ಕುರುಗೋಡು: ವಿಕಸಿತ ಭಾರತ ನಿರ್ಮಾಣಕ್ಕಾಗಿ ವಿಬಿ-ಜಿ ರಾಮ್ ಜಿ ಯೋಜನೆ ಜಾರಿಗೆ ತರಲಾಗಿದೆ ಎಂದು ಬಳ್ಳಾರಿ ಕ್ಷೇತ್ರದ ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ ಹೇಳಿದರು.
ಗ್ರಾಮೀಣ ಜನರ ಸ್ವಾವಲಂಬಿ ಬದುಕಿನ ಭರವಸೆಯ ದೂರದೃಷ್ಟಿಯ ವಿಬಿ-ಜಿ ರಾಮ್ ಜಿ ಯೋಜನೆ ಪಾರದರ್ಶಕ ನಿರ್ವಹಣೆ, ತಂತ್ರಜ್ಞಾನದ ಕಾವಲು ಮತ್ತು ಶಾಶ್ವತ ಗ್ರಾಮೀಣ ಮೂಲ ಸೌಕರ್ಯಕ್ಕೆ ಸಹಕಾರಿಯಾಗಿರುವ ಯೋಜನೆ ಕುರಿತು ಗ್ರಾಮೀಣ ಭಾಗದ ಜನರಿಗೆ ಮಾಹಿತಿ ಮುಟ್ಟಿಸುವ ಕೆಲಸ ಬಿಜೆಪಿ ಕಾರ್ಯಕರ್ತರು ಮಾಡಬೇಕು ಎಂದು ಸಲಹೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಯಂತ್ರಿಸಲು ಅಮೆರಿಕಾ ಅಧ್ಯಕ್ಷ ಟ್ರಂಪ್ ಭಾರತದ ಮೇಲೆ ಹೆಚ್ಚು ತೆರಿಗೆ ವಿಧಿಸಿದ್ದರು. ಭಾರತ ಏಷ್ಯಾ ದೇಶಗಳೊಂದಿಗೆ ಕನಿಷ್ಠ ತೆರಿಗೆಯೊಂದಿಗೆ ಒಪ್ಪಂದ ಮಾಡಿಕೊಂಡ ಪರಿಣಾಮ ಅಮೇರಿಕಾ ಶೇ. ೫೦ರಿಂದ ಶೇ. ೧೮ಕ್ಕೆ ತೆರಿಗೆ ಪ್ರಮಾಣ ಇಳಿಸುವ ಮೂಲಕ ಸ್ನೇಹಕ್ಕೆ ಮುಂದಾಗಿದೆ. ಇದು ಪ್ರಧಾನಿ ನರೇಂದ್ರಮೋದಿ ಅವರ ಶಕ್ತಿ ಎಂದು ಬಣ್ಣಿಸಿದರು.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ. ತಿಮ್ಮಾರೆಡ್ಡಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಯೋಜನೆ ಕುರಿತು ರಾಜ್ಯದ ಕಾಂಗ್ರೆಸ್ ನಾಯಕರು ನಕಲಿ ಗಾಂಧಿಗಳ ಸ್ವಾಮಿ ನಿಷ್ಠೆ ಮೆರೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಗಾಂಧಿ ಹೆಸರು ತೆಗೆದು ಕೇಂದ್ರ ಸರ್ಕಾರ ಅವಮಾನ ಮಾಡಿದೆ ಎಂದು ಅಪಪ್ರಚಾರ ಮಾಡುತ್ತಿದೆ. ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಜಾರಿಗೆ ತಂದು ಗುಡಿಕೈಗಾರಿಕೆಗಳಿಗೆ ಶಕ್ತಿ ತುಂಬುವ ಯೋಜನೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜಾರಿಗೆ ತಂದಿದ್ದಾರೆ ಎಂದರು.