ಕನ್ನಡ ಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿರುವ ಕೆಎಎಸ್, ಐಎಎಸ್, ವಿಎಒ, ಪಿಡಿಒ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಮತ್ತು ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕ್ಷೇತ್ರದಲ್ಲಿ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಲಾಗಿದ್ದು, ಪ್ರಾಥಮಿಕ ಶಾಲೆಯಿಂದ ಪದವಿ ತರಗತಿಯವರೆವಿಗೂ ಶಿಕ್ಷಣಕ್ಕೆ ಬೇಕಾದ ಮೂಲ ಸೌಲಭ್ಯವನ್ನು ಸಮರ್ಪಕವಾಗಿ ಕಲ್ಪಿಸಲಾಗಿದೆ. ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಪೂರ್ವ ತರಬೇತಿ ಶಿಬಿರ ನಡೆಸುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಎಲ್ಲರೂ ಒಗ್ಗೂಡಿ ತರಬೇತಿ ಶಿಬಿರವನ್ನು ಆಯೋಜನೆ ಮಾಡಿರುವುದು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದರು.ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ತರಬೇತಿ ನೀಡಬೇಕು. ಆನ್‌ಲೈನ್, ಆಫ್‌ಲೈನ್ ತರಗತಿಗಳಲ್ಲಿ ವಿದ್ಯಾರ್ಥಿಗಳು ಯಾವುದಕ್ಕೆ ಹೆಚ್ಚು ಆಸಕ್ತಿ ತೋರುತ್ತಾರೋ ಅದನ್ನೇ ಮುಂದುವರಿಸಬೇಕು. ತರಬೇತಿ ಶಿಬಿರಕ್ಕೆ ಸಂಪೂರ್ಣವಾಗಿ ಬೆಂಬಲ ನೀಡಲಾಗಿದ್ದು, ಶಿಬಿರ ಯಶಸ್ವಿಯಾಗಲಿ ಎಂದು ಆಶೀಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಲೋಕೇಶ್, ಡಿವೈಎಸ್ಪಿ ಯಶ್ವಂತಕುಮಾರ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ.ಉಮಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ವಿನೋದ್‌ಕುಮಾರ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ಸಿಡಿಪಿಓ ನಂಜಮ್ಮಣಿ ಸೇರಿದಂತೆ ಇತರರಿದ್ದರು.