ತಂಬಾಕು ವ್ಯಸನಕ್ಕೆ ಒಳಗಾಗದಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ: ಸುನಿಲ್ ಸಲಹೆ

KannadaprabhaNewsNetwork |  
Published : May 02, 2024, 12:20 AM IST
೧ಕೆಎಲ್‌ಆರ್-೨ಕೋಲಾರದ ಚೈತನ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಸೈನ್ಸ್ ಕಾಲೇಜಿನಿಂದ ಕಾಲೇಜು ಸಭಾಂಗಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ.ಎಸ್ ಹೊಸಮನಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಭಾರತದಲ್ಲಿ ಪ್ರತಿವರ್ಷ ೧೦ ಲಕ್ಷಕ್ಕಿಂತ ಹೆಚ್ಚಿನ ಜನ ತಂಬಾಕು ಉತ್ಪನ್ನಗಳ ಸೇವನೆಯಿಂದ ಸಾಯುತ್ತಿದ್ದಾರೆ. ಆಧುನಿಕ ದಿನಗಳಲ್ಲಿ ಅಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿದ್ದು, ಇಂತಹ ರೋಗಗಳಿಗೆ ತಂಬಾಕು ಉತ್ಪನ್ನಗಳ ಸೇವನೆಯೇ ಪ್ರಮುಖ ಕಾರಣವಾಗಿದೆ.

ಕನ್ನಡಪ್ರಭ ವಾರ್ತೆ ಕೋಲಾರ

ಕಾಲೇಜಿನ ಹದಿಹರೆಯದ ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳ ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವಂತಹ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ್.ಎಸ್ ಹೊಸಮನಿ ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕೋಲಾರದ ಚೈತನ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಸೈನ್ಸ್ ಕಾಲೇಜಿನಿಂದ ಕಾಲೇಜು ಸಭಾಂಗಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತಂಬಾಕು ಉತ್ಪನ್ನಗಳ ಸೇವನೆಯು ಅನೇಕ ರೋಗಗಳಿಗೆ ಪ್ರಮುಖ ಕಾರಣವಾಗಿದೆ. ಶೇ.೨೨ ರಷ್ಟು ಕ್ಯಾನ್ಸರ್ ರೋಗಗಳು ತಂಬಾಕು ಉತ್ಪನ್ನಗಳಾದ ಬೀಡಿ, ಸಿಗರೇಟ್, ಗುಟ್ಕಾ, ಹೇನ್ಸ್, ಕಡ್ಡಿಪುಡಿ ಇತರೆ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುತ್ತಿವೆ. ಶೇ ೭೧ ರಷ್ಟು ಶ್ವಾಸಕೋಶದ ಕ್ಯಾನ್ಸರ್ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುತ್ತಿದೆ ಎಂದರು.

ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ ಎಂ.ಎ ಮಾತನಾಡಿ, ಭಾರತದಲ್ಲಿ ಪ್ರತಿವರ್ಷ ೧೦ ಲಕ್ಷಕ್ಕಿಂತ ಹೆಚ್ಚಿನ ಜನ ತಂಬಾಕು ಉತ್ಪನ್ನಗಳ ಸೇವನೆಯಿಂದ ಸಾಯುತ್ತಿದ್ದಾರೆ. ಆಧುನಿಕ ದಿನಗಳಲ್ಲಿ ಅಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿದ್ದು, ಇಂತಹ ರೋಗಗಳಿಗೆ ತಂಬಾಕು ಉತ್ಪನ್ನಗಳ ಸೇವನೆಯೇ ಪ್ರಮುಖ ಕಾರಣವಾಗಿದೆ. ಆದ್ದರಿಂದ ಹದಿಹರೆಯದ ಯುವಕರು/ವಿದ್ಯಾರ್ಥಿಗಳು ಜಾಗೃತರಾಗಿ ತಂಬಾಕು ಉತ್ಪನ್ನಗಳ ವ್ಯಸನಕ್ಕೆ ಒಳಗಾಗದೇ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳುವುದು ಅವಶ್ಯಕ ಎಂದು ಸಲಹೆ ನೀಡಿದರು.

ಚೈತನ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಸೈನ್ಸ್, ಕಾಲೇಜಿನ ಸಿಇಒ ಶ್ರೀ ಹರಿನಾಥರಾವ್.ಆರ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಮಹಮದ್.ಪಿ, ಮಂಜುನಾಥ.ಜಿ ಇದ್ದರು.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ