ವಿಪತ್ತು ನಿರ್ವಹಣೆ ಅಣುಕು ಕಾರ್ಯಾಚರಣೆಗೆ ಸಿದ್ಧತೆ ಕೈಗೊಳ್ಳಿ: ಸಾಜಿದ್ ಮುಲ್ಲಾ

KannadaprabhaNewsNetwork |  
Published : Sep 22, 2026, 02:15 AM IST
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಮಾತನಾಡಿದರು. | Kannada Prabha

ಸಾರಾಂಶ

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯದ ಒಟ್ಟು 24 ಸ್ಥಳಗಳಲ್ಲಿ ಈ ಅಣಕು ಕಾರ್ಯಾಚರಣೆ ನಡೆಯಲಿದ್ದು, ಉತ್ತರ ಕನ್ನಡ ಜಿಲ್ಲೆಯ, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಗೋಕರ್ಣ ಮತ್ತು ಭಟ್ಕಳದಲ್ಲಿ ಅಣಕು ಕಾರ್ಯಾಚರಣೆ ನಡೆಯಲಿದೆ.

ಕಾರವಾರ: ಉತ್ತರ ಕನ್ನಡ, ಗೋವಾ ಹಾಗೂ ಮಹಾರಾಷ್ಟ್ರ(ರತ್ನಗಿರಿ) ಒಳಗೊಂಡಂತೆ ಚಂಡಮಾರುತ ಹಾಗೂ ಅದರಿಂದ ಉಂಟಾಗಬಹುದಾದ ವಿಪತ್ತುಗಳ ಕುರಿತು ಅ. 1ರಂದು ಅಂತಾರಾಜ್ಯ ಮಟ್ಟದ ಅಣಕು ಕಾರ್ಯಾಚರಣೆ ಆಯೋಜಿಸಲಾಗುತ್ತಿದ್ದು, ಈ ಅಣುಕು ಕಾರ್ಯಾಚರಣೆಗೆ ಅಗತ್ಯವಿರುವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ನಿರ್ದೇಶನ ನೀಡಿದರು.ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಚಂಡಮಾರುತ ವಿಪತ್ತು ನಿರ್ವಹಣೆ ಅಣುಕು ಕಾರ್ಯಾಚರಣೆಯ ಕುರಿತ ಸಿದ್ಧತೆ ಹಾಗೂ ಸಮನ್ವಯ ಕುರಿತ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಗೃಹ ವ್ಯವಹಾರಗಳ ಸಚಿವಾಲಯ, ಭಾರತ ಸರ್ಕಾರದ ನಿರ್ದೇಶನದಂತೆ, ಚಂಡಮಾರುತ ಹಾಗೂ ಅದರಿಂದ ಉಂಟಾಗಬಹುದಾದ ವಿಪತ್ತುಗಳ ಕುರಿತು ಈ ಅಂತಾರಾಜ್ಯ ಮಟ್ಟದ ಅಣಕು ಕಾರ್ಯಾಚರಣೆ ನಡೆಯಲಿದ್ದು, ಚಂಡಮಾರುತ ಸಂದರ್ಭದಲ್ಲಿ ಎಲ್ಲ ರಾಜ್ಯಗಳನ್ನು ಒಂದೇ ಕಮಾಂಡ್ ಅಡಿಯಲ್ಲಿ ತಂದು, ಲಭ್ಯವಿರುವ ಸಂಪನ್ಮೂಲಗಳನ್ನು ಸಮರ್ಥವಾಗಿ ಬಳಸಿಕೊಂಡು, ಪರಸ್ಪರ ಸಮನ್ವಯದಿಂದ ಸಾರ್ವಜನಿಕರಿಗೆ ತುರ್ತು ಸ್ಪಂದನೆ ನೀಡುವುದು ಈ ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿದೆ ಎಂದರು.ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯದ ಒಟ್ಟು 24 ಸ್ಥಳಗಳಲ್ಲಿ ಈ ಅಣಕು ಕಾರ್ಯಚರಣೆ ನಡೆಯಲಿದ್ದು, ಉತ್ತರ ಕನ್ನಡ ಜಿಲ್ಲೆಯ, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಗೋಕರ್ಣ ಮತ್ತು ಭಟ್ಕಳದಲ್ಲಿ ಅಣಕು ಕಾರ್ಯಾಚರಣೆ ನಡೆಯಲಿದೆ. ಚಂಡಮಾರುತ ಸಮಯದಲ್ಲಿ ಪ್ರಮುಖವಾಗಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳು, ಸಾರ್ವಜನಿಕರ ರಕ್ಷಣೆ, ಸ್ಥಳಾಂತರ, ಪುರ್ನವಸತಿ, ಪರಿಹಾರ, ಮತ್ತು ವೈದ್ಯಕೀಯ ನೆರವು ನೀಡುವ ಮೂಲಕ ಹಾನಿಯ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸಲು ಸಾಧ್ಯವಾಗಲಿದೆ ಎಂದರು.ಅಣುಕು ಕಾರ್ಯಾಚರಣೆ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಾಚರಣೆ ವಿಭಾಗದ ನಿವೃತ್ತ ಕಮಾಂಡೆಂಟ್ ಆದಿತ್ಯ ಕುಮಾರ್ ವರ್ಚುವಲ್ ಮೂಲಕ ಮಾಹಿತಿ ನೀಡಿದರು.ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಕ್ರಿಮ್ಸ್ ನ ವೈದ್ಯ ಡಾ. ವಿಜಯ ರಾಜ್, ಡಿವೈಎಸ್ಪಿ ಗಿರೀಶ್, ಅಗ್ನಿಶಾಮಕ ಇಲಾಖೆ, ನೌಕಾಪಡೆ ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆಯ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೋದಿ ಜನ್ಮದಿನ: ನಾಳೆ ಬೃಹತ್ ರಕ್ತದಾನ ಶಿಬಿರ
ಸಮಾಜಮುಖಿ ಚಿಂತನೆ, ಅಭಿವೃದ್ಧಿಗೆ ಸದಾಕಾಲ ಮನ್ನಣೆ: ಸಂಸದ ಬೊಮ್ಮಾಯಿ