ತರಬೇತಿಯನ್ನು ಸದ್ಬಳಕೆ ಮಾಡಿಕೊಳ್ಳಿ

KannadaprabhaNewsNetwork |  
Published : Oct 17, 2025, 01:00 AM IST
15ಸಿಎಚ್‌ಎನ್‌54ಹನೂರು ಪಟ್ಟಣದ ಹೋಲಿ ಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಹಾಗೂ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಹೊಲಿಗೆ ತರಬೇತಿ ಸಮಾರೋಪ ಸಮಾರಂಭವನ್ನು ಕ್ರಿಸ್ತ ರಾಜ ವಿದ್ಯಾಸಂಸ್ಥೆಯ ವ್ಯವಸ್ಥಾಪಕರಾದ ಫಾ. ರೋಷನ್ ಅವರು ಉದ್ಘಾಟನೆ ಮಾಡಿ ಮಾತನಾಡಿದರು. | Kannada Prabha

ಸಾರಾಂಶ

ಸ್ವಯಂಸೇವಾ ಸಂಸ್ಥೆಯಾಗಿ ಗ್ರಾಮೀಣ ಭಾಗದ ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುತ್ತಿರುವುದು ಮಹಿಳೆಯರ ಸಬಲೀಕರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕ್ರಿಸ್ತ ರಾಜ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಫಾ. ರೋಷನ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಸ್ವಯಂಸೇವಾ ಸಂಸ್ಥೆಯಾಗಿ ಗ್ರಾಮೀಣ ಭಾಗದ ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುತ್ತಿರುವುದು ಮಹಿಳೆಯರ ಸಬಲೀಕರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕ್ರಿಸ್ತ ರಾಜ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಫಾ. ರೋಷನ್ ತಿಳಿಸಿದರು.

ಪಟ್ಟಣದ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಹಾಗೂ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಮಹಿಳೆಯರಿಗೆ ಉದ್ಯೋಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ದಿನಮಾನಗಳಲ್ಲಿ ಗ್ರಾಮೀಣ ಭಾಗದ ಮಹಿಳೆಯರನ್ನು ಗುರುತಿಸಿ ಅವರಿಗೆ ಕೌಶಲ್ಯ ತರಬೇತಿಯನ್ನು ನೀಡಿ ಸ್ವಯಂ ಉದ್ಯೋಗ ಕೈಗೊಳ್ಳಲು ನೆರವಾಗುತ್ತಿದೆ. ಇದರ ಸದುಪಯೋಗ ಪಡೆದುಕೊಂಡು ಮಹಿಳೆಯರು ಕಲಿತಕ್ಕಸು ಬಂದ ಮುಂದುವರಿಸಿಕೊಂಡು ಜೀವನದಲ್ಲಿ ಮುಂದೆ ಬರಬೇಕು ಭಗವಂತನ ಕೃಪೆಯಿಂದ ಎಲ್ಲರೂ ಒಳ್ಳೆಯ ಜೀವನವನ್ನು ಸಾಗಿಸಬೇಕು ಎಂದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅನಿತಾ ಮಾತನಾಡಿ, ಹೊಲಿಗೆ ತರಬೇತಿಯು ಜೀವನ ನಡೆಸಲು ಬೇಕಾಗಿರುವಂತಹ ಕೌಶಲ್ಯ ತರಬೇತಿಯಲ್ಲಿ ಒಂದಾಗಿದೆ. ಇಲ್ಲಿ ತರಬೇತಿಯನ್ನು ಪಡೆದಂತಹ ಮಹಿಳೆಯರು ವಿವಿಧ ಇಲಾಖೆಯ ಸಹಯೋಗದಲ್ಲಿ ಸಿಗುವಂತಹ ಹೊಲಿಗೆ ಯಂತ್ರಗಳನ್ನು ಪಡೆದುಕೊಂಡು ಪ್ರೀತಿ ಜೀವನವನ್ನ ಮುಂದುವರಿಸುವ ನಿಟ್ಟಿನಲ್ಲಿ ತಾವೆಲ್ಲರೂ ಮುತುವರ್ಜಿ ವಹಿಸಬೇಕಾಗಿದೆ ಎಂದರು. ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಯ ಆಡಳಿತಾಧಿಕಾರಿ ಸಿಸ್ಟರ್ ಗ್ಲೋರಿಯಾ, ಸಿಸ್ಟರ್ ಲೊರೆಟ, ಸಿಸ್ಟರ್ ಶಾಲಿನಿ, ಕಣ್ಣೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ರಾಜಮ್ಮ, ಪಿಡಿಒ ಸಿದ್ದರಾಜು, ಎಲ್ಲೇ ಮಾಳ ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜುಳಾ, ಪ್ರಿಯದರ್ಶಿನಿ, ಹನೂರು ಹೋಲಿಕ್ರಾಸ್ ಸಂಸ್ಥೆಯ ಯೋಜನಾಧಿಕಾರಿ ಸಿಸ್ಟರ್ ಆಲ್ಫಿ, ಸಿಸ್ಟರ್ ಜೆಸಿಂತ, ಸಿಸ್ಟರ್ ಟೆರೇಸಿನ, ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೈಲಲ್ಲೂ ದರ್ಶನ್‌ಗೆ ‘ಅಭಿಮಾನಿಗಳು’ ಕಾಟ!
ನಾಳೆ ಹಲವು ಸಾಧಕರಿಗೆ ಗಾಂಧಿ ಪುರಸ್ಕಾರ ಪ್ರದಾನ