ಕನ್ನಡಪ್ರಭ ವಾರ್ತೆ ಇಂಡಿ
ನಗರದ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ನಡೆದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಮತ್ತು ಕರ ವಸೂಲಿಗಾರರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಡಿಮೆ ಕರ ವಸೂಲಾತಿ ಮಾಡಿದ ಗ್ರಾಮ ಪಂಚಾಯಿತಿಗಳಲ್ಲಿ ಜಾಗೃತಿ ಜಾಥಾದ ಮೂಲಕ ಕರವಸೂಲಾತಿ ಹೆಚ್ಚಿಸಬೇಕು. ಸ್ವಚ್ಛ ವಾಹಿನಿ ಆಟೋ ಮೂಲಕ ಹೆಚ್ಚು ಹೆಚ್ಚು ಪ್ರಚಾರಗೊಳಿಸಿ, ಕರ ವಸೂಲಾತಿ ಕಡಿಮೆ ಇರುವ ಗ್ರಾಮ ಪಂಚಾಯಿತಿಗಳು ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದು ಸೂಚನೆ ನೀಡಿದರು.ತಾಲೂಕಿನ 38 ಗ್ರಾಮ ಪಂಚಾಯಿತಿಗಳಲ್ಲಿ ಇಲ್ಲಿವರೆಗೆ ಶೇ.64.75 ರಷ್ಟು ಪ್ರಗತಿ ಸಾಧಿಸಲಾಗಿದ್ದು, ಗ್ರಾಮ ಪಂಚಾಯಿತಿವಾರು ಪ್ರಗತಿಗೆ ಹೋಲಿಸಿದಾಗ ಖೇಡಗಿ, ಹಡಲಸಂಗ್ , ತೆನಿಹಳ್ಳಿ, ಚಿಕ್ಕ ಬೆವನೂರ , ಅಗರಖೇಡ, ಹಿರೇ ಬೇವನೂರ, ಗುಬ್ಬೇವಾಡ, ಭತಗುಣಕಿ, ನಿಂಬಾಳ ಕೆಡಿ ಮತ್ತು ಹೊರ್ತಿ ಗ್ರಾಮ ಪಂಚಾಯಿತಿಗಳು ಬಹಳ ಕಡಿಮೆ ಪ್ರಗತಿ ಸಾಧಿಸಲಾಗಿದೆ. ಕಡಿಮೆ ಕರ ವಸೂಲಾತಿ ಮಾಡಿದ ಗ್ರಾಮ ಪಂಚಾಯಿತಿಗಳಲ್ಲಿ ಜಾಥಾ ಮೂಲಕ, ಟಂಟಂ ಮೂಲಕ, ಸ್ವಚ್ಛ ವಾಹಿನಿ ಆಟೋ ಮೂಲಕ ಹೆಚ್ಚು ಹೆಚ್ಚು ಪ್ರಚಾರಗೊಳಿಸಬೇಕು. ಹಾಗೆಯೇ ಹಾಗೆಯೇ ಪ್ರತಿ ಮನೆ ಮನೆಗೂ ಭೇಟಿ ನೀಡಿ ಗ್ರಾಮಸ್ಥರ ಮನ ಒಲಿಸಿ, ಹೆಚ್ಚಿನ ತೆರಿಗೆ ಸಂಗ್ರಹಣೆ ಮಾಡಲು ಸೂಚನೆ ನೀಡಿದ ಅವರು, ಒಂದು ತಿಂಗಳೊಳಗೆ ಕಡ್ಡಾಯವಾಗಿ ಶೇ.100 ರಷ್ಟು ಕರವಸೂಲಾತಿ ಹೆಚ್ಚಾಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಲಾಳಸಂಗಿ ಮತ್ತು ಬಬಲಾದ ಗ್ರಾಮ ಪಂಚಾಯಿತಿಗಳು ಶೇ.100 ರಷ್ಟು ಹೆಚ್ಚು ಪ್ರಗತಿ ಸಾಧಿಸಲಾಗಿದೆ.
ಕರ ವಸೂಲಾತಿಯಲ್ಲಿ ಕಡಿಮೆ ಪ್ರಗತಿ ಸಾಧಿಸಿದ ಪಿಡಿಒ ಹಾಗೂ ಬಿಲ್ ಕಲೆಕ್ಟರ್‌ಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಯೋಜನಾಧಿಕಾರಿ ನಂದೀಪ ರಾಠೋಡ , ವ್ಯವಸ್ಥಾಪಕ ಮುರುಗೇಶ ನಾರಾಯಣಪುರ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಇತರರಿದ್ದರು.