ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿಗೊಳಿಸಿ

KannadaprabhaNewsNetwork |  
Published : Jun 05, 2026, 03:00 AM IST
ಜಿಲ್ಲಾಧಿಾರಿ ಮೊಹಮ್ಮದ ರೋಷನ್‌ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಭಿಯಾನದ ಪೂರ್ವಭಾವಿ ಸಭೆ ನಡೆಯಿತು | Kannada Prabha

ಸಾರಾಂಶ

ಜಿಲ್ಲೆಯಲ್ಲಿನ ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ನೀಡುವುದರ ಮೂಲಕ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನವನ್ನು ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಜಿಲ್ಲೆಯಲ್ಲಿನ ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ನೀಡುವುದರ ಮೂಲಕ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನವನ್ನು ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ಪಲ್ಸ್ ಪೋಲಿಯೋ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂ.28 ರಂದು ಜರುಗಲಿರುವ ಪೋಲಿಯೋ ಅಭಿಯಾನದ ಯಶಸ್ಸಿಗಾಗಿ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವುದರ ಜೊತೆಗೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನೋಡೆಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಿ 5 ವರ್ಷದೊಳಗಿನ ಯಾವೊಬ್ಬ ಮಗು ಲಸಿಕೆಯಿಂದ ವಂಚಿತವಾಗದಂತೆ ಕ್ರಮ ವಹಿಸಲು ಅವರು ಸೂಚಿಸಿದರು.ಮಿಲಿಟರಿ ಪ್ರದೇಶ, ಸೈನಿಕರ ವಸತಿ ಗೃಹಗಳಲ್ಲಿ ವಾಸವಿರುವ 5 ವರ್ಷದೊಳಗಿನ ಎಲ್ಲ ಮಕ್ಕಳ ವಿವರ ಪಡೆದುಕೊಂಡು ಲಸಿಕೆ ನೀಡಲು ನಿಯೋಜಿತ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು. ಮಿಲಿಟರಿ, ರೈಲ್ವೆ ಆಸ್ಪತ್ರೆಗಳಲ್ಲಿಯೂ ಪೋಲಿಯೋ ಲಸಿಕಾ ಭೂತಗಳನ್ನು ತೆರೆಯಲು ತಿಳಿಸಿದರು.ಪೋಲಿಯೋ ಲಸಿಕಾ ಭೂತಗಳ ಕುರಿತು ಸಾರ್ವಜನಿಕರಿಗೆ ಸಾಕಷ್ಟು ಮುಂಚಿತವಾಗಿ ಮಾಹಿತಿ ನೀಡಬೇಕು. ಲಸಿಕಾ ಬೂತ್‌ಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಅದೇ ರೀತಿ ನಗರ ಸ್ಥಳೀಯ ಸಂಸ್ಥೆಗಳಲ್ಲಿಯೂ ಕ್ರಮ ವಹಿಸಬೇಕು. ಲಸಿಕೆಗಳನ್ನು ನಿಗದಿತ ಸಮಯದೊಳಗಾಗಿ ಎಲ್ಲ ಬೂತಗಳಿಗೆ ವಿತರಿಸಬೇಕು. ಲಸಿಕಾ ಸಾಗಾಣಿಕೆಗಾಗಿ ಅಗತ್ಯವಿರುವ ವಾಹನಗಳ ವ್ಯವಸ್ಥೆ ಮಾಡಿಕೊಳ್ಳುವುದರ ಮೂಲಕ ಲಸಿಕೆಗಳನ್ನು ನಿಗದಿತ ಸಮಯಕ್ಕೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವಿತರಣೆಯಾಗುವಂತೆ ಕ್ರಮ ಕೈಗೊಳ್ಳಬೇಕು.

ಲಸಿಕಾ ಅಭಿಯಾನಕ್ಕಾಗಿ ಅಗತ್ಯದ ಸಿಬ್ಬಂದಿಯನ್ನು ನಿಯೋಜಿಸಿ ಅಭಿಯಾನದ ಅಂತ್ಯದವರೆಗೆ ವಿದ್ಯುತ್ ವ್ಯತ್ಯಯವಾಗದಂತೆ ನಿಗಾ ವಹಿಸಲು ಸೂಚಿಸಿದರು. ಜಿಲ್ಲೆಯ ಯಾವುದೇ ಮಕ್ಕಳು ಲಸಿಕಾ ಕಾರ್ಯದಿಂದ ವಂಚಿತರಾಗಬಾರದು. ಈ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳುವುದರ ಮೂಲಕ ಪಲ್ಸ್ ಪೋಲಿಯೋ ಅಭಿಯಾನವನ್ನು ಯಶಸ್ವಿಗೊಳಿಸಲು ತಿಳಿಸಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಈಶ್ವರ ಗಡಾದಿ ಮಾತನಾಡಿ, ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಯಶಸ್ವಿಗಾಗಿ ಜಿಲ್ಲೆಯಲ್ಲಿ ಕೈಗೊಳ್ಳಲಾದ ಕ್ರಮಗಳ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಏರ್‌ಫೋರ್ಸ್ 9 ವಿಂಗ್ ಕಮಾಂಡರ್ ರಾಹುಲ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ ಸಂಜಯ ದೊಡಮನಿ, ಕಾಂಟೊನ್ಮೆಂಟ್ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.ಶಾಲಾ ಶಿಕ್ಷಣ ಇಲಾಖೆಯು ಪೋಲಿಯೋ ಲಸಿಕಾ ಕಾರ್ಯಕ್ರಮದ ಕುರಿತು ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯ ಐದು ವರ್ಷದೊಳಗಿನ ಎಲ್ಲ ಮಕ್ಕಳ ವಿವರ ಪಡೆದುಕೊಂಡು ಪ್ರತಿ ಮನೆಗೂ ಭೇಟಿ ನೀಡಿ ಐದು ವರ್ಷದೊಳಗಿನ ಪ್ರತಿಯೊಂದು ಮಗು ಲಸಿಕೆ ಪಡೆದುಕೊಂಡಿರುವ ಕುರಿತು ಖಾತ್ರಿ ಪಡಿಸಿಕೊಳ್ಳಬೇಕು.

-ಮೊಹಮ್ಮದ್ ರೋಷನ್,

ಜಿಲ್ಲಾಧಿಕಾರಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆರು ಜನ ಹತ್ಯೆ: ಮತ್ತೆ 6 ಆರೋಪಿಗಳ ಸೆರೆ
ನ್ಯಾಯಾಧೀಕರಣದ ತೀರ್ಪಿನ ಬಗ್ಗೆ 8ಕ್ಕೆ ವಿಚಾರ ಸಂಕಿರಣ