ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ

KannadaprabhaNewsNetwork |  
Published : Apr 03, 2026, 03:00 AM IST
ಕಾರವಾರ | Kannada Prabha

ಸಾರಾಂಶ

ಕುಂದಾನಗರಿ ಬೆಳಗಾವಿಯಲ್ಲಿ‌ ನಡೆಸಲು ಉದ್ದೇಶಿಸಿರುವ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸುವುದರ ಜೊತೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ ಇಟಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕುಂದಾನಗರಿ ಬೆಳಗಾವಿಯಲ್ಲಿ‌ ನಡೆಸಲು ಉದ್ದೇಶಿಸಿರುವ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸುವುದರ ಜೊತೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ ಇಟಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳಿಗಾಗಿಯೇ ನಡೆಯುತ್ತಿರುವ ರಾಜ್ಯಮಟ್ಟದ ಈ ಸಮ್ಮೇಳನವನ್ನು ಅಚ್ಚುಕಟ್ಟಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಬೆಳಗಾವಿಯಲ್ಲಿ ನಡೆಯುವ ಸಮ್ಮೇಳನದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.‌ ಆದರೂ ಸಹ ಈಗಿನಿಂದಲೇ ಸಿದ್ಧತೆಗಳನ್ನು ಆರಂಭಿಸಬೇಕು ಎಂದು ಸಲಹೆ‌ ನೀಡಿದರು.

ಅಗತ್ಯ ಬಿದ್ದರೇ ಸಂಬಂಧಿಸಿದ ಇಲಾಖೆಗಳ‌ ಸಹಕಾರ ಪಡೆದುಕೊಳ್ಳಬೇಕು. ಅಲ್ಲದೇ ಸಮ್ಮೇಳನದ ಹಿನ್ನೆಲೆಯಲ್ಲಿ ಸಮಿತಿಗಳನ್ನು ಉಪಸಮಿತಿಗಳನ್ನು‌ ರಚಿಸಿ ಕೆಲಸ ಕಾರ್ಯಗಳನ್ನು ಮಾಡಬೇಕು. ಎಲ್ಲ ಸಿದ್ಧತೆಗಳ ಮೇಲ್ವಿಚಾರಣೆ ಮಾಡುವಂತೆ‌ ಅಧಿಕಾರಿಗಳಿಗೆ‌ ತಿಳಿಸಿದರು.

ವಿಭಾಗಮಟ್ಟದ ಬಾಲ ಬಾಂಧವ್ಯ ಕಾರ್ಯಕ್ರಮ, ತಾಲೂಕು ಮಟ್ಟದ ಬಾಲ ವಿಕಾಸ ನಡಿಗೆ ಪಾಲಕರ ಕಡೆಗೆ ಕಾರ್ಯಕ್ರಮ ಮತ್ತು ಸಮ್ಮೇಳನದ ಹಿನ್ನೆಲೆಯಲ್ಲಿ ಹೊರತರಲಾಗುವ ಪುಸ್ತಕಕ್ಕಾಗಿ ಮಕ್ಕಳ ಸಾಹಿತ್ಯ ಕುರಿತಾದ ಲೇಖನಗಳನ್ನು ಸಾಹಿತಿಗಳ ಕಡೆಯಿಂದ ಆಹ್ವಾನಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಭೆಯಲ್ಲಿ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪನಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಎಲ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ರಾಜಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ‌ ಜರುಗಲಿದ್ದು, ಸಮ್ಮೇಳನವನ್ನು ಅಚ್ಚುಕಟ್ಟಾಗಿ ಹಾಗೂ ಅವೀಸ್ಮರಣೀಯವಾಗಿ ಆಯೋಜನೆ ಮಾಡಲಾಗುವುದು.

-ಅಡಿವೇಶ ಇಟಗಿ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಡಿ ವಿವಾದ ಹೆಸರಿನಲ್ಲಿ ಭಾಷಾ ವೈಷಮ್ಯ ಆರೋಪ
ಶ್ರೀಗಳ ಸಮಾಜಮುಖಿ ಕಾರ್ಯ ಶ್ಲಾಘನೀಯ: ಬಾಲಚಂದ್ರ ಜಾರಕಿಹೊಳಿ