ಪೋಲಿಯೋ ಲಸಿಕಾ ಅಭಿಯಾನ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಶ್ರೀಧರ್

KannadaprabhaNewsNetwork |  
Published : Dec 12, 2025, 02:15 AM IST
ಸಭೆಯಲ್ಲಿ ಸಿ.ಎನ್. ಶ್ರೀಧರ್‌ ಮಾತನಾಡಿದರು. | Kannada Prabha

ಸಾರಾಂಶ

ಡಾ. ಮುಕುಂದ ಗಲಗಲಿ ಮಾತನಾಡಿ, ಡಿ. 21ರಂದು ಲಸಿಕಾ ಕಾರ್ಯಕ್ರಮವನ್ನು ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಬೂತ್ ಮಟ್ಟದಲ್ಲಿ ಲಸಿಕೆ ನೀಡಲಾಗುತ್ತದೆ. ಡಿ. 22ರಿಂದ ಡಿ. 24ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಗದಗ: ಡಿ. 21ರಂದು ಜಿಲ್ಲಾದ್ಯಂತ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ ತಪ್ಪದೆ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್‌ ಮನವಿ ಮಾಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೋಲಿಯೋ ಲಸಿಕಾ ಅಭಿಯಾನ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಡಿ. 21ರಂದು ಜಿಲ್ಲಾದ್ಯಂತ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ ಮಾತನಾಡಿ, ಡಿ. 21ಕ್ಕೆ 5 ವರ್ಷದೊಳಗಿನ ಪ್ರತಿ ಮಗುವಿಗೂ ತಪ್ಪದೆ ಲಸಿಕೆ ಹಾಕಿಸಲು ಕ್ರಮ ವಹಿಸಲಾಗಿದೆ. ಸಿಬ್ಬಂದಿಗೆ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಹಾಗೂ ರೂಟ್ ಮ್ಯಾಪ್‌ಗಳನ್ನು ಮಾಡಿಕೊಳ್ಳಲಾಗಿದೆ. ವಲಸೆ ಹೋಗಿರುವ ಮತ್ತು ವಲಸೆ ಬಂದಿರುವ ಕುಟುಂಬದ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಲು ಕ್ರಮ ವಹಿಸಲಾಗಿದೆ. ಜಿಲ್ಲೆಯಲ್ಲಿ 5 ವರ್ಷದೊಳಗಿನ 1,15,653 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದರು.

ಡಬ್ಲ್ಯುಎಚ್‌ಒ ವಿಜಯಪುರ ಯುನಿಟ್‌ನ ಎಸ್‌ಎಂಒ ಡಾ. ಮುಕುಂದ ಗಲಗಲಿ ಮಾತನಾಡಿ, ಡಿ. 21ರಂದು ಲಸಿಕಾ ಕಾರ್ಯಕ್ರಮವನ್ನು ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಬೂತ್ ಮಟ್ಟದಲ್ಲಿ ಲಸಿಕೆ ನೀಡಲಾಗುತ್ತದೆ. ಡಿ. 22ರಿಂದ ಡಿ. 24ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಡಿ. 21ರಿಂದ 24ರ ವರೆಗೆ 4 ದಿನ ಸಂಚಾರ ಕೇಂದ್ರಗಳು ಹಾಗೂ ಹೆಚ್ಚಿನ ಅಪಾಯ ಪ್ರದೇಶಗಳಲ್ಲಿ ವಿಶೇಷ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಮೀನಾಕ್ಷಿ ಕೆ.ಎಸ್. ಮಾತನಾಡಿ, 5 ವರ್ಷದೊಳಗಿನ ಮಕ್ಕಳಿಗೆ ಶೇ.100 ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದರು.ಈ ವೇಳೆ ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಕರಿಗೌಡರ, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ. ರಾಜೇಂದ್ರ ಬಸರಿಗಿಡದ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಥೋಡ, ನಗರಸಭೆ ಪೌರಾಯುಕ್ತ ರಾಜರಾಮ ಪವಾರ, ತಾಲೂಕು ವೈದ್ಯಾಧಿಕಾರಿಗಳು, ಸಿಪಿಐ, ಪಲ್ಸ್ ಪೋಲಿಯೋ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸದಸ್ಯರು ಇದ್ದರು.ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ

ಗದಗ: ತಾಲೂಕಿನಾದ್ಯಂತ ಡಿ. 21ರಿಂದ 24ರ ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಸರ್ಕಾರವು ಹಮ್ಮಿಕೊಂಡಿದ್ದು, 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಹನಿ ಹಾಕಿಸಬೇಕು ಮತ್ತು ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕೆಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಡಾ. ರಾಜೇಂದ್ರ ಎಸ್. ಗಡಾದ ತಿಳಿಸಿದರು.ತಾಲೂಕು ಆಡಳಿತ, ತಾಪಂ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಮತ್ತು ತಾಲೂಕು ಪಲ್ಸ್ ಪೋಲಿಯೋ ಟಾಸ್ಕ್‌ಫೋರ್ಸ್ ಸಮಿತಿ ವತಿಯಿಂದ ತಾಲೂಕಿನ ವಿವಿಧ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಮಾತನಾಡಿದರು.

ತಾಲೂಕು ಹಿರಿಯ ಆರೋಗ್ಯ ಸುರಕ್ಷತಾ ಅಧಿಕಾರಿ ಸರೋಜಾ ಕಟ್ಟಿಮನಿ ಮಾತನಾಡಿ, ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಅಂಗನವಾಡಿ ಕಾರ್ಯಕರ್ತೆ ಹಾಗೂ ಆಶಾ ಕಾರ್ಯಕರ್ತೆಯರ ಸಹಕಾರದಲ್ಲಿ ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲ ಇಲಾಖೆಗಳ ಸಮನ್ವಯವೂ ಮುಖ್ಯ ಎಂದರು.ಈ ವೇಳೆ ಪಾಲಕರು- ತಾಯಂದಿರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ