ಕನ್ನಡಪ್ರಭ ವಾರ್ತೆ ಔರಾದ್
ತಾಲೂಕಿನ ಜಂಬಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯಡಿ ನಡೆಯುತ್ತಿರುವ ಸಿಸಿಟಿ ಕಾಮಗಾರಿ ಗುರುವಾರ ಪರಿಶೀಲಿಸಿ ಮಾತನಾಡಿ, ಯಾರೂ ಗುಳೆ ಹೋಗಬೇಡಿ, ನಿಮ್ಮೂರಲ್ಲೇ ಕೆಲಸ ಮಾಡಿ. ವಿಬಿ–ಜಿ ರಾಮ್‌ಜಿ ಯೋಜನೆಯಡಿ ವಾರ್ಷಿಕ ಉದ್ಯೋಗದ ದಿನಗಳನ್ನು 100ರಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ದಿನಕ್ಕೆ 382 ರು. ಕೂಲಿ ನೀಡಲಾಗುತ್ತಿದ್ದು, 125 ದಿನಗಳ ಉದ್ಯೋಗ ಪಡೆದ ಕುಟುಂಬವು ಗರಿಷ್ಠ 47,750 ರು. ಕೂಲಿ ಪಡೆಯಬಹುದಾಗಿದೆ ಎಂದು ತಿಳಿಸಿದರು.
ಜಲ ಜೀವನ್ ಮಿಷನ್ ಕಾಮಗಾರಿ ಪರಿಶೀಲನೆ: ಇದಕ್ಕೂ ಮೊದಲು ಕಂದಗೂಳ ಗ್ರಾಮಕ್ಕೆ ಭೇಟಿ ನೀಡಿದ ಸಿಇಒ, ಜಲ ಜೀವನ್ ಮಿಷನ್ ಕಾಮಗಾರಿಯನ್ನು ಪರಿಶೀಲಿಸಿದರು. ಗ್ರಾಮಸ್ಥರಿಗೆ ಸಮರ್ಪಕ ಹಾಗೂ ಶುದ್ಧ ಕುಡಿಯುವ ನೀರು ದೊರೆಯುವಂತೆ ಕಾಮಗಾರಿಗಳನ್ನು ಗುಣಮಟ್ಟದಿಂದ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಬಳಿಕ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಹಾಜರಾತಿ, ಪೌಷ್ಟಿಕ ಆಹಾರ ವಿತರಣೆ, ಬೆಳವಣಿಗೆ ದಾಖಲಾತಿ ಹಾಗೂ ಸ್ವಚ್ಛತೆ ಪರಿಶೀಲಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ: ವಡಗಾಂವ, ಸಂತಪೂರ ಹಾಗೂ ಜಂಬಗಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸರ್ಕಾರಿ ಶಾಲೆ ಸೇರಿದಂತೆ ವಿವಿಧ ಸಾರ್ವಜನಿಕ ಸೇವಾ ಕೇಂದ್ರಗಳಿಗೂ ಭೇಟಿ ನೀಡಿದ ಅವರು, ಸಿಬ್ಬಂದಿ ಹಾಜರಾತಿ, ಸಾರ್ವಜನಿಕರಿಗೆ ದೊರೆಯುತ್ತಿರುವ ಸೇವೆ ಹಾಗೂ ಮೂಲಸೌಕರ್ಯಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದರು.
ಇದೇ ವೇಳೆ ತಾ.ಪಂ ಅಧಿಕಾರಿ ಕಿರಣ ಪಾಟೀಲ್, ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ್ ಘಾಟೆ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಎಇಇ ಮಾರುತಿ ರಾಠೋಡ, ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್, ಪಿಡಿಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.