ಕನ್ನಡಪ್ರಭ ವಾರ್ತೆ ಬೆಳಗಾವಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ವಿಧಾನಮಂಡಳ ಚಳಿಗಾಲ ಅಧಿವೇಶನದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಬಾರಿಯ ಚಳಿಗಾಲ ಅಧಿವೇಶನ ಸಿದ್ಧತೆಗೆ ಕಡಿಮೆ ಸಮಯಾವಕಾಶವಿದ್ದು, ಅಧಿವೇಶನ ಯಶಸ್ವಿಗಾಗಿ ಅಧಿಕಾರಿಗಳು, ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದರು.ಅಧಿವೇಶನ ಯಶಸ್ವಿಗಾಗಿ ಈಗಾಗಲೇ ವಸತಿ, ಆಹಾರ, ಸಾರಿಗೆ, ಆರೋಗ್ಯ, ದೂರು ನಿರ್ವಹಣೆ ಸೇರಿದಂತೆ ವಿವಿಧ ಸಮಿತಿ ರಚಿಸಲಾಗಿದೆ. ಸಮಿತಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಯಾವುದೇ ಲೋಪದೋಷ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ವೈದ್ಯಕೀಯ ತಂಡಗಳ ನಿಯೋಜನೆ:
ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ಅಧಿವೇಶನಕ್ಕೆ ಆಗಮಿಸಿದ ಎಲ್ಲರ ಆರೋಗ್ಯ ರಕ್ಷಣೆ ಹಾಗೂ ತುರ್ತು ವೈದ್ಯಕೀಯ ಸೌಲಭ್ಯ ಕಲ್ಪಿಸಲು ಅನುಕೂಲವಾಗುವಂತೆ ಎಲ್ಲ ವಸತಿ ಸ್ಥಳ ಮತ್ತು ಸುವರ್ಣ ವಿಧಾನಸೌಧದಲ್ಲಿ ತುರ್ತು ವೈದ್ಯಕೀಯ ತಂಡ ಮತ್ತು ಅಂಬ್ಯುಲೆನ್ಸ್ ನಿಯೋಜಿಸಬೇಕು ಎಂದು ಸೂಚನೆ ನೀಡಿದರು.ಒಟ್ಟಾರೆಯಾಗಿ ಪ್ರಸಕ್ತ ಸಾಲಿನ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡಬಾರದು. ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿ ತಮ್ಮ ಜವಾಬ್ದಾರಿ ಅರಿತು ಅಧಿವೇಶನ ಯಶಸ್ವಿಗೊಳಿಸವೇಕು. ಎಲ್ಲ ಇಲಾಖೆಗಳು, ಸಮಿತಿಗಳು ಮತ್ತು ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ವಿಶೇಷ ಜಿಲ್ಲಾಧಿಕಾರಿ ಹರ್ಷ ಶೆಟ್ಟಿ, ಪಾಲಿಕೆ ಆಯುಕ್ತೆ ಶುಭ, ಜಿಪಂ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಟರ, ಕಾಡಾ ಆಡಳಿತಾಧಿಕಾರಿ ಸತೀಶಕುಮಾರ್, ಲೊಕೋಪಯೋಗಿ ಇಲಾಖೆ ಅಭಿಯಂತರ ಸೊಬರದ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಆಹಾರ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ನಾಯಕ, ಡಿಡಿಪಿಐ ಲೀಲಾವತಿ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.