ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವಾಗಲಿ: ಶಾಸಕ ಹೆಬ್ಬಾರ

KannadaprabhaNewsNetwork |  
Published : Sep 02, 2024, 02:00 AM IST
ಕಾರ್ಯಕ್ರಮಕ್ಕೆ ಶಾಸಕ ಶಿವರಾಮ ಹೆಬ್ಬಾರ ಚಾಲನೆ ನೀಡಿದರು. | Kannada Prabha

ಸಾರಾಂಶ

ಸಮಾಜದಲ್ಲಿ ಪ್ರತಿಭಾವಂತರನ್ನು ಗುರುತಿಸುವ ಕಾರ್ಯವಾಗಬೇಕು. ಸಮಾಜದಲ್ಲಿ ಸಾಕಷ್ಟು ಪ್ರತಿಭಾವಂತರಿದ್ದಾರೆ. ಅಂತಹ ಎಲ್ಲ ಸಾಧಕರು ಇನ್ನೂ ಹೆಚ್ಚು ಸಾಧನೆ ಮಾಡಲಿ ಎಂದು ಆಶಿಸಿದರು.

ಯಲ್ಲಾಪುರ: ಬ್ರಾಹ್ಮಣ ಸಂಘಟನೆ ಇದ್ದರೂ ಸಮಾಜದ ಎಲ್ಲ ವರ್ಗದ ಪ್ರತಿಭಾವಂತರಿಗೆ ಪುರಸ್ಕರಿಸುವ ಸಂಘಟನೆ ಆದರ್ಶಪ್ರಾಯವಾದುದ್ದು ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.ಸೆ. 1ರಂದು ಟಿಎಂಎಸ್ ಸಭಾಭಭವನದಲ್ಲಿ ಹವ್ಯಕ ನೌಕರರ ಕ್ಷೇಮಾಭಿವೃದ್ಧಿ ಸಂಸ್ಥೆ ಹಮ್ಮಿಕೊಂಡ ನಿವೃತ್ತ ನೌಕರರ ಸನ್ಮಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಇಂತಹ ಪರಂಪರೆ ಬೆಳೆಯಬೇಕು. ಸಮಾಜದಲ್ಲಿ ಪ್ರತಿಭಾವಂತರನ್ನು ಗುರುತಿಸುವ ಕಾರ್ಯವಾಗಬೇಕು. ಸಮಾಜದಲ್ಲಿ ಸಾಕಷ್ಟು ಪ್ರತಿಭಾವಂತರಿದ್ದಾರೆ. ಅಂತಹ ಎಲ್ಲ ಸಾಧಕರು ಇನ್ನೂ ಹೆಚ್ಚು ಸಾಧನೆ ಮಾಡಲಿ ಎಂದು ಆಶಿಸಿದರು.ರಾಜ್ಯ ವಿಕೇಂದ್ರಿಕರಣ, ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರಮೋದ್ ಹೆಗಡೆ ಮಾತನಾಡಿ, ನಾವು ಸಂಘಟನೆ ಮೂಲಕ ಎಲ್ಲ ಸಮಾಜಕ್ಕೂ ಆದರ್ಶರಾಗಬೇಕು ಎಂದರು.

ತಹಸೀಲ್ದಾರ್ ಅಶೋಕ್ ಭಟ್ ಮಾತನಾಡಿ, ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ, ಪರಂಪರೆಯನ್ನು ಮುಂದಿನ ತಲೆಮಾರಿಗಾಗಿ ನೀಡಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್. ಹೆಗಡೆ ಮಾತನಾಡಿ, ಸಂಘಟನೆ ಇದ್ದಾಗ ಮಾತ್ರ ಯಾವುದೇ ಸಮಾಜದ ಶಕ್ತಿಯುತವಾಗುತ್ತದೆ. ನಮ್ಮಲ್ಲಿ ಪ್ರತಿಭಾವಂತರಿಗೆ ಕೊರತೆ ಇಲ್ಲ ಎಂದರು.

ಆರಕ್ಷಕ ಉಪನಿರೀಕ್ಷಕ ನಿರಂಜನ ಹೆಗಡೆ ಮಾತನಾಡಿದರು. ಟಿಎಂಎಸ್ ಅಧ್ಯಕ್ಷ ಎನ್.ಕೆ. ಭಟ್ ಅಗ್ಗಾಶಿಕುಂಬ್ರಿ, ಮಲೆನಾಡು ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಅಧ್ಯಕ್ಷ ಎಂ.ಆರ್. ಹೆಗಡೆ ಕುಂಬ್ರಿಗುಡ್ಡೆ ಮತ್ತು ಸನ್ಮಾನ ಸ್ವೀಕರಿಸಿದ ನಿವೃತ್ತ ಅಧಿಕಾರಿ ವಿ.ಎಂ. ಭಟ್, ಪ್ರತಿಭಾವಂತ ವಿದ್ಯಾರ್ಥಿ ರವಿಕಿರಣ ಹೆಗಡೆ ಮಾತನಾಡಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್. ಭಟ್ ಉಪಸ್ಥಿತರಿದ್ದರು. ಹವ್ಯಕ ನೌಕರರ ಸಂಘದ ಅಧ್ಯಕ್ಷ ಡಿ.ಜಿ. ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಉಮ್ಮಚಗಿ ಪಾಠಶಾಲಾ ವಿದ್ಯಾರ್ಥಿ ಗಣಪತಿ ಭಟ್ ವೇದಘೋಷ ಪಠಿಸಿದರು. ಸಮೃದ್ಧಿ ಭಾಗ್ವತ್ ಪ್ರಾರ್ಥಿಸಿದರು. ಸಂಘದ ಉಪಾಧ್ಯಕ್ಷೆ ಮುಕ್ತಾಶಂಕರ್ ಸ್ವಾಗತಿಸಿದರು. ಶಿಕ್ಷಕರಾದ ಸಣ್ಣಪ್ಪ ಭಾಗ್ವತ್, ನಾಗರಾಜ ಹೆಗಡೆ ನಿರ್ವಹಿಸಿದರು. ಶ್ರೀಧರ ಹೆಗಡೆ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಿಥಿ ಚಿತ್ರದ ನಟ ‘ಸೆಂಚುರಿ’ಗೌಡ ಸೊಂಟದ ಮೂಳೆ ಮುರಿದು ನಿಧನ
ರಾಜ್ಯ ರಾಜಕಾರಣದಲ್ಲಿ ನನ್ನ ಕ್ಷೇತ್ರ ಚಾಮರಾಜನಗರ : ಪ್ರತಾಪ್‌ ಸಿಂಹ