ಮುಂಡರಗಿ: ವಿಶೇಷಚೇತನರು, ಹಿರಿಯ ನಾಗರಿಕರು ಮತ್ತು ಗರ್ಭಿಣಿಯರಿಗೆ ಮನರೇಗಾ ಕಾಮಗಾರಿಗಳ ಕೆಲಸದಲ್ಲಿ ವಿನಾಯತಿಯಿದ್ದು, ಸಕ್ರಿಯವಾಗಿ ಕಾಮಗಾರಿಯಲ್ಲಿ ಭಾಗವಹಿಸುವ ಮೂಲಕ ಸೌಲಭ್ಯದ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಪಂ ಇಒ ವಿಜಯಕುಮಾರ ಬೆಣ್ಣೆ ತಿಳಿಸಿದರು.
ಉದ್ಯೋಗ ಖಾತ್ರಿ ಯೋಜನೆಯಲ್ಲಿ ವರ್ಷಕ್ಕೆ 100 ದಿನಗಳವರೆಗೆ ಕೂಲಿಕಾರರಿಗೆ ಕೆಲಸ ನೀಡುತ್ತೇವೆ. ಉದ್ಯೋಗ ಚೀಟಿ ಪಡೆದ ಕುಟುಂಬಗಳಿಗೆ ವರ್ಷಕ್ಕೆ 100 ದಿನಗಳವರೆಗೆ ಕೆಲಸ ಕೊಡಲಾಗುವುದು. ಗ್ರಾಮೀಣ ಭಾಗದ ಕೂಲಿಕಾರರ ಜೀವನಮಟ್ಟ ಸುಧಾರಿಸುವ ಕಾಮಗಾರಿಗಳು ಮನರೇಗಾ ಯೋಜನೆಯಡಿ ಲಭ್ಯವಿದ್ದು, ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದು ಯೋಜನೆಯ ಲಾಭ ಪಡೆಯಿರಿ ಎಂದರು.ಗ್ರಾಮೀಣ ಪ್ರದೇಶದ ಕೂಲಿಕಾರರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳಿಗೆ ಹೆಚ್ಚು ಒತ್ತು ನೀಡಿ ಅಳತೆಗೆ ತಕ್ಕಂತೆ ಕೆಲಸ ನಿರ್ವಹಿಸಿ ಆರ್ಥಿಕ ನೆರವು ಪಡೆದು ಬದುಕು ಬದಲಾಯಿಸಿಕೊಳ್ಳಿ ಎಂದು ಸಲಹೆ ನೀಡಿದರು. ಈ ವೇಳೆ ಪಿಡಿಒ ಮಹೇಶ ಅಲ್ಲಿಪೂರ, ಸೆಕ್ರೆಟರಿ ಅಯ್ಯಪ್ಪ, ನರೇಗಾ ಸಿಬ್ಬಂದಿ ಹಾಗೂ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.ಡಿಪ್ಲೊಮಾ ಕೋರ್ಸ್ ಪ್ರವೇಶ ಅವಧಿ ವಿಸ್ತರಣೆ
ಗದಗ: 2026- 27ನೇ ಶೈಕ್ಷಣಿಕ ಸಾಲಿಗೆ ನರಸಾಪುರದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ತತ್ಸಮಾನ ಪರೀಕ್ಷೆಯಲ್ಲಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಖಾಲಿ ಉಳಿದಿರುವ ಡಿಪ್ಲೊಮಾ ಕೋರ್ಸು ಸೀಟುಗಳಿಗೆ ಪ್ರವೇಶದ ಅವಧಿಯನ್ನು ಜೂ. 30ರ ವರೆಗೆ ವಿಸ್ತರಿಸಲಾಗಿದೆ.ಪ್ರಾಂಶುಪಾಲರ ಹಂತದಲ್ಲಿ ಆಫ್-ಲೈನ್ ಮೂಲಕ ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇರೆಗೆ ಡಿಪ್ಲೊಮಾ ಪ್ರವೇಶ ಪಡೆಯಲು ಅವಧಿ ವಿಸ್ತರಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.