ಅಣಕು ಪ್ರದರ್ಶನ ಯಶಸ್ವಿಗೊಳಿಸಿ: ಸಿ.ಎನ್‌. ಶ್ರೀಧರ

KannadaprabhaNewsNetwork |  
Published : May 15, 2025, 02:06 AM IST
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ ಮಾತನಾಡಿದರು. | Kannada Prabha

ಸಾರಾಂಶ

ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಪ್ರಕ್ಷುಬ್ಧ ವಾತಾವರಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಗೃಹ ಇಲಾಖೆಯ ಆದೇಶದಂತೆ ಅಭ್ಯಾಸ ಕೈಗೊಳ್ಳಲಾಗುತ್ತಿದ್ದು, ಮಾಕ್‌ಡ್ರಿಲ್ (ಅಣಕು ಪ್ರದರ್ಶನ) ವನ್ನು ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.

ಗದಗ: ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಪ್ರಕ್ಷುಬ್ಧ ವಾತಾವರಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಗೃಹ ಇಲಾಖೆಯ ಆದೇಶದಂತೆ ಅಭ್ಯಾಸ ಕೈಗೊಳ್ಳಲಾಗುತ್ತಿದ್ದು, ಮಾಕ್‌ಡ್ರಿಲ್ (ಅಣಕು ಪ್ರದರ್ಶನ) ವನ್ನು ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜರುಗಿದ ಮಾಕ್ ಡ್ರಿಲ್ (ಅಣಕು ಪ್ರದರ್ಶನ) ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾಕ್ ಡ್ರಿಲ್ (ಅಣಕು ಪ್ರದರ್ಶನ) ವನ್ನು ಗುರುವಾರ (ಮೇ 15ರಂದು) ಸಂಜೆ 4ರಿಂದ 7ರ ವರೆಗೆ ಗದಗ ನಗರದಲ್ಲಿ ಆಯೋಜಿಸಲಾಗುತ್ತಿದೆ. ನಾಗರಿಕ ಸೇವಾ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯದಿಂದ ತುರ್ತು ಪರಿಸ್ಥಿತಿ ಸಮರ್ಥವಾಗಿ ನಿರ್ವಹಿಸುವ ಬಗ್ಗೆ ಪ್ರಾತ್ಯಕ್ಷಿಕೆ ನಿರ್ವಹಿಸಲಾಗುವುದು. ಸಂಬಂಧಿಸಿದ ಇಲಾಖೆಗಳು ತಮಗೆ ವಹಿಸಿದ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕೆಂದು ತಿಳಿಸಿದರು.ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರೊಂದಿಗೆ ಸಂದಿಗ್ಧ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಣೆ ಬಗ್ಗೆ ಇಲಾಖಾ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದಂತಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಪ್ರದರ್ಶನ ಮಾಡುವ ಮೂಲಕ ಪೂರ್ವಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಮಾತನಾಡಿ, ಮಾಕ್‌ಡ್ರಿಲ್ ಮೂಲಕ ವಿವಿಧ ಇಲಾಖೆಗಳು ತಮ್ಮ ಕರ್ತವ್ಯಗಳನ್ನು ನಿಗದಿತ ಸಮಯದಲ್ಲಿ ನಿರ್ವಹಿಸುವ ಬಗ್ಗೆ ಖಚಿತಪಡಿಸಿಕೊಳ್ಳಲಾಗುವುದು ಹಾಗೂ ಅಣಕು ಪ್ರದರ್ಶನದಲ್ಲಿ ಪರಿಸ್ಥಿತಿ ನಿರ್ವಹಣೆಯಲ್ಲಿ ಆಗುವ ತೊಂದರೆಗಳು ಹಾಗೂ ಲೋಪದೋಷಗಳನ್ನು ಗುರುತಿಸಿ ಸರಿಪಡಿಸಲು ಅವಕಾಶ ದೊರೆತಂತಾಗುತ್ತದೆ.

ನಾಗರಿಕ ಸೇವಾ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳಿಗೆ ಹಾಗೂ ಎನ್‌ಎಸ್‌ಎಸ್, ಎನ್‌ಸಿಸಿ, ರೆಡ್ ಕ್ರಾಸ್ , ಮಾಜಿ ಸೈನಿಕರ ತಂಡ, ಸ್ವಯಂ ಸೇವಕರು ಒಟ್ಟಾಗಿ ಅಣಕು ಪ್ರದರ್ಶನದಲ್ಲಿ ಪಾಲ್ಗೊಂಡು ಜಾಗೃತಿ ಮೂಡಿಸಲು ಮುಂದಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ.ಎಂ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ನಗರಾಬಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ಡಿವೈಎಸ್‌ಪಿ ವಿದ್ಯಾನಂದ ನಾಯಕ್, ನಗರಸಭೆ ಪೌರಾಯುಕ್ತ ರಾಜಾರಾಂ ಪವಾರ, ಡಿಎಚ್ಓ ಡಾ. ಎಸ್.ಎಸ್. ನೀಲಗುಂದ, ಡಿಡಿಎಲ್ಆರ್‌ ರುದ್ರಣ್ಣಗೌಡ.ಜಿ.ಜೆ, ಸೇರಿದಂತೆ ತಹಸೀಲ್ದಾರರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ