ಕನ್ನಡಪ್ರಭ ವಾರ್ತೆ ಉಡುಪಿ
ಸಭೆಯಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಮಾತನಾಡಿ, ಮಳೆಗಾಲದ ಸಂದರ್ಭದಲ್ಲಿ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ನೀರು ನಿಂತು ಸಾಂಕ್ರಮಿಕ ರೋಗಗಳು ಹರಡುವ ಸಂಭವವಿದ್ದು, ಈ ಕುರಿತು ಮುಂಜಾಗೃತಾ ಕ್ರಮ ಕೈಗೊಳ್ಳುವ ಉದ್ದೇಶದಿಂದ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಸುತ್ತ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು ಎಂದರು.
ಕೆಲಸಗಳಿಗೆ ಹೊರ ಜಿಲ್ಲೆ ಹಾಗೂ ಇತರ ಕಡೆಗಳಿಂದ ಬರುವ ಕಾರ್ಮಿಕರಿಗೆ ಕಡ್ಡಾಯವಾಗಿ ಸ್ಕ್ರೀನಿಂಗ್ ಹಾಗೂ ರಕ್ತ ಪರೀಕ್ಷೆ ಮಾಡಿಸಿ ಅವರ ಮಾಹಿತಿಯನ್ನು ಜಿಲ್ಲಾಸ್ಪತ್ರೆಗೆ ನೀಡಬೇಕು. ಕಟ್ಟಡ ನಿರ್ಮಾಣ ಸ್ಥಳದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಿ ರೋಗ ಹರಡುವಿಕೆಗೆ ಕಾರಣವಾಗುವ ಅಂಶಗಳ ಬಗ್ಗೆ ಮುಂಜಾಗ್ರತೆ ವಹಿಸಬೇಕು. ಯಾವುದೇ ಜ್ವರ ಅಥವಾ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಹತ್ತಿರದ ವೈದ್ಯರನ್ನು ಸಂಪರ್ಕಿಸಬೇಕು ಎಂದರು.ಸಭೆಯಲ್ಲಿ ಪೌರಾಯುಕ್ತ ರಾಯಪ್ಪ ಮಾತನಾಡಿ, ಯಾವುದೇ ಪ್ರದೇಶದಲ್ಲಿ ಮಲೇರಿಯಾ, ಫೈಲೇರಿಯಾ, ಡೆಂಘೀ, ಚಿಕೂನ್ ಗುನ್ಯ ಪ್ರಕರಣಗಳು ಹರಡುವುದಕ್ಕೆ ಕಾರಣವಾದ ಬಿಲ್ಡರ್ಸ್ ಗಳ ಪರವಾನಿಗೆಯನ್ನು ರದ್ದುಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.