ಅತಿಥಿ ಶಿಕ್ಷಕ, ಉಪನ್ಯಾಸಕರನ್ನು ಕಾಯಂ ಮಾಡಿ

KannadaprabhaNewsNetwork |  
Published : Oct 20, 2025, 01:02 AM IST
ಅತಿಥಿ ಶಿಕ್ಷಕರು, ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ಹೋರಾಟ | Kannada Prabha

ಸಾರಾಂಶ

ಅತಿಥಿ ಶಿಕ್ಷಕರು, ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ಮಾಡಬೇಕಾಗುತ್ತದೆ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಎನ್.ಎಸ್. ಮಂಜುನಾಥ ಪ್ರಸಾದ್ ಎಚ್ಚರಿಸಿದರು.

ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಹೋರಾಟ: ಮಂಜುನಾಥ ಪ್ರಸಾದ್ಕನ್ನಡಪ್ರಭ ವಾರ್ತೆ, ಜಾಮರಾಜನಗರ

ಅತಿಥಿ ಶಿಕ್ಷಕರು, ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ಮಾಡಬೇಕಾಗುತ್ತದೆ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಎನ್.ಎಸ್. ಮಂಜುನಾಥ ಪ್ರಸಾದ್ ಎಚ್ಚರಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ರಜೆ, ಮಧ್ಯಂತರ ರಜೆ ಅವಧಿಯಲ್ಲಿ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಪೂರ್ಣ ಪ್ರಮಾಣದ ಗೌರವ ಧನವನ್ನು ನೀಡಬೇಕೆಂದು ಶಾಲೆ ಶಿಕ್ಷಣ ಇಲಾಖೆಯಲ್ಲಿ ಆದೇಶಿಸಿದೆ ಕ್ರೈಸ್ ಸಂಸ್ಥೆಯು ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಪೂರ್ಣ ಪ್ರಮಾಣದ ಗೌರವ ಧನವನ್ನು ನೀಡಬೇಕು, ಸಂವಿಧಾನದಲ್ಲಿ ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಕ್ಕೆ ಅವಕಾಶ ಇಲ್ಲ ಆದರೂ ಸರ್ಕಾರ ಮಾಡಿದೆ. ಇದನ್ನು ಕೈ ಬಿಟ್ಟು ಖಾಯಂ ಮಾಡಬೇಕೆಂದು ಒತ್ತಾಯಿಸಿದರು. ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರು ಹಲವು ವರ್ಷಗಳಿಂದ ಕನಿಷ್ಠ ಗೌರವ ಧನದಲ್ಲಿ ಸೇವೆ ಸಲ್ಲಿಸುತ್ತಿದ್ದು ಪ್ರಸ್ತುತ ಗೌರವ ಧನ ₹೧೬೬೫೦, ₹೧೮೧೫೦ ಮಾತ್ರವಾಗಿದ್ದು ದಿನ ನಿತ್ಯ ಖರ್ಚು, ಕುಟುಂಬ ನಿರ್ವಹಣೆ ಮಕ್ಕಳ ಪಾಲನೆ ಪೋಷಣೆ ತುಂಬಾ ಕಷ್ಟಕರವಾಗಿದೆ. ಉಲ್ಲೇಖ ೩ ರಂತೆ ಜವಾಹರ್ ನವೋದಯ ಮಾದರಿಯಲ್ಲಿ ವೇತನ ಪಿ.ಜಿ.ಟಿ ₹೩೫,೭೦೦ ರಿಂದ ₹೪೨,೨೫೦ ಟಿಜಿಟಿ ₹೩೪,೧೨೫ ರಿಂದ ₹೪೦೬೨೫ ರಂತೆ ಕ್ರೈಸ್ ಸಂಸ್ಥೆಯಲ್ಲಿ ಅದೇ ಮಾದರಿಯಲ್ಲಿ ವೇತನ ನೀಡುವಂತೆ ಆಗ್ರಹಿಸಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಪ್ರತಿ ತಿಂಗಳು ೫ನೇ ತಾರೀಖಿನೊಳಗೆ ಗೌರವ ಧನವನ್ನು ಶಿಕ್ಷಕದ ಖಾತೆಗೆ ಜಮಾ ಮಾಡಿಸಿಕೊಡಬೇಕು, ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರುಗಳಿಗೆ ಏಪ್ರಿಲ್, ಮೇ ಮತ್ತು ಅಕ್ಟೋಬರ್ ಮಾಹೆಯ ಪೂರ್ಣ ಗೌರವ ಧನವನ್ನು ನೀಡುವುದು. ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರುಗಳ ಮಕ್ಕಳಿಗೆ ಪ್ರವೇಶ ಪರೀಕ್ಷೆಯಿಲ್ಲದೆ ತಮ್ಮ ಅಧೀನದಲ್ಲಿ ಬರುವ ಶಾಲೆ ಮತ್ತು ಕಾಲೇಜುಗಳಲ್ಲಿ ನೇರ ದಾಖಲಾತಿಗೆ ಅವಕಾಶ ಕಲ್ಪಿಸಿಕೊಡಬೇಕು ಆಗ್ರಹಿಸಿದರು.

೨೦೨೫-೨೬ ನೇ ಸಾಲಿನ ಆಯವ್ಯಯ ಘೋಷಣೆ ಸಂಖ್ಯೆ ೧೪೦ ರಲ್ಲಿ ಘೋಷಿಸಿರುವಂತೆ ಗೌರವ ಧನದ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ಹಾಗು ಅವಲಂಬಿತರಿಗೂ ₹೫ ಲಕ್ಷದವರೆಗೆ ನಗದು ರಹಿತ ಆರೋಗ್ಯ ಭರವಸೆ (ಎನ್.ಪಿ.ಇ) ಯನ್ನು ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಅನುಷ್ಠಾನಗೊಳಿಸಬೇಕು. ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರು ಅಪಘಾತಕ್ಕೀಡಾದಾಗ ಅಥವಾ ಅಕಾಲಿಕ ಮರಣ ಹೊಂದಿದಾಗ ಅವರ ಕುಟುಂಬಕ್ಕೆ ಇಲಾಖೆ ವತಿಯಿಂದ ಕನಿಷ್ಠ ₹೫ ಲಕ್ಷ ಆರ್ಥಿಕ ನೆರವು ನೀಡಬೇಕು. ಕ್ರೈಸ್‌ನ ಎಲ್ಲಾ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತ ಅತಿಥಿ ಉಪನ್ಯಾಸಕರಿಗೆ ಮುಂದಿನ ನೇಮಕಾತಿಯಲ್ಲಿ ವಾರ್ಷಿಕ ಶೇ. ೫ ರಷ್ಟು ಕೃಪಾಂಕ ನೀಡಬೇಕು.

ಘನ ನ್ಯಾಯಾಲಯದ ಆದೇಶದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರನ್ನು ಇಲಾಖೆ ಇಲಾಖೆಯ ನೇರ ನೇಮಕಾತಿಯಾಗುವ ತನಕ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಶಾಲೆ ಮತ್ತು ಕಾಲೇಜುಗಳಲ್ಲಿ ಮುಂದುವರಿಸಬೇಕು. ಈ ಎಲ್ಲಾ ಬೇಡಿಕೆಗಳನ್ನು ಚಳಿಗಾಲದಲ್ಲಿ ಅಧಿವೇಶನದಲ್ಲಿ ಈಡೇರಿಸಬೇಕು ಇಲ್ಲದಿದ್ದರೆ ತರಗತಿ ಬಹಿಷ್ಕರಿಸಿ ಆಯಾಯ ಜಿಲ್ಲೆಗಳಲ್ಲಿ ಜಿಲ್ಲಾಡಳಿತ ಮುಂಭಾಗದಲ್ಲಿ ಹಾಗೂ ಬೆಂಗಳೂರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಸಂಘ ಪ್ರಧಾನ ಕಾರ್ಯದರ್ಶಿ ಮಹಾದೇವಸ್ವಾಮಿ, ಉಪಾಧ್ಯಕ್ಷ ಎಂ.ಹರೀಶ್, ಖಜಾಂಚಿ ಎಸ್.ಆರ್.ಭರತ ಕುಮಾರ್, ಸಹಕಾರ್ಯದರ್ಶಿ ಎಚ್.ಎಂ.ಕಾವ್ಯ, ಸಂಘಟನಾ ಕಾರ್ಯದರ್ಶಿ ಎಂ.ಕೆ.ರವೀಶ, ಶಶಿಕುಮಾರ್, ರವಿ, ವನಶ್ರೀ ,ಮಹಾದೇವಸ್ವಾಮಿ ಇದ್ದರು.೧೯ಸಿಎಚ್‌ಎನ್೧ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ವಸತಿ ಶಿಕ್ಷಣ ಸಂಸ್ಥೆಗಳ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಎನ್.ಎಸ್. ಮಂಜುನಾಥ ಪ್ರಸಾದ್ ಮಾತನಾಡಿದರು.

PREV

Recommended Stories

ಖಾಸಗಿ ಸಂಘಟನೆಗಳಿಗೆ ನಿಷೇಧ ಹೇರಿದ್ದು ಜಗದೀಶ್‌ ಶೆಟ್ಟರ್‌ : ಪರಂ
ಕರ್ನಾಟಕಕ್ಕೆ ₹385 ಕೋಟಿ ಕೇಂದ್ರೀಯ ನೆರೆ ಪರಿಹಾರ