ಅ.31ರ ಮುಖ್ಯಮಂತ್ರಿಗಳ ಕಾರ್ಯಕ್ರಮ ಯಶಸ್ವಿಗೊಳಿಸಿ: ಪಿ.ಎಂ.ನರೇಂದ್ರಸ್ವಾಮಿ

KannadaprabhaNewsNetwork |  
Published : Oct 28, 2026, 01:45 AM IST
27ಕೆಎಂಎನ್ ಡಿ21 | Kannada Prabha

ಸಾರಾಂಶ

ಯುವಕರನ್ನು ತಳ ಮಟ್ಟದಲ್ಲಿ ಸಂಘಟಿಸಲು ಭಾರತ್ ಜೋಡೋ ಯುವ ಸಂಘ ಸಹಕಾರಿಯಾಗಲಿದೆ. 16 ರಿಂದ 35 ವರ್ಷದೊಳಗಿನ ಯುವಕ ಯುವತಿಯರನ್ನು ಪಟ್ಟಣ ಹಾಗೂ ಗ್ರಾಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಕಾಂಗ್ರೆಸ್ ಮುಖಂಡರು ಶ್ರಮಿಸಬೇಕು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅ.31ರಂದು ಮಂಡ್ಯದಲ್ಲಿ ನಡೆಯಲಿರುವ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವುದರಿಂದ ಸಾರ್ವಜನಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭ ಯಶಸ್ವಿಗೊಳಿಸಬೇಕು ಎಂದು ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕಾರ್ಯಕ್ರಮಕ್ಕೆ ಹೋಗಲು ಎಲ್ಲಾ ಗ್ರಾಮಗಳಿಗೂ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದರು.

ಯುವಕರನ್ನು ತಳ ಮಟ್ಟದಲ್ಲಿ ಸಂಘಟಿಸಲು ಭಾರತ್ ಜೋಡೋ ಯುವ ಸಂಘ ಸಹಕಾರಿಯಾಗಲಿದೆ. 16 ರಿಂದ 35 ವರ್ಷದೊಳಗಿನ ಯುವಕ ಯುವತಿಯರನ್ನು ಪಟ್ಟಣ ಹಾಗೂ ಗ್ರಾಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಕಾಂಗ್ರೆಸ್ ಮುಖಂಡರು ಶ್ರಮಿಸಬೇಕು. ಯುವಕರ ನಾಯಕತ್ವವನ್ನು ರೂಪಿಸಿ ಭವಿಷ್ಯದ ನಾಯಕನಾಗುವಂತೆ ಯುವ ಜನರಿಗೆ ಪಕ್ಷದಿಂದ ಉತ್ತಮ ತರಬೇತಿ ನೀಡಿ ಸದೃಢಗೊಳಿಸಲಾಗುವುದು ಎಂದರು.

ಭಾರತ್‌ ಜೋಡೋ ಯೋಜನೆಯಡಿ ನೋಂದಾಯಿತ ಪ್ರತಿ ಸಂಘಕ್ಕೆ ವಾರ್ಷಿಕ 10 ಲಕ್ಷ ರು. ಅನುದಾನ ನೀಡಲಾಗುವುದು. ಯುವಜನರ ಪ್ರತಿಭೆ, ನಾಯಕತ್ವಗುಣ, ಕ್ರೀಡಾ ಸಾಮಾರ್ಥ್ಯ, ಸೃಜನಶೀಲತೆ ಮತ್ತು ಸಾಮಾಜಿಕ ಹೊಣೆಗಾರಿಕೆ ಬೆಳೆಸುವ ಜೊತೆಗೆ ಸ್ಥಳೀಯ ಸಮುದಾಯದ ಅಭಿವೃದ್ಧಿಯಲ್ಲಿ ಯುವಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಯೋಜನೆ ಉದ್ದೇಶವಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಜಿಪಂ, ತಾಪಂ ಚುನಾವಣೆಗಳು ಬರುತ್ತಿವೆ. ಪಕ್ಷದ ಕಾರ್ಯಕರ್ತರು ಸಂಘಟನೆಯಲ್ಲಿ ತೊಡಬೇಕು. ಯಾವುದೇ ಭಿನ್ನಾಭಿಪ್ರಾಯಗಳು ಇದ್ದರೂ ದೂರ ಮಾಡಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸಲು ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಕರೆ ನೀಡಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಪ್ರದೇಶದ ಲಕ್ಷಾಂತರ ಕುಟುಂಬಗಳು ನೆಮ್ಮದಿಯ ಜೀವನ ನಡೆಸುತ್ತಿವೆ, ಜೊತೆಗೆ ಶಿಕ್ಷಣ, ಆರೋಗ್ಯ, ನೀರಾವರಿ, ಕುಡಿಯುವ ನೀರು ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹಲವು ದೂರದೃಷ್ಠಿ ಯೋಜನೆ ತಂದು ಸಮಗ್ರವಾಗಿ ಅಭಿವೃದ್ಧಿಗೊಳಿಸಲಾಗಿದೆ. ಕಾಂಗ್ರೆಸ್ ಮುಖಂಡರು ಸರ್ಕಾರದ ಜನಪರ ಯೋಜನೆಗಳು ಹಾಗೂ ಕ್ಷೇತ್ರದ ಅಭಿವೃದ್ದಿಯ ಬಗ್ಗೆ ಮನವರಿಕೆ ಮಾಡಿಕೊಡಬೇಕೆಂದು ಸಲಹೆ ನೀಡಿದರು.

ಈ ವೇಳೆ ಸಚಿವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಸಭೆಯಲ್ಲಿ ಮನ್ಮುಲ್ ನಿರ್ದೇಶಕ ಕೃಷ್ಣೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ಟಿಎಪಿಸಿಎಂಎಸ್ ಅಧ್ಯಕ್ಷ ಲಿಂಗರಾಜು ನಿರ್ದೇಶಕರಾದ ಕೆ.ಜೆ,ದೇವರಾಜು, ವಿಶ್ವ, ಮಾದಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ಚಿಕ್ಕಲಿಂಗಯ್ಯ, ಮುಖಂಡರಾದ ನಂಜುಂಡಸ್ವಾಮಿ, ಮಹದೇವು ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೈನ್ ಬಸದಿಯ ಬಾಗಿಲು ತೆರೆಸುವಂತೆ ಮನವಿ
ಲೈಂಗಿಕ ದೌರ್ಜನ್ಯ ತಡೆ ಅಗತ್ಯ: ನ್ಯಾಯಾಧೀಶ ಭರತ್