ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಕಣಾದ ಯೋಗ ಹಾಗೂ ಸಂಶೋಧನಾ ಪ್ರತಿಷ್ಠಾನವು ಜಿಲ್ಲಾ ಸ್ವೀಪ್ ಸಮಿತಿ ಮತ್ತು ಸಮಾನ ಮನಸ್ಕರ ವಿವಿಧ ಸಂಘಟನೆಗಳ ಸಹಯೋಗದಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ ಎಂ.ಆರ್.ಎಸ್.ವೃತ್ತದಿಂದ ಮಂಡೇನ್ಕೊಪ್ಪ ಸುರಭಿ ಗೋ ಶಾಲೆಯ ವರೆಗೆ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಮತ್ತು ಆರೋಗ್ಯಕ್ಕಾಗಿ ಯೋಗ ನಡಿಗೆ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಮತದಾನವೆನ್ನುವುದು ಪ್ರಜಾಪ್ರಭುತ್ವದಲ್ಲಿ ನಡೆಯುವ ಒಂದು ಪವಿತ್ರ ಕಾರ್ಯ ಮತ್ತು ಸಂಭ್ರಮದ ಹಬ್ಬ. ಇದನ್ನು ಮತದಾರರು ತಮ್ಮ ಮತದಾನದ ಹಕ್ಕು ಚಲಾಯಿಸುವ ಮೂಲಕ ಸಡಗರದಿಂದ ಆಚರಿಸಬೇಕು ಎಂದ ಅವರು ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೇ ನಿರ್ಭೀತಿ ಮತ್ತು ನಿರ್ಭಿಡೆಯಿಂದ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.ಭಾರತ ಚುನಾವಣಾ ಆಯೋಗವು ಚುನಾವಣೆಯುಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದವರಿಗೆ ಶಿಕ್ಷೆಗೆ ಗುರಿಪಡಿಸುವ ಎಲ್ಲಾ ಕ್ರಮಗಳನ್ನೂ ಕೈಗೊಂಡಿದೆ. ಯಾರಿಗಾದರೂ ಚುನಾವಣೆಯಲ್ಲಿ ಅಕ್ರಮ ಎಸಗಿದ್ದು ಕಂಡುಬಂದಲ್ಲಿ ಸಿ-ವಿಜಿಲ್ ಆ್ಯಪ್ ಮೂಲಕ ಚುನಾವಣಾ ಆಯೋಗಕ್ಕೆ ದೂರು ನೀಡಿ ಸಹಕರಿಸಬೇಕು ಎಂದು ಕಿವಿ ಮಾತು ಹೇಳಿದರು.
ಹೊರ ಊರಿನಲ್ಲಿ ನೆಲೆಸಿರುವವರಿಗೆ ಮತ ಮತ ಚಲಾಯಿಸಲು ವೇತನ ಸಹಿತ ರಜೆ ನೀಡಲಾಗಿದೆ. ಅದರ ಸದುಪಯೋಗವನ್ನು ಅವರು ಪಡೆದುಕೊಳ್ಳಬೇಕು ಎಂದ ಅವರು ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರೂ ಮತದಾನವಾಗಬೇಕು ಎಂಬುದು ಸ್ವೀಪ್ ನ ಆಶಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಅರ್ಹ ಮತದಾರರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಅವರು ಹೇಳಿದರು.
ಪ್ರತಿಯೊಬ್ಬರೂ ಪ್ರತಿ ನಿತ್ಯ ಯೋಗಾಭ್ಯಾಸವನ್ನು ಮಾಡುವುದರ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರಲ್ಲದೆ ಸಾರ್ವಜನಿಕರಲ್ಲಿ ಆರೋಗ್ಯದ ಜತೆಗೆ ಮತದಾನದ ಮಹತ್ವ ತಿಳಿಸುವ ಮಹೋನ್ನತ ಉದ್ಧೇಶ ಈ ಜಾಥಾದ್ದಾಗಿದೆ. ಸುಮಾರು ನೂರು ಜನ ಇದರಲ್ಲಿ ಪಾಲ್ಗೊಳ್ಳುತ್ತಿರುವುದಾಗಿ ಅವರು ತಿಳಿಸಿದರು.