವಜನಿಕರ ಕುಂದು ಕೊರತೆಯನ್ನು ಅವಲೋಕಿಸುವ ನಿಟ್ಟಿನಿಂದ ಜಿಲ್ಲಾ ಮಟ್ಟ ಮತ್ತು ಎಲ್ಲಾ ತಾಲುಕು ಕಚೇರಿಗಳಲ್ಲಿ ತೆರೆದಿರುವ ಸಹಾಯವಾಣಿ ಕೇಂದ್ರಗಳು ಕಚೇರಿ ಸಮಯದಲ್ಲಿ ಕಾರ್ಯನಿರ್ವಹಿಸಲಿವೆ.

ಬರ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಅಥವಾ ನೇರವಾಗಿ ತಾಲೂಕು ಕೇಂದ್ರಗಳಿಗೂ ಭೇಟಿ ನೀಡಿ ಮಾಹಿತಿ ನೀಡಬಹುದಾಗಿದೆ. ತುಮಕೂರು ಜಿಲ್ಲೆ: ೮೧೬೨೨೭೮೭೧೮, ಚಿಕ್ಕನಾಯಕನಹಳ್ಳಿ ತಾಲೂಕು: ೦೮೧೩೩-೨೬೭೨೪೨, ಗುಬ್ಬಿ: ೦೮೧೩೧-೨೨೨೨೩೪, ಕೊರಟಗೆರೆ: ೦೮೧೩೮-೨೩೨೧೫೩, ಕುಣಿಗಲ್: ೦೮೧೩೨-೨೨೦೨೩೯, ಮಧುಗಿರಿ: ೦೮೧೩೭-೨೦೦೯೨೪, ಪಾವಗಡ: ೦೮೧೩೬-೨೪೪೨೪೨, ಶಿರಾ: ೦೮೧೩೫-೨೦೦೮೪೨, ತಿಪಟೂರು: ೦೮೧೩೪-೨೫೧೦೩೯, ತುಮಕೂರು: ೦೮೧೬-೨೨೭೮೪೯೬, ತುರುವೇಕೆರೆ: ೦೮೧೩೯-೨೮೭೩೨೫ ಅನ್ನು ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ. ತಾಲೂಕು ಕಚೇರಿಯಲ್ಲದೆ ತುಮಕೂರು ಉಪವಿಭಾಗಾಧಿಕಾರಿಗಳ ಕಚೇರಿ: ೦೮೧೬-೨೨೭೮೪೯೩, ತಿಪಟೂರು ಉಪವಿಭಾಗಾಧಿಕಾರಿಗಳ ಕಚೇರಿ ೦೮೧೩೪-೨೫೧೦೮೫ ಹಾಗೂ ಮಧುಗಿರಿ ಉಪವಿಭಾಗಾಧಿಕಾರಿಗಳ ಕಚೇರಿ ೦೮೧೩೭-೨೦೦೮೨೨ ಯಲ್ಲಿಯೂ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಿಳಿಸಿದ್ದಾರೆ.ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಜಿ. ಪ್ರಭು, ಕೃಷಿ ಜಂಟಿ ನಿರ್ದೇಶಕ ರಮೇಶ್, ಕೃಷಿ ಉಪನಿರ್ದೇಶಕ ಅಶೋಕ್, ಸಹಾಯಕ ನಿರ್ದೇಶಕ ಹನುಮಂತರಾಜು, ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಲೇಪಾಕ್ಷಿ ಸೇರಿದಂತೆ ಮತ್ತಿತರ ಸಿಬ್ಬಂದಿಗಳು ಹಾಜರಿದ್ದರು.

Share this article