ಹಡಪದ ಅಪ್ಪಣ್ಣ ಜಯಂತಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಕ್ಯಾ. ಮಹೇಶ್ ಮಾಲಗಿತ್ತಿ

KannadaprabhaNewsNetwork |  
Published : Jul 17, 2024, 12:49 AM IST
ಹಡಪದ ಅಪ್ಪಣ್ಣ ಜಯಂತಿ ಆಚರಣೆ ಅಂಗವಾಗಿ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ಜಿಲ್ಲಾ ಕೇಂದ್ರದಲ್ಲಿ ಜು. 21ರಂದು ಜಿಲ್ಲಾಡಳಿತದಿಂದ ಆಚರಿಸಲಾಗುವ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು.

ಹಡಪದ ಅಪ್ಪಣ ಜಯಂತಿ: ಪೂರ್ವಭಾವಿ ಸಭೆಯಲ್ಲಿ ಸಹಾಯಕ ಆಯುಕ್ತ

ಕನ್ನಡಪ್ರಭ ವಾರ್ತೆ ಕೊಪ್ಪಳ

ಜಿಲ್ಲಾ ಕೇಂದ್ರದಲ್ಲಿ ಜು. 21ರಂದು ಜಿಲ್ಲಾಡಳಿತದಿಂದ ಆಚರಿಸಲಾಗುವ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಅಂಗವಾಗಿ ಚರ್ಚಿಸಲು ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರ ನಿಗದಿಪಡಿಸಿದಂತೆ ಜು. 21ರಂದು ಜಿಲ್ಲಾ ಕೇಂದ್ರದಲ್ಲಿ ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ, ತಾಲೂಕು ಕಚೇರಿ, ಶಾಲಾ, ಕಾಲೇಜು, ವಸತಿ ನಿಲಯಗಳಲ್ಲಿ ಜಯಂತಿ ಆಚರಣೆ ಮಾಡಲಾಗುತ್ತದೆ. ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಿ ವ್ಯವಸ್ಥಿತ ಜಯಂತಿ ಆಚರಣೆಗೆ ಸಮಾಜದ ಬಂಧುಗಳು ಸಹಕರಿಸಬೇಕು. ಹಾಗೆಯೇ ಜಯಂತಿ ಆಚರಣೆಗೆ ಸಂಬಂಧಿಸಿದ ಇಲಾಖೆಗಳು ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.

ಜು. 21ರಂದು ಬೆಳಗ್ಗೆ 9 ಗಂಟೆಗೆ ನಗರದ ಶ್ರೀ ಮಹೇಶ್ವರ ದೇವಸ್ಥಾನ ಕೋಟೆ ರಸ್ತೆ ಆವರಣದಿಂದ ಗಡಿಯಾರ ಕಂಬ ಮಾರ್ಗವಾಗಿ ಸಾಹಿತ್ಯ ಭವನದವರೆಗೆ ಹಡಪದ ಅಪ್ಪಣ್ಣ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮೆರವಣಿಗೆ ಸಾಗುವ ಮಾರ್ಗ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸಾಹಿತ್ಯ ಭವನದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆ ಕಲ್ಪಿಸಬೇಕು. ವೇದಿಕೆ ಅಲಂಕಾರ, ಗಣ್ಯರಿಗೆ ಪುಸ್ತಕ ವಿತರಣೆ, ಪೂಜೆಗೆ ಹೂವು, ಹಾರಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಒದಗಿಸಬೇಕು. ಪೊಲೀಸ್ ಇಲಾಖೆಯಿಂದ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸಾಹಿತ್ಯ ಭವನದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಬೇಕು. ಉಳಿದಂತೆ ಸಂಬಂಧಿಸಿದ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಜಯಂತಿ ಆಚರಣೆಗೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಸಮಾಜದ ಮುಖಂಡರಾದ ಮಂಜುನಾಥ ಹಂದ್ರಾಳ, ಬಸಪ್ಪ ಹಲಗೇರಿ, ರಮೇಶ ಹಡಪದ, ಬಸವರಾಜ ಹೊಸಳ್ಳಿ, ಗವಿಸಿದ್ದಪ್ಪ ಕಾಟ್ರಳ್ಳಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮುದಾಯದವರು ಉಪಸ್ಥಿತರಿದ್ದರು.

PREV

Recommended Stories

ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ಹಣೆಯಲ್ಲಿ ಬರೆದಿದ್ದರೆ ಡಿಕೆಶಿ ಸಿಎಂ ಆಗ್ತಾರೆ ಇಲ್ದಿದ್ರೆ ಇಲ್ಲ : ಡಿಕೆಸು