ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ಆಯಿಲ್ ಕಂಪನಿಯ ಮಾರಾಟಾಧಿಕಾರಿಗಳು ಹಾಗೂ ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮುಂಗಾರು ಆರಂಭವಾಗಿದ್ದು, ಏಳೂವರೆ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರೈತರ ಉಳುಮೆ ಕಾರ್ಯ ನಡೆಯುತ್ತಿದೆ. ಹಾಗಾಗಿ ರೈತರಿಗೆ ಯಾವುದೇ ಅನಾನುಕೂಲ ಹಾಗೂ ಸಮಸ್ಯೆ ಆಗದಂತೆ ಇಂಧನ ಪೂರೈಸಬೇಕು. ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ನಿಗಾ ವಹಿಸಬೇಕು ಎಂದ ಅವರು, ಜಿಲ್ಲಾಡಳಿತ ಸ್ಪ್ರೆಡ್ ಶೀಟ್ ನಲ್ಲಿ ದೈನಂದಿನ ಮಾಹಿತಿ ಕ್ರೋಢಿಕರಿಸುತ್ತದೆ ಎಂದರು.
ತೈಲ ಕಂಪನಿ ಪ್ರತಿನಿಧಿಗಳು ಮಾತನಾಡಿ, ಜಿಲ್ಲೆಯಲ್ಲಿ ಇಂಧನದ ಕೊರತೆ ಇರುವುದಿಲ್ಲ ಎಂದು ಸ್ಪಷ್ಟಪಡಿಸುವುದರ ಜೊತೆಗೆ ಇಂಡೆಂಟ್ ಅನುಗುಣವಾಗಿ ಇಂಧನ ಪೂರೈಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಗ್ರಾಹಕರಿಗೆ ತೈಲ ವಿತರಿಸುವಾಗ ಯಾವುದೇ ವ್ಯತ್ಯಾಸ ಆಗದಂತೆ ನಿಯಮಾನುಸಾರ, ಪ್ರಮಾಣ ಬದ್ಧವಾಗಿ ಮತ್ತು ಪಾರದರ್ಶಕವಾಗಿ ವಿತರಿಸಲು ಸಭೆಯಲ್ಲಿ ಸೂಚಿಸಲಾಯಿತು.ಗ್ರಾಹಕರ ಹಿತರಕ್ಷಣೆ, ಇಂಧನ ಸುರಕ್ಷತೆ ಮತ್ತು ನಿಯಮಾವಳಿಗಳ ಪಾಲನೆ ಕುರಿತು ಚರ್ಚೆ ನಡೆಸಲಾಯಿತು. ಪ್ರತಿ ಪೆಟ್ರೋಲ್ ಪಂಪಿನಲ್ಲಿ ಪ್ರತಿದಿನ ಲಭ್ಯವಿರುವ ಇಂಧನದ ದಾಸ್ತಾನು ಹಾಗೂ ದರದ ಮಾಹಿತಿಯನ್ನು ಗ್ರಾಹಕರಿಗೆ ಕಾಣುವಂತೆ ಕಡ್ಡಾಯವಾಗಿ ಪ್ರದರ್ಶಿಸಲು ಸೂಚಿಸಲಾಯಿತು.
ಮಾಹಿತಿಗಾಗಿ ಸಂಪರ್ಕಿಸಿ: ಆಹಾರ ಇಲಾಖೆಯ ಆಲಮೇಲ, ಸಿಂದಗಿ ಹಾಗೂ ದೇವರಹಿಪ್ಪರಗಿ ಆಹಾರ ಇಲಾಖೆ ಶಿರಸ್ತೇದಾರ ಬಸವರಾಜ ಭೋವಿ (ಮೊ: 9741097476), ಬಸವನ ಬಾಗೇವಾಡಿ, ನಿಡಗುಂದಿ ಹಾಗೂ ಕೋಲಾರ ತಾಲೂಕಿನ ಆಹಾರ ಶಿರಸ್ತೇದಾರ ಸಂಜಯ ಹಳ್ಳೂರ (ಮೊ: 9902424912), ಮುದ್ದೇಬಿಹಾಳ ಹಾಗೂ ತಾಳಿಕೋಟೆ ಆಹಾರ ಶಿರಸ್ತೇದಾರ ಶಶಿಧರ ಕುಮಚಗಿ (ಮೊ: 9986896628), ಇಂಡಿ ಹಾಗೂ ಚಡಚಣ ತಾಲೂಕಿನ ಆಹಾರ ಶಿರಸ್ತೇದಾರ ಪರಮಾನಂದ ಹೂಗಾರ (ಮೊ: 7760826036), ವಿಜಯಪುರ ತಾಲೂಕಿನ ಆಹಾರ ನಿರೀಕ್ಷಕ ವಿಜಯಕುಮಾರ ಗುಮಶೆಟ್ಟಿ (ಮೊ: 8095312999), ತಿಕೋಟಾ ತಾಲೂಕಿನ ಆಹಾರ ನಿರೀಕ್ಷಕ ಎಂ.ಎ.ಅಕ್ಕಲಕೋಟ (ಮೊ: 9606347850) ಹಾಗೂ ಬಬಲೇಶ್ವರ ತಾಲೂಕಿನ ಆಹಾರ ನಿರೀಕ್ಷಕ ಎಚ್.ಕೆ.ಬಿಳೇಕುದರಿ (ಮೊ: 9945490872) ಇವರನ್ನು ಸಂಪರ್ಕಿಸಬಹುದಾಗಿದೆ ಎಂದವರು ತಿಳಿಸಿದರು.
-ಡಾ.ಆನಂದ.ಕೆ., ಜಿಲ್ಲಾಧಿಕಾರಿ