ಬಿಜೆಪಿಗೆ ಪಾಠ ಕಲಿಸಲು ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿ: ವಿನಯ ತಿಮ್ಮಾಪೂರ್

KannadaprabhaNewsNetwork |  
Published : Jan 04, 2024, 01:45 AM ISTUpdated : Jan 05, 2024, 03:46 PM IST
ಚಿತ್ರಶೀರ್ಷಿಕೆ3ಎಂಎಲ್ ಕೆ1ಮೊಳಕಾಲ್ಮುರು ಪಟ್ಟಣದ ಕಾಂಗ್ರೆಸ್ಕಚೇರಿಯಲ್ಲಿ ಯುತ್ ಕಾಂಗ್ರೆಸ್ ನಿಂದ ಬುಧವಾರ ಆಯೋಜಿಸಿದ್ದ ಯುವ ಸಹಾಯ ಹಸ್ತ ಕಾರ್ಯಕ್ರಮದಲ್ಲಿ ಯುವಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನಯ ತಿಮ್ಮಾಪೂರ್ ಮಾತನಾಡಿದರು. | Kannada Prabha

ಸಾರಾಂಶ

ಧರ್ಮದ ಮೇಲೆ ರಾಜಕಾರಣ ಮಾಡಿ ದೇಶ ಒಡೆಯುತ್ತಿರುವ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ಗೆ ವೋಟ್‌ ನೀಡಿ ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನಯ ತಿಮ್ಮಾಪೂರ್ ಹೇಳಿದರು.

ಮೊಳಕಾಲ್ಮುರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ಮೂಲಕ ಧರ್ಮದ ಹೆಸರಲ್ಲಿ ದೇಶವನ್ನು ಒಡೆಯುವ ಕೆಲಸ ಮಾಡುತ್ತಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನಯ ತಿಮ್ಮಾಪೂರ್ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಯೂತ್ ಕಾಂಗ್ರೆಸ್‌ನಿಂದ ಬುಧವಾರ ಆಯೋಜಿಸಿದ್ದ ಯುವ ಸಹಾಯ ಹಸ್ತ ಕಾರ್ಯಕ್ರಮದಲ್ಲಿ ಮಾತನಾಡಿದರು.

ಚುನಾವಣೆಗೂ ಮುನ್ನಾ ಕಾಂಗ್ರೆಸ್ ನೀಡಿದ ಗ್ಯಾರಂಟಿಗಳನ್ನು ಜಾರಿ ಮಾಡಿ ನುಡಿದಂತೆ ನಡೆದು ಕೊಂಡಿರುವ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಉಚಿತ ಪ್ರಯಾಣದ ಯೋಜನೆಗಳು ಯಶಸ್ವಿಯಾಗಿ ಜನರಿಗೆ ಸದ್ಭಳಕೆಯಾಗುತ್ತಿವೆ. ಜನರ ಅಭಿವೃದ್ಧಿ ಬಯಸದ ಬಿಜಿಪಿ ಧರ್ಮದ ಹೆಸರಲ್ಲಿ ದೇಶ ಒಡೆಯುವ ಕೆಲಸ ಮಾಡುತ್ತಿದೆ. ಯುವಕರು ಜಾಗೃತರಾಗಬೇಕು ಎಂದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ನಿಮ್ಮೆಲ್ಲರ ಸಹಕಾರ ಅಗತ್ಯವಾಗಬೇಕು. ಪಕ್ಷದ ನಾಯಕರು ಟಿಕೆಟ್ ನೀಡಿದರೆ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಕ್ಕೆ ನಾಂದಿ ಹಾಡುತ್ತೇನೆ. ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಮೂಲಕ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರೆ ಹಳ್ಳಿ ಉಲ್ಲಾಸ್ ಮಾತನಾಡಿ, ಕಾಂಗ್ರೆಸ್ ಭದ್ರ ಕೋಟೆ ಮೊಳಕಾಲ್ಮುರು ಕ್ಷೇತ್ರದಲ್ಲಿ ಕಳೆದ ಬಾರಿ ಬಿಜೆಪಿ ಶಾಸಕರಿದ್ದರೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅತಿ ಹೆಚ್ಚು ಮತದಾರರು ಬೆಂಬಲಿಸಿದ್ದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಕ್ರಿಯಾಶೀಲರಾಗಬೇಕು. ಸರ್ಕಾರದ ಯೋಜನೆಗಳು ಎಷ್ಟು ಜನರಿಗೆ ತಲುಪಿದೆ, ಇನ್ನೆಷ್ಟು ಜನರಿಗೆ ತಲುಪಬೇಕು ಎನ್ನುವ ಮಾಹಿತಿ ಪಡೆದು ಅವರಿಗೂ ಯೋಜನೆಗಳನ್ನು ತಪಿಸುವ ಕೆಲಸ ಮಾಡುವ ಮೂಲಕ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದರು.

ಈ ವೇಳೆ ಯುತ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಡಾ.ದಾದಾಪೀರ್, ಪಟ್ಟಣ ಪಂಚಾಯಿತಿ ಸದಸ್ಯ ನಬೀಲ್ ಅನ್ಸರ್, ಜಿಲ್ಲಾ ಕಾರ್ಯದರ್ಶಿ ತಿಪ್ಪೇಸ್ವಾಮಿ, ಪರುಶುರಾಂಪುರ ವಿಶಾಲ್, ಅಪೀಜುಲ್ಲಾ, ಶಿವಲಿಂಗಪ್ಪ, ಯರ್ರೆಜ್ಜನಹಳ್ಳಿ ನಾಗರಾಜ ಇದ್ದರು.

PREV

Recommended Stories

2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ