ಶೌಚಗೃಹ ಸದ್ಬಳಕೆ ಮಾಡಿಕೊಳ್ಳಿ

KannadaprabhaNewsNetwork |  
Published : Jul 13, 2025, 01:18 AM IST
ಹೊನ್ನೂರು ಗ್ರಾಪಂನಿಂದ ಶಾಲೆಗೆ ಶೌಚಗೃಹ ನಿರ್ಮಾಣ | Kannada Prabha

ಸಾರಾಂಶ

ತಾಲೂಕಿನ ಹೊನ್ನೂರು ಗ್ರಾಮ ಪಂಚಾಯಿತಿಯಿಂದ ನರೇಗಾ ಯೋಜನೆಯಡಿಯಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿದ ಶೌಚಗೃಹವನ್ನು ಗ್ರಾಪಂ ಅಧ್ಯಕ್ಷ ಎಂ. ಗುರುಪ್ರಸಾದ್ ಉದ್ಘಾಟಿಸಿದರು.

ಯಳಂದೂರು: ತಾಲೂಕಿನ ಹೊನ್ನೂರು ಗ್ರಾಮ ಪಂಚಾಯಿತಿಯಿಂದ ನರೇಗಾ ಯೋಜನೆಯಡಿಯಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿದ ಶೌಚಗೃಹವನ್ನು ಗ್ರಾಪಂ ಅಧ್ಯಕ್ಷ ಎಂ. ಗುರುಪ್ರಸಾದ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ೨೦೨೨-೨೩ ನೇ ಸಾಲಿನ ನರೇಗಾ ಯೋಜನೆಯಡಿಯಲ್ಲಿ ೪.೩೦ ಲಕ್ಷ ರು. ವೆಚ್ಚದಲ್ಲಿ ಸುಸಜ್ಜಿತ ಶೌಚಗೃಹವನ್ನು ನಿರ್ಮಾಣ ಮಾಡಲಾಗಿದೆ. ಈ ಶಾಲೆಗೆ ಶೌಚಗೃಹಬೇಕೆಂದು ಇಲ್ಲಿನ ಶಿಕ್ಷಕರು ಮನವಿ ಸಲ್ಲಿಸಿದ್ದರು. ಹಾಗಾಗಿ ಇದು ಇಲ್ಲಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಿರ್ಮಾಣ ಮಾಡಲಾಗಿದೆ. ಈ ಸಾಲಿನಲ್ಲಿ ೨.೮೯ ಕೋಟಿ ರು. ಕಾಮಗಾರಿ ಮಾಡಲಾಗಿದೆ ಎಂದರು. ಉಪಾಧ್ಯಕ್ಷೆ ನೇತ್ರಾವತಿ ಸದಸ್ಯರಾದ ಆರ್. ಪುಟ್ಟಬಸವಯ್ಯ, ಇಂದಿರಾ, ಎಚ್.ಕೆ. ಶಿವಪ್ರಕಾಶ್, ಎ. ನಾಗರತ್ನಮ್ಮ, ಜಿ. ಅನಿತನಿರಂಜನ್, ಜಯಮ್ಮ, ಭಾಗ್ಯಮ್ಮ, ಟಿ.ಎನ್. ರಾಧಾ, ರಾಧ, ಎಚ್.ಆರ್. ಕುಮಾರ್, ಪಿಡಿಒ ನಿರಂಜನ್‌ಕುಮಾರ್ ಮುಖ್ಯ ಶಿಕ್ಷಕ ಶಿವಮಾದಯ್ಯ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿವೇಗ ಎಂದರೆ ನಿರ್ಲಕ್ಷ್ಯದ ಚಾಲನೆ ಅಲ್ಲ: ಹೈಕೋರ್ಟ್‌
‘ಜಾಹೀರಾತಲ್ಲಿ ಗಾಂಧೀಜಿ ಬಳಕೆ ಗಾಂಧೀಜಿಯರ ಮೌಲ್ಯಗಳ ಹತ್ಯೆ’