ಮೋದಿ ಸರ್ಕಾರದ ಸಾಧನೆ ಪ್ರತಿಯೊಬ್ಬರಿಗೆ ಮುಟ್ಟಿಸಿ

KannadaprabhaNewsNetwork |  
Published : Jun 25, 2025, 01:18 AM IST
ಕಾಗವಾಡ | Kannada Prabha

ಸಾರಾಂಶ

ವಿಕಸಿತ ಭಾರತದ ಅಮೃತಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದ ಮೋದಿ ಸರ್ಕಾರಕ್ಕೆ 11 ವರ್ಷದ ಅಂಗವಾಗಿ ಕಾಗವಾಡ ಬಿಜೆಪಿ ಮಂಡಲದ ವಿಕಸಿತ ಭಾರತ ಸಂಕಲ್ಪ ಸಭೆ ಜರುಗಿತು.

ಕನ್ನಡಪ್ರಭ ವಾರ್ತೆ ಕಾಗವಾಡ

ವಿಕಸಿತ ಭಾರತದ ಅಮೃತಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದ ಮೋದಿ ಸರ್ಕಾರಕ್ಕೆ 11 ವರ್ಷದ ಅಂಗವಾಗಿ ಕಾಗವಾಡ ಬಿಜೆಪಿ ಮಂಡಲದ ವಿಕಸಿತ ಭಾರತ ಸಂಕಲ್ಪ ಸಭೆ ಜರುಗಿತು.

ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಕೆಂಪವಾಡದ ಕೇಂದ್ರ ಕಚೇರಿಯಲ್ಲಿ ಮಾಜಿ ಸಚಿವರು ಹಾಗೂ ಕಾಗವಾಡದ ಮಾಜಿ ಶಾಸಕರಾದ ಶ್ರೀಮಂತ ಪಾಟೀಲ ನೇತೃತ್ವ ಹಾಗೂ ಬಿಜೆಪಿ ಚಿಕ್ಕೋಡಿ ಜಿಲ್ಲಾಧ್ಯಕ್ಷರಾದ ಸತೀಶ್ ಅಪ್ಪಾಜಿಗೋಳ ಮತ್ತು ಮಾಜಿ ಶಾಸಕರು ಹಾಗೂ ಬಿಜೆಪಿ ಚಿಕ್ಕೋಡಿ ವಿಭಾಗದ ಪ್ರಭಾರಿಗಳಾದ ಸಂಜಯ ಪಾಟೀಲ ಉಪಸ್ಥಿತಿಯಲ್ಲಿ ಬಿಜೆಪಿ ಕಾಗವಾಡ ಮಂಡಲದ ವತಿಯಿಂದ ವಿಕಸಿತ ಭಾರತ ಸಂಕಲ್ಪ ಸಭೆಯು ನೆರವೇರಿತು.ಪ್ರಾರಂಭದಲ್ಲಿ ಭಾರತೀಯ ಜನಸಂಘದ ಸ್ಥಾಪಕರಾದ ಡಾ.ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನದ ನಿಮಿತ್ತ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ನಮನಗಳನ್ನು ಸಲ್ಲಿಸಲಾಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷರು, ಮಾಜಿ ಸಚಿವರು, ಜಿಲ್ಲಾ ಪ್ರಭಾರಿಗಳ ಹಾಗೂ ಎಲ್ಲ ಮುಖಂಡರುಗಳ ಉಪಸ್ಥಿತಿಯಲ್ಲಿ ಬಿಜೆಪಿ ಕಾಗವಾಡ ಮಂಡಲದ ನೂತನ ಅಧ್ಯಕ್ಷರನ್ನಾಗಿ ಸರ್ವನುಮತದಿಂದ ಜುಗೂಳ ಗ್ರಾಮದ ಅರುಣ ಗಣೇಶವಾಡಿ ಅವರನ್ನು ಆಯ್ಕೆ ಮಾಡಿ ಬಿಜೆಪಿ ಪಕ್ಷದ ಧ್ವಜ ಹಸ್ತಾಂತರಿಸಿ ಅವರಿಗೆ ಕಾಗವಾಡ ಮಂಡಲದ ವತಿಯಿಂದ ಸತ್ಕರಿಸಿ ಅಭಿನಂದಿಸಲಾಯಿತು.ವಿಕಸಿತ ಭಾರತದ ಅಮೃತಕಾಲ ಸೇವೆ ಸುಶಾಸನ ಬಡವರ ಕಲ್ಯಾಣದ ಮೋದಿ ಸರ್ಕಾರಕ್ಕೆ 11 ವರ್ಷಗಳು ಪೂರ್ಣಗೊಂಡ ನಿಮಿತ್ತ ಕೇಂದ್ರ ಸರ್ಕಾರದ ಸಾಧನೆಗಳನ್ನು ಸರ್ವರಿಗೂ ತಲುಪಿಸುವ ಸದುದ್ದೇಶದೊಂದಿಗೆ ನಡೆದ ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಬಿಜೆಪಿ ಚಿಕ್ಕೋಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ್ ಕುಲಕರ್ಣಿ ಮಾತನಾಡಿ, ವಿಕಸಿತ ಭಾರತದ ಅಭಿಯಾನ ಬಗ್ಗೆ ಮಾಹಿತಿ ಕೊಟ್ಟು ಮೋದಿ ಸರ್ಕಾರ 11 ವರ್ಷದಲ್ಲಿ ಮಾಡಿರುವ ಸಾಧನೆಗಳ ಬಗ್ಗೆ ಮಾಹಿತಿ ತಿಳಿಸಿ ವಿಧಾನಸಭೆಯ ಪ್ರತಿಯೊಬ್ಬ ಮತದಾರರವರೆಗೆ ಈ ಮಾಹಿತಿ ಮುಟ್ಟಿಸಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.ಬಿಜೆಪಿ ಚಿಕ್ಕೋಡಿ ಜಿಲ್ಲಾ ಪ್ರಭಾರಿ ಹಾಗೂ ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ, ಮೋದಿ ಸರ್ಕಾರ ಮಾಡಿರುವ ಸಾಧನೆ ಬಗ್ಗೆ ಹಾಗೂ ಸಾಂಸ್ಕೃತಿಕ ಭಾರತದ ಬಗ್ಗೆ ಮಾತನಾಡಿ, ಎಲ್ಲರೂ ಒಗ್ಗಟ್ಟಾಗಿ ಪಕ್ಷ ಸಂಘಟನೆ ಬೆಳೆಸಿ ಪ್ರತಿ ಬೂತ್‌ದಲ್ಲಿ ಬಿಜೆಪಿ ಗೆಲ್ಲುವಂತಹ ತಯಾರಿ ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.ಈ ಸಮಯದಲ್ಲಿ ಮಾಜಿ ಸಚಿವರು ಹಾಗೂ ಕಾಗವಾಡ ಮತಕ್ಷೇತ್ರದ ಮಾಜಿ ಶಾಸಕರಾದ ಶ್ರೀಮಂತ ಪಾಟೀಲ ಮಾತನಾಡಿ, ವಿಕಸಿತ ಭಾರತದ ಅಮೃತ ಕಾಲ ಸೇವೆ ಸುಶಾಸನ ಬಡವರ ಕಲ್ಯಾಣದ ಮೋದಿ ಸರ್ಕಾರ 11 ವರ್ಷಗಳಲ್ಲಿ ಮಾಡಿರುವ ಜನಪರ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ನಾನು ಈ ಹಿಂದೆ ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರದಲ್ಲಿ ಮಾಡಿದ್ದು, ಈಗಿನ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ನಾನು ನಮ್ಮ ಬಿಜೆಪಿ ಕಾರ್ಯಕರ್ತರ ಬೆನ್ನೆಲುಬಾಗಿರುತ್ತೇನೆ. ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ಎಲ್ಲರಿಗೂ ತಲುಪಿಸಿ ಪಕ್ಷ ಸಂಘಟನೆ ಕೆಲಸಕ್ಕೆ ಮುಂದಾಗಿ ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ್ ಕುಲಕರ್ಣಿ, ಮುಖಂಡರಾದ ದಾದಾಗೌಡ ಪಾಟೀಲ, ಶಿವಾನಂದ ಪಾಟೀಲ, ನಿಂಗಪ್ಪಾ ಖೋಕಲೆ, ಅಭಯ ಮಾನ್ವಿ, ಮುರಗೆಪ್ಪ ಮಗದುಮ, ಪ್ರಮೋದ ಹೊಸೂರೆ, ಅಪ್ಪಾಸಾಬ್‌ ಮಳಮಳಸಿ, ಮನೋಜ ಕುಸನಾಳೆ, ಭರತ ಹೊಸೂರೆ, ರಾಕೇಶ ಪಾಟೀಲ, ಕಿರಣ ಯಂದಗೌಡರ, ಅಪ್ಪಣ್ಣ ಮುಜಗೋನವರ, ಆರ್.ಎಂ.ಪಾಟೀಲ, ಈಶ್ವರ ಕುಂಬಾರೆ, ಸುಧಾಕರ ಭಗತ್, ಅಭಯ ಪಾಟೀಲ, ಉತ್ಕರ್ಷ ಪಾಟೀಲ, ಪ್ರಫುಲ್ ಥೋರುಸೆ, ರಾಕೇಶ ಕಾಂಬಳೆ, ಪ್ರವೀಣ ಕೆಂಪವಾಡೆ ಸೇರಿದಂತೆ ಹಲವು ಗ್ರಾಮಗಳ ಮುಖಂಡರು, ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆಯ ಸದಸ್ಯರು, ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ