ಕೇಂದ್ರದ ಅಭಿವೃದ್ಧಿ ಬಗ್ಗೆ ರೀಲ್ಸ್‌ ಮಾಡಿ, ಮೋದಿ ಭೇಟಿ ಮಾಡಿ!

KannadaprabhaNewsNetwork |  
Published : Mar 08, 2024, 01:49 AM ISTUpdated : Mar 08, 2024, 12:53 PM IST
modi kashmir visit

ಸಾರಾಂಶ

ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೊಸ ಮತದಾರರ ಜೊತೆಗೇ ಹೊಸ ನಾಯಕತ್ವ ಸೃಷ್ಟಿ ಮಾಡುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ವತಿಯಿಂದ ‘ನಮೋ ಯುವ ಭಾರತ ಫೆಲೋಶಿಫ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೊಸ ಮತದಾರರ ಜೊತೆಗೇ ಹೊಸ ನಾಯಕತ್ವ ಸೃಷ್ಟಿ ಮಾಡುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ವತಿಯಿಂದ ‘ನಮೋ ಯುವ ಭಾರತ ಫೆಲೋಶಿಫ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ಗುರುವಾರ ಪಕ್ಷದ ಕಚೇರಿಯಲ್ಲಿ ಚಾಲನೆ ನೀಡಿ ಮಾತನಾಡಿದ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಮುಂದಿನ ಒಂದೂವರೆ ತಿಂಗಳ ಕಾಲ ನಮೋ ಯುವ ಭಾರತ ಫೆಲೋಶಿಫ್ ನಡೆಯಲಿದೆ. 

ಯುವಜನತೆ ಇಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ತಮ್ಮನ್ನು ತೊಡಗಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು, ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಯುವಜನತೆಗೆ ರೀಲ್ಸ್‌ (ಕಿರುಚಿತ್ರ) ಮಾಡುವ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದೆ.

 10 ಟಾಪ್‌ ರೀಲ್ಸ್‌ಗಳಿಗೆ ನರೇಂದ್ರ ಮೋದಿ ಅವರ ಭೇಟಿಯ ಅವಕಾಶ ಲಭಿಸಲಿದೆ ಎಂದು ತಿಳಿಸಿದರು.ಎಲ್ಲ ರೀಲ್ಸ್‌ಗಳನ್ನು ‘ಬಿಜೆವೈಎಂ ಕರ್ನಾಟಕ’ ಪೇಜಿನಲ್ಲಿ ಪೋಸ್ಟ್ ಮಾಡುತ್ತೇವೆ. 

ಉತ್ತಮವಾದ ಟಾಪ್ 3 ರೀಲ್ಸ್‌ಗಳನ್ನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತಿತರ ಗಣ್ಯರ ಪೇಜ್‍ಗಳಲ್ಲಿ ಹಂಚಿಕೊಳ್ಳಲಾಗುವುದು ಎಂದರು.ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂದೀಪ್ ರವಿ ಮಾತನಾಡಿ, ಯುವಜನತೆ ತಮ್ಮನ್ನು ಈಗ ರೀಲ್ಸ್ (ಕಿರುಚಿತ್ರ) ಮೂಲಕ ತಮ್ಮನ್ನು ತೊಡಗಿಸಿಕೊಂಡಿದೆ. 

ಮೋದಿಯವರ ಸಾಧನೆ, ಅವರ ವಿಶೇಷ ಜನಪರ ಯೋಜನೆಗಳ ಕುರಿತು ರೀಲ್ ಮಾಡಿ ‘ಮೈ ಫಸ್ಟ್ ವೋಟ್ ಫಾರ್ ನಮೋ’ ಮೂಲಕ ಇನ್‍ಸ್ಟಾಗ್ರಾಂ, ಫೇಸ್‍ಬುಕ್, ಟ್ವಿಟರ್ ಹ್ಯಾಂಡಲ್‍ನಡಿ ಟ್ಯಾಗ್ ಮಾಡಲು ವಿನಂತಿಸಿದರು. 

ಗರಿಷ್ಠ ಲೈಕ್ ಪಡೆಯುವ 10 ರೀಲ್‍ಗಳನ್ನು ಆಯ್ಕೆ ಮಾಡುತ್ತೇವೆ ಎಂದು ವಿವರಿಸಿದರು. ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ಡಿ.ಎಸ್. ಅರುಣ್, ಅಂಬಿಕಾ ಹುಲಿನಾಯ್ಕರ್, ರಾಜ್ಯ ವಕ್ತಾರರಾದ ಸುರಭಿ ಹೊದಿಗೆರೆ ಅವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡಿಗರ ಆಕ್ರೋಶ : ರೈಲ್ವೆ ಪರೀಕ್ಷೆ ಮುಂದಕ್ಕೆ
ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆ : ಕೇಂದ್ರ ಷರತ್ತಿನ ಅಸ್ತು