ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಿದ್ಧತೆ ಕುರಿತ ಜಿಲ್ಲಾ ಮಟ್ಟದ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿದರು.
ಅಪರ ಜಿಲ್ಲಾಧಿಕಾರಿಗಳು, ಜಿ.ಪಂ. ಉಪ ಕಾರ್ಯದರ್ಶಿ, ಪಾಲಿಕೆ ಆಯುಕ್ತರು ಹಾಗೂ ಶಿವಮೊಗ್ಗ ತಹಸೀಲ್ದಾರರು ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಮುದ್ರಣಗೊಂಡ ಆಹ್ವಾನ ಪತ್ರಿಕೆಗಳನ್ನು ಸಮಾರಂಭದ ಅತಿಥಿಗಳು, ಜನಪ್ರತಿನಿಧಿಗಳು, ಸರ್ಕಾರಿ ಕಚೇರಿಗಳು, ಸಂಘ-ಸಂಸ್ಥೆಗಳು, ಕನ್ನಡ ಸಂಘಟನೆಗಳು ಹಾಗೂ ನಾಗರೀಕರಿಗೆ ಜಾರಿ ಮಾಡಲು ಸೂಚಿಸಿದರು.ನ.1 ರಂದು ಬೆಳಗ್ಗೆ 8 ಗಂಟೆಯಿಂದ ನಗರದ ಸೈನ್ಸ್ ಮೈದಾನದಿಂದ ಮೆರವಣಿಗೆ ಹೊರಡುವುದು. ಮೆರವಣಿಗೆಯಲ್ಲಿ ಪೊಲೀಸ್, ಗೃಹರಕ್ಷಕ ದಳ, ಸೇವಾದಳ, ಎನ್‌ಸಿಸಿ ಬ್ಯಾಂಡ್, ಡೊಳ್ಳುಕುಣಿತ, ವೀರಗಾಸೆ, ಕೋಲಾಟ, ಭಜನೆ ಸೇರಿದಂತೆ ವಿವಿಧ ತಂಡಗಳು ಭಾಗವಹಿಸಲು ಸೂಕ್ತ ವ್ಯವಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ತಲಾ ಎರಡು ಕಲಾ ತಂಡಗಳನ್ನು ಕಳುಹಿಸಿಕೊಂಡುವಂತೆ ತಿಳಿಸಿದರು.
ಕೃಷಿ ಇಲಾಖೆ, ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪ್ರವಾಸೋದ್ಯಮ, ಯೋಜನಾ ನಿರ್ದೇಶಕರು ನಗರಾಭಿವೃದ್ಧಿ ಕೋಶ, ಸಹಾಯಕ ನಿರ್ದೇಶಕರು ಪ್ರವಾಸೋದ್ಯಮ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಧಿಕಾರಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ, ಕೆಎಸ್‌ಆರ್‌ಟಿಸಿ, ಆರೋಗ್ಯ ಇಲಾಖೆಯವರು ಟ್ಯಾಬ್ಲೋಗಳನ್ನು ತಯಾರಿಸಿ ಪ್ರದರ್ಶಿಸಬೇಕು ಎಂದು ಸೂಚಿಸಿದರು.
ಶಾಲಾ ಮಕ್ಕಳನ್ನು ಮೆರವಣಿಗೆಯಲ್ಲಿ ಕರೆತರಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ರೂಟ್ ಮ್ಯಾಪ್ ತಯಾರಿಸಿ ನಿರ್ವಹಿಸಬೇಕು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು. ಮೈದಾನದಲ್ಲಿ ಷಾಮಿಯಾನ, ಉತ್ತಮ ಸೌಂಡ್ ಸಿಸ್ಟಂ ಇತರೆ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆ, ಆಸನ ವ್ಯವಸ್ಥೆಯನ್ನು ತಹಸೀಲ್ದಾರರು, ಪಾಲಿಕೆಯವರು ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಪಾಲನೆ ಮತ್ತು ನಿರ್ವಹಣೆ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಿ ಹಂಚಿಕೆಯನ್ನು ಶಿಮುಲ್, ಪಾಲಿಕೆ, ಡಿಡಿಪಿಐ ನೋಡಿಕೊಳ್ಳುವಂತೆ ತಿಳಿಸಿದರು.ಪ್ರಮುಖ ರಸ್ತೆಯ ವೃತ್ತಗಳಿಗೆ ವಿದ್ಯುತ್ ಅಲಂಕಾರವನ್ನು ಮೆಸ್ಕಾಂ, ಪಾಲಿಕೆ ಆಯುಕ್ತರು, ಸೂಡಾ ಆಯುಕ್ತರು ಹಾಗೂ ಧ್ವನಿ ವರ್ಧಕದ ಮೂಲಕ ಕನ್ನಡ ದೇಶಭಕ್ತಿ ಗೀತೆಗಳನ್ನು ಪ್ರಸಾರ ಮಾಡುವ ವವಸ್ಥೆಯನ್ನು ಅಬಕಾರಿ ಇಲಾಖೆ, ನೋಂದಣಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯವರು ನೋಡಿಕೊಳ್ಳಬೇಕು ಎಂದು ತಿಳಿಸಿದರು.ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ಕುವೆಂಪು ರಂಗಮಂದಿರದಲ್ಲಿ ನಡೆಯಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ, ಪಾಲಿಕೆ ಆಯುಕ್ತರು ನಿರ್ವಹಿಸಬೇಕು. ಆಂಬುಲೆನ್ಸ್ ಮತ್ತು ಅಗ್ನಿಶಾಮಕ ವಾಹನ ವ್ಯವಸ್ಥೆಯನ್ನು ಜಿಲ್ಲಾ ಸರ್ಜನ್ ಹಾಗೂ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ನಿರ್ವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಕವಿತಾ ಯೋಗಪ್ಪನವರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.