ಬೀಜ, ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಿ

KannadaprabhaNewsNetwork |  
Published : Oct 02, 2024, 01:16 AM IST
ಪೊಟೋ ಅ.1ಎಂಡಿಎಲ್ 2ಎ, 2ಬಿ. ಸಚಿವ ತಿಮ್ಮಾಪೂರ ಬಿತ್ತನೆ ಬೀಜ ವಿತರಣೆ ಚಾಲನೆ ನೀಡಿದರು. | Kannada Prabha

ಸಾರಾಂಶ

ರೈತರಿಗೆ ಯಾವುದೇ ರೀತಿಯ ಬೀಜ ಹಾಗೂ ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಎಲ್ಲ ರೈತರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

ಕನ್ನಡಪ್ರಭ ವಾರ್ತೆ ಮುಧೋಳ

ರೈತರಿಗೆ ಯಾವುದೇ ರೀತಿಯ ಬೀಜ ಹಾಗೂ ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಎಲ್ಲ ರೈತರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಸಚಿವ ಆರ್‌.ಬಿ.ತಿಮ್ಮಾಪುರ ಹೇಳಿದರು.

ಮುಧೋಳ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಆವರಣದಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ 2024-25ನೇ ಸಾಲಿನ ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳಾದ ಜೋಳ, ಕಡಲೆ ಬಿತ್ತನೆ ಬೀಜಗಳನ್ನು ಸಾಂಕೇತಿಕವಾಗಿ ಫಲಾನುಭವಿಗಳಿಗೆ ವಿತರಿಸಿ ಅವರು ಮಾತನಾಡಿದರು.

ಮುಧೋಳ ತಾಲೂಕಿನಲ್ಲಿ ಮುಂಗಾರು, ಹಿಂಗಾರು ಹಂಗಾಮಿನ ಬಿತ್ತನೆ ಕ್ಷೇತ್ರದ ವಿವರ, ಮಳೆ ವರದಿ ಹಾಗೂ ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳ ಬೇಡಿಕೆ ಹಾಗೂ ದಾಸ್ತಾನುಗಳ ಕುರಿತು ಮಾಹಿತಿ ಪಡೆದುಕೊಂಡು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್‌ ಮಹಾದೇವ ಸನಮುರಿ, ಕೃಷಿ ಇಲಾಖೆಯ ಉಪ ನಿರ್ದೇಶಕ ಕೆ.ಎಸ್.ಅಗಸನಾಳ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಬಿ.ದೊಡಮನಿ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಹೇಶ ದಂಡೆನ್ನವರ, ಸಹಾಯಕ ಅಭಿಯಂತರ ರಾಘವೇಂದ್ರ ಕಳ್ಳಿಮನಿ, ಕೃಷಿ ಇಲಾಖೆಯ ಅಧಿಕಾರಿಗಳಾದ ರೇಣುಕಾ ಗೌಡಪ್ಪಗೌಡರ, ಲಕ್ಷ್ಮೀ ತೇಲಿ, ಬಿ.ಎಸ್.ಬುದ್ನಿ, ಎಸ್.ಎಸ್. ತಟ್ಟಿಮನಿ, ಪ್ರಕಾಶ ಅಡವಿ, ರಮೇಶ ಹಲಗಲಿ, ಆರ್.ಎಚ್. ನಿಡೋಣಿ, ಡಾ: ರಂಗಪ್ಪ ಹಂದಿಗುಂದ, ಕಾಂಗ್ರೆಸ್ ಮುಖಂಡರಾದ ಎಸ್.ಪಿ. ದಾನಪ್ಪಗೋಳ, ದಾನೇಶ ತಡಸಲೂರ, ಸದುಗೌಡ ಪಾಟೀಲ, ಚಂದ್ರಶೇಖರ ಗಡ್ಡಿ, ನಾರಾಯಣ ಹವಾಲ್ದಾರ ಹಾಗೂ ತಾಲೂಕಿನ ರೈತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!