ವೃತ್ತಿ ಶಿಕ್ಷಣ ಪ್ರದರ್ಶನ, ಕೆರಿಯರ್ ಮೇಳ ಸದ್ಬಳಕೆಯಾಗಲಿ-ರುಚಿ ಬಿಂದಲ್‌

KannadaprabhaNewsNetwork |  
Published : Mar 24, 2026, 01:45 AM IST
ಹಾವೇರಿ ಸ್ಥಳೀಯ ಇಜಾರಿಲಕಮಾಪೂರ ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜಿನಲ್ಲಿ ಏರ್ಪಡಿಸಿದ್ದ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳವನ್ನು ಜಿಪಂ ಸಿಇಒ ರುಚಿ ಬಿಂದಲ್ ಉದ್ಘಾಟಿಸಿದರು. | Kannada Prabha

ಸಾರಾಂಶ

ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇದೊಂದು ಒಳ್ಳೆಯ ಸುವರ್ಣ ಅವಕಾಶವಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್ ಹೇಳಿದರು.

ಹಾವೇರಿ: ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇದೊಂದು ಒಳ್ಳೆಯ ಸುವರ್ಣ ಅವಕಾಶವಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್ ಹೇಳಿದರು. ಸ್ಥಳೀಯ ಇಜಾರಿಲಕಮಾಪೂರ ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜಿನಲ್ಲಿ ಸೋಮವಾರ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಹಂತದ ವಿದ್ಯಾರ್ಥಿಗಳಿಗೆ ಅವರ ಸಾಮರ್ಥ್ಯ ಮತ್ತು ಆಸಕ್ತಿಗಳಿಗೆ ಅನುಗುಣವಾಗಿ ವೃತ್ತಿ ಪ್ರಪಂಚದ ಅರಿವು ಮತ್ತು ಆಯ್ಕೆಗಳ ಮಾರ್ಗದರ್ಶನ ನೀಡಲು ಆಯೋಜಿಸಲಾದ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ವಿವಿಧ ವೃತ್ತಿಪರ ಕೋರ್ಸಗಳು ಮತ್ತು ಲಭ್ಯವಿರುವ ಉದ್ಯೋಗವಕಾಶಗಳ ಬಗ್ಗೆ ಅರಿವು ಮೂಡಿಸುವುದು, 12ನೇ ತರಗತಿಯ ನಂತರದ ವಿವಿಧ ಪ್ರವೇಶ ಪರೀಕ್ಷೆಗಳ (ಸಿಇಟಿ, ನೀಟ್, ಜೆಇಇ ಇತ್ಯಾದಿ) ಬಗ್ಗೆ ಮಾಹಿತಿ ನೀಡುವುದು, ವಿವಿಧ ಕೋರ್ಸಗಳಿಗೆ ಇಲಾಖೆಯಿಂದ ಲಭ್ಯವಿರುವ ಆರ್ಥಿಕ ನೆರವು, ಜಿಲ್ಲೆಯಲ್ಲಿ ಲಭ್ಯವಿರುವ ಇಲಾಖಾ ವಸತಿ ನಿಲಯಗಳ ವಿವರ, ಯುವಕರಿಗೆ/ವಿದ್ಯಾರ್ಥಿಗಳಿಗೆ ಇಲಾಖೆ ವತಿಯಿಂದ ನೀಡಲಾಗುವ ವೃತ್ತಿಪರ ತರಬೇತಿಗಳು, ಉದ್ಯಮಶೀಲತೆ ಅಥವಾ ಉನ್ನತ ವ್ಯಾಸಂಗಕ್ಕೆ ನೀಡಲಾಗುವ ಇತರೆ ಇಲಾಖಾ ಸೌಲಭ್ಯಗಳ ಮಾಹಿತಿ ನೀಡುವುದು ಈ ಮೇಳದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್., ಅವರು ವೃತ್ತಿ ಮೇಳದ ಮಳಿಗೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿ, ಮುಂದಿನ ಭವಿಷ್ಯದಲ್ಲಿ ತಮ್ಮ ವಿದ್ಯಾಭ್ಯಾಸದಲ್ಲಿ ಅಭಿರುಚಿ ಮತ್ತು ಆಸಕ್ತಿಯ ಮೇರೆಗೆ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಬೇಕು, ಉತ್ತಮ ಭವಿಷಯ್ಯಕ್ಕಾಗಿ ಪ್ರಯತ್ನ ಹಾಗೂ ಪರಿಶ್ರಮ ಪಡಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಮೇಳದಲ್ಲ್ಲಿ ಒಟ್ಟು 19 ಮಾರ್ಗದರ್ಶನ ಕೇಂದ್ರಗಳನ್ನು ತೆರೆದು, ಮೇಳಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಮತ್ತು ಪದವಿ ಪೂರ್ವ ಶಿಕ್ಷಣದ ನಂತರದ ಕೌಶಲ್ಯಯುತವಾದ ಕೋರ್ಸಗಳ ಬಗ್ಗೆ ಮತ್ತು ಸ್ವಯಂ ಉದ್ಯೋಗ ಕೈಗೊಳ್ಳಲು ಯಾವ ತರಬೇತಿಗಳನ್ನು ಆಯ್ಕೆ ಮಾಡಿದಲ್ಲಿ ಯಶಸ್ವಿಯಾಗಿ ನಿರ್ವಹಣೆ ಮಾಡಬಹುದು ಎಂಬುದರ ಬಗ್ಗೆ ಪರಿಣಿತರು ಮಾರ್ಗದರ್ಶನ ನೀಡಿದರು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕ ಹಾಗೂ ಪ್ರಾಂಶುಪಾಲ ಝಡ್ ಎಂ ಖಾಜಿ, ಕಾರ್ಯಕ್ರಮದ ಹಿರಿಯ ಉಪನ್ಯಾಸಕ ಹಾಗೂ ನೋಡಲ್ ಅಧಿಕಾರಿ ಮೌನೇಶ ಬಡಿಗೇರ ಹಾಗೂ ಸಂಸ್ಥೆಯ ಎಲ್ಲ ಉಪನ್ಯಾಸಕರು ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಭ್ರಮದ ಸಿಂಗಟಾಲೂರು ವೀರಭದ್ರೇಶ್ವರ ರಥೋತ್ಸವ
ಕಾಡಾನೆ ಹಾವಳಿ ತಡೆಗೆ ಹೆಚ್ಚುವರಿ ಕಂದಕ ನಿರ್ಮಾಣಕ್ಕೆ ಕ್ರಮ:ಖಂಡ್ರೆ