ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಖಚಿತಪಡಿಸಿಕೊಳ್ಳಿ

KannadaprabhaNewsNetwork |  
Published : Jul 01, 2026, 01:30 AM IST
30ಎಚ್ಎಸ್ಎನ್4 : ಬೇಲೂರು    ಚನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ   ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮನೆ ಮನೆ ತೆರಳುವ ಜಾಥಕ್ಕೆ ಬೇಲೂರು ತಹಸೀಲ್ದಾರ್ ಚಾಲನೆ ನೀಡಿದರು | Kannada Prabha

ಸಾರಾಂಶ

ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಹೆಸರು ಕೈಬಿಡುವಿಕೆ ಸೇರಿದಂತೆ ವಿವಿಧ ಸೇವೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. 18 ವರ್ಷ ಪೂರ್ಣಗೊಳಿಸಿರುವ ಪ್ರತಿಯೊಬ್ಬ ಅರ್ಹ ಯುವಕ-ಯುವತಿಯರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಹಸೀಲ್ದಾರ್ ಶ್ರೀಧರ ಕಂಕಣವಾಡಿ, ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಅಮೂಲ್ಯ ಹಕ್ಕಾಗಿದ್ದು, ಅರ್ಹರೆಲ್ಲರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪರಿಶೀಲಿಸಿಕೊಳ್ಳಬೇಕು. ಹೆಸರು ಇಲ್ಲದಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಸೇರ್ಪಡೆ ಮಾಡಿಸಿಕೊಳ್ಳುವಂತೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೇಲೂರುಪಟ್ಟಣದ ಚನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಎಸ್‌ಐಆರ್ ಮನೆ ಮನೆಗೆ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸುವ ಜಾಗೃತಿ ಜಾಥಕ್ಕೆ ತಹಸೀಲ್ದಾರ್ ಶ್ರೀಧರ ಕಂಕಣವಾಡಿ ಮತ್ತು ಪುರಸಭಾ ಅಧ್ಯಕ್ಷ ಅಕ್ರಂ‌ ಶರೀಪ್ ಚಾಲನೆ ನೀಡಿದರು.ಜಾಥಾವು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಹೆಸರು ಕೈಬಿಡುವಿಕೆ ಸೇರಿದಂತೆ ವಿವಿಧ ಸೇವೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. 18 ವರ್ಷ ಪೂರ್ಣಗೊಳಿಸಿರುವ ಪ್ರತಿಯೊಬ್ಬ ಅರ್ಹ ಯುವಕ-ಯುವತಿಯರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಹಸೀಲ್ದಾರ್ ಶ್ರೀಧರ ಕಂಕಣವಾಡಿ, ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಅಮೂಲ್ಯ ಹಕ್ಕಾಗಿದ್ದು, ಅರ್ಹರೆಲ್ಲರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪರಿಶೀಲಿಸಿಕೊಳ್ಳಬೇಕು. ಹೆಸರು ಇಲ್ಲದಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಸೇರ್ಪಡೆ ಮಾಡಿಸಿಕೊಳ್ಳುವಂತೆ ತಿಳಿಸಿದರು.ಪುರಸಭಾ ಅಧ್ಯಕ್ಷ ಅಕ್ರಂ ಶರೀಫ್‌ ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮ ಯಶಸ್ವಿಯಾಗಲು ಸಾರ್ವಜನಿಕರು ಸಹಕರಿಸಬೇಕು ಹಾಗೂ ಪ್ರತಿಯೊಬ್ಬ ಅರ್ಹ ನಾಗರಿಕರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬೇಕು, ದಾಖಲೆಯನ್ನು ಒದಗಿಸಬೇಕು ಎಂಬ ಗೊಂದಲ ಬೇಡ. ಪ್ರತಿಯೊಬ್ಬರೂ ಮನೆ ಮನೆಗೆ ಬಂದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಬೇಕೆಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಪುರಸಭಾ ಮಾಜಿ ಅಧ್ಯಕ್ಷೆ ತೀರ್ಥ ಕುಮಾರಿ ವೆಂಕಟೇಶ, ಮುಖ್ಯಾಧಿಕಾರಿ ಬಸವರಾಜ್ ಶಿಗ್ಗಾಂವಿ, ಕಾಂಗ್ರೆಸ್ ಮುಖಂಡ ಸತ್ಯನಾರಾಯಣ, ಆರೋಗ್ಯ ಇಲಾಖೆ ದಯಾನಂದ್, ಶಿಕ್ಷಣ ಇಲಾಖೆಯ ಶಿವಮರಿಯಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತೇಜಸ್ವಿನಿ ಸೇರಿದಂತೆ ವಿವಿಧ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮದ್ದೂರು: ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ
ಸರ್ಕಾರಿ ಶಾಲೆ ಸುಸಜ್ಜಿತ ಸಭಾಂಗಣ ನಿರ್ಮಾಣಕ್ಕೆ ಚಾಲನೆ