ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ, ಯಾವುದೇ ಲೋಪಗಳಿಲ್ಲದಂತೆ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಯವರು ತಮಗೆ ವಹಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪ್ರತಿ ವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವದ ದಿನದ ಹಿಂದಿನ ದಿನ ಹಾಗೂ ಕನ್ನಡ ರಾಜ್ಯೋತ್ಸವದ ದಿನ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕನ್ನಡ ರಾಜ್ಯೋತ್ಸವ ಅಂಗವಾಗಿ ನ.1ರ ಬೆಳಗ್ಗೆ 7.30ಕ್ಕೆ ನಗರದ ಕರ್ನಾಟಕ ಸಂಘದ ಆವರಣದಿಂದ ಭುವನೇಶ್ವರಿಯ ಮೆರವಣಿಗೆಯು ವಿವಿಧ ವೃತ್ತಗಳಲ್ಲಿ ಸಂಚರಿಸಿದ ನಂತರ ಜಿಲ್ಲಾ ಕ್ರೀಡಾಂಗಣ ತಲುಪಲಿದೆ. ಬೆಳಿಗ್ಗೆ 9ಕ್ಕೆ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಕಾರ್ಯಕ್ರಮಕ್ಕೆ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯ ಹಾಜರಿರಬೇಕು ಎಂದರು.ರಾಜ್ಯೋತ್ಸವ-2026ರ ಅಂಗವಾಗಿ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲೆಯ ರಾಯಚೂರು ನಗರ, ರಾಯಚೂರು ಗ್ರಾಮೀಣ ಸೇರಿದಂತೆ ಜಿಲ್ಲೆಯ ಪ್ರತಿ ತಾಲೂಕಿನಿಂದ ಒಬ್ಬರನ್ನು ಗುರುತಿಸಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ. ಈ ಆಯ್ಕೆಯು ಪಾರದರ್ಶಕವಾಗಿ ನಡೆಸಲು ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.