ದೊಡ್ಡಬಳ್ಳಾಪುರ: ಮಾದಕ ವಸ್ತುಗಳ ನಿಷೇಧ ಹಾಗೂ ದುಷ್ಪರಿಣಾಮಗಳ ಬಗ್ಗೆ ಶಾಲಾ, ಕಾಲೇಜು ಸೇರಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಮಾತನಾಡಿ, ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ಅಂತರ-ರಾಜ್ಯ ಮಾದಕವಸ್ತುಗಳ ಮಾರಾಟ, ಸಾಗಾಟವನ್ನು ತಡೆಯಲು ಪೊಲೀಸ್ ಇಲಾಖೆ ಹದ್ದಿನ ಕಣ್ಣಿಡಬೇಕಿದೆ. ಕೃಷಿ ಅಧಿಕಾರಿಗಳು ಅಕ್ರಮವಾಗಿ ಗಾಂಜಾ ಬೆಳೆಯುವವರ ಬಗ್ಗೆ ನಿಗಾ ವಹಿಸಿ, ಆಗಿಂದಾಗ್ಗೆ ಸ್ಥಳ ಪರಿಶೀಲನೆ ನಡೆಸಿ. ಹಾಸ್ಟೆಲ್, ಶಾಲಾ ಕಾಲೇಜುಗಳಲ್ಲಿ ಮಾದಕವಸ್ತು ಬಳಕೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಮಾದಕವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ. ಕಸ್ಟಮ್ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಹೊರ ರಾಜ್ಯ, ರಾಷ್ಟ್ರಗಳಿಂದ ಬರುವ ಸರಕುಗಳ ಮೇಲೆ ಇನ್ನಷ್ಟು ಬಿಗಿ ಕ್ರಮ ವಹಿಸಿ ಪರಿಶೀಲನೆ ನಡೆಸಿ ಎಂದರು.
ಜಿಲ್ಲೆಯಲ್ಲಿ ಮಾದಕವಸ್ತು, ವ್ಯಸನ ಮುಕ್ತ ಪುನರ್ವಸತಿ ಕೇಂದ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಪುನರ್ವಸತಿ ಕೇಂದ್ರಗಳು ಇನ್ನಷ್ಟು ಆರಂಭಿಸಲು ಕ್ರಮ ವಹಿಸಿ ಎಂದು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂತೋಶ್ ಕುಮಾರ್, ಕಸ್ಟಂಸ್ ಸಂಸ್ಥೆಯ ಜಂಟಿ ನಿರ್ದೇಶಕರಾದ ಸಂದೀಪ್ ಗುಂಜಾಲ್, ರಾಷ್ಟ್ರೀಯ ಕಸ್ಟಂಸ್ ಬ್ಯೋರೊ ಅಧಿಕಾರಿ ಶ್ಯಾಂ ಪ್ರಸಾದ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
29ಕೆಡಿಬಿಪಿ2-ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಎನ್-ಕಾರ್ಡ್ ಸಭೆ ಜಿಲ್ಲಾಧಿಕಾರಿ ಬಸವರಾಜು ಅಧ್ಯಕ್ಷತೆಯಲ್ಲಿ ನಡೆಯಿತು.