24*7 ನೀರು ಸರಬರಾಜು ಯೋಜನೆ ಯಶಸ್ವಿಗೊಳಿಸಿ: ಸಿಇಒ ಶಶಿಧರ ಕುರೇರ

KannadaprabhaNewsNetwork |  
Published : Jul 23, 2025, 01:46 AM IST
ಒಂದು ದಿನದ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಚಾಲನೆ ನೀಡಿದರು. | Kannada Prabha

ಸಾರಾಂಶ

ಗ್ರಾಮೀಣ ಭಾಗದಲ್ಲಿ ದಿನ 24 ಗಂಟೆಗಳ ನೀರು ಸರಬರಾಜು ಯೋಜನೆ ಸಮರ್ಪಕ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಅಭಿಯಂತರರು, ಪಿಡಿಒಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಂಡು ತಮ್ಮ ವ್ಯಾಪ್ತಿಯಲ್ಲಿ ಯೋಜನೆ ಅನುಷ್ಠಾನಕ್ಕೆ ಶ್ರಮಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಗ್ರಾಮೀಣ ಭಾಗದಲ್ಲಿ ದಿನ 24 ಗಂಟೆಗಳ ನೀರು ಸರಬರಾಜು ಯೋಜನೆ ಸಮರ್ಪಕ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಅಭಿಯಂತರರು, ಪಿಡಿಒಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಂಡು ತಮ್ಮ ವ್ಯಾಪ್ತಿಯಲ್ಲಿ ಯೋಜನೆ ಅನುಷ್ಠಾನಕ್ಕೆ ಶ್ರಮಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು.ಜಿಲ್ಲೆಯ ಗ್ರಾಮೀಣ ಭಾಗದ ಜನರಿಗೆ ದಿನ 24 ಗಂಟೆಗಳ ಕುಡಿಯುವ ನೀರು ಸರಬರಾಜು ಕುರಿತು ಎಂಜಿನಿಯರ್ ಮತ್ತು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಹಮ್ಮಿಕೊಂಡ ಒಂದು ದಿನದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲಾ ಪಂಚಾಯತಿ ನೂತನ ಸಭಾಭವನದಲ್ಲಿ ಮಂಗಳವಾರ ಜಿಪಂ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡ ಒಂದು ದಿನದ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 195 ಗ್ರಾಮ ಪಂಚಾಯತಿಗಳು ಇದ್ದು, ಈಗಾಗಲೇ ಮುಧೋಳ ತಾಲೂಕಿನ ಹಲಗಲಿ ಗ್ರಾಮದಲ್ಲಿ ಜಲಜೀವನ್‌ ಮಿಷನ್ ಯೋಜನೆಯಡಿ ಸಮರ್ಪಕ ನೀರು ಪೂರೈಕೆ ನಿರ್ವಹಣೆಯಲ್ಲಿ ಯಶಸ್ವಿಯಾಗಿದೆ. ಇದೇ ರೀತಿ ಉಳಿದ ಎಲ್ಲ ಪಂಚಾಯತಿ ವ್ಯಾಪ್ತಿಯಲ್ಲಿ ನೀರು ಪೂರೈಕೆಯ ನಿರ್ವಹಿಣೆಯಲ್ಲಿ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಕಡಿಮೆ, ಮಿತ, ವ್ಯವಸ್ಥಿತ ಬಳಕೆ ಆಗಬೇಕಿದೆ. ಗುಣಮಟ್ಟದ ನೀರು ಪೂರೈಕೆಯಾಗಬೇಕು. ನಿಗದಿತ ಪ್ರಮಾಣದಲ್ಲಿ ತಂಡದ ರೂಪದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಸಲಹೆ ಪಡೆದುಕೊಂಡು ಯೋಜನೆ ಯಶಸ್ವಿಗೊಳಿಸಲು ಮುಂದಾಗಬೇಕು ಎಂದು ಹೇಳಿದರು.

ಬೆಂಗಳೂರಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪ ಕಾರ್ಯದರ್ಶಿ ಜಾಫರ ಸುತಾರ ಮಾತನಾಡಿ, ಸರ್ಕಾರ ಕುಡಿಯುವ ನೀರಿನ ಯೋಜನೆಗೆ ಸಾಕಷ್ಟು ಹಣ ಖರ್ಚು ಮಾಡುತ್ತಿದೆ. ಗ್ರಾಮೀಣ ಭಾಗದಲ್ಲಿಯೂ ಸಹ ದಿನ 24 ಗಂಟೆಗಳ ಕಾಲ ನೀರು ಪೂರೈಸುವ ಯೋಜನೆ ಸರ್ಕಾರ ಯೋಜನೆ ರೂಪಿಸಿದೆ. ಈ ಯೋಜನೆ ಯಶಸ್ವಿಗೊಳಿಸಲು ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಗಳಾದ ಅಜಯ ಸಿನ್ಹಾ ಅವರು ಕರ್ನಾಟಕ ಸುಸ್ಥಿರ ಗ್ರಾಮೀಣ ನೀರು ಸರಬರಾಜು ಕಾರ್ಯಕ್ರಮ ಕುರಿತು ವಿವರವಾಗಿ ತರಬೇತಿಯಲ್ಲಿ ತಿಳಿಸಿಕೊಟ್ಟರು. ಪ್ರಾರಂಭದಲ್ಲಿ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಆಕಾಶ ಎಲ್ಲರನ್ನು ಸ್ವಾಗತಿಸಿದರು. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರವಿಕಿರಣ ಡಂಬಳ ವಂದಿಸಿದರು. ಕಾರ್ಯಾಗಾರದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯನಿರ್ವಾಹಕ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಇದ್ದರು.

ಗ್ರಾಮೀಣ ಭಾಗದಲ್ಲಿ ದಿನದ 24 ಗಂಟೆಗಳ ನೀರು ಸರಬರಾಜು ಮಾಡುವುದರಿಂದ ನೀರು ಪೋಲಾಗುವುದನ್ನು ತಡೆಯಬಹುದಾಗಿದೆ. ಕರ್ನಾಟಕ ಸುಸ್ಥಿರ ಗ್ರಾಮೀಣ ನೀರು ಸರಬರಾಜು ಕಾರ್ಯಕ್ರಮ ರಾಜ್ಯದಲ್ಲಿ ಸುರಕ್ಷಿತ ಸುಸ್ಥಿರ ಕುಡಿಯುವ ನೀರಿನ ಲಭ್ಯತೆ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಮಾಡುವ ವಿವಿಧ ಹಂತದ ಸಂಸ್ಥೆಗಳನ್ನು ಬಲಪಡಿಸುವ ಉದ್ದೇಶ ಹೊಂದಿದೆ. ಈ ಕಾರ್ಯಕ್ರಮ ರಾಜ್ಯದ ಎಲ್ಲ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ಐದು ವರ್ಷದ ಅವಧಿಯಲ್ಲಿ ಅನುಷ್ಠಾನ ಮಾಡಲು ಉದ್ದೇಶ ಹೊಂದಲಾಗಿದೆ.

- ಶಶಿಧರ ಕುರೇರ ಜಿಪಂ ಸಿಇಒ

PREV

Recommended Stories

ಮಹಾಜನ ವರದಿ ಒಪ್ಪಿ, ಇಲ್ಲದಿದ್ರೆ ಯಥಾಸ್ಥಿತಿ ಇರಲಿ
ಸೂರಿಲ್ಲದವರಿಗೆ ಸೂರು ಒದಗಿಸುವ ಸಂಕಲ್ಪ: ವಿಜಯಾನಂದ ಕಾಶಪ್ಪನವರ