ಕನ್ನಡಪ್ರಭ ವಾರ್ತೆ ಬೆಳಗಾವಿ
ಸುವರ್ಣವಿಧಾನಸೌಧದಲ್ಲಿ ಬುಧವಾರ ಜರುಗಿದ ಚಳಿಗಾಲ ಅಧಿವೇಶನದ ಪೂರ್ವಸಿದ್ಧತಾ ಸಭೆ ನಡೆಸಿದ ಅವರು, ಡಿ.8 ರಿಂದ 19ರವರೆಗೆ ಜರುಗಲಿರುವ ಚಳಿಗಾಲದ ಅಧಿವೇಶನಕ್ಕೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುವ ಮೂಲಕ ಅಧಿವೇಶನ ಯಶಸ್ವಿಗೊಳಿಸಬೇಕು. ಅಧಿವೇಶನದ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳನ್ನು ಕೂಡಲೇ ಸಂಬಂಧಿತರ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಹೇಳಿದರು.
ನೆಟ್‌ವರ್ಕ್ ಸಮಸ್ಯೆ ತಲೆದೋರದಂತೆ ನಿಗಾವಹಿಸಬೇಕು. ಅಗತ್ಯ ಗಣಕಯಂತ್ರ ಸೇರಿ ಇತರೆ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಅಧಿವೇಶನ ಸಂದರ್ಭದಲ್ಲಿ ಪ್ರತಿಭಟನಾಕಾರರಿಗೆ ಸೂಕ್ತ ಸ್ಥಳಾವಕಾಶ ಗುರುತಿಸುವ ಜೊತೆಗೆ ಪ್ರತಿಭಟನಾ ಸ್ಥಳದಲ್ಲಿ ಅಗತ್ಯ ಸೌಲಭ್ಯ ಹಾಗೂ ಸೂಕ್ತ ಪೊಲೀಸ್ ಭದ್ರತೆ ಒದಗಿಸಲು ಕ್ರಮ ವಹಿಸಬೇಕು ಎಂದರು.ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಚಳಿಗಾಲ ಅಧಿವೇಶನಕ್ಕೆ ಆಗಮಿಸುವ ಸಚಿವರು, ಶಾಸಕರಿಗೆ ಸಚಿವಾಲಯದ ಅಧಿಕಾರಿ, ಸಿಬ್ಬಂದಿ ಹಾಗೂ ಮಾರ್ಷಲ್‌ಗಳಿಗೆ ಸೂಕ್ತ ಸಾರಿಗೆ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಬೇಕು. ಅಧಿವೇಶನ ವೇಳೆ ಸಚಿವರು, ಶಾಸಕರು ತಂಗುವ ಹೋಟೆಲ್‌ಗಳಲ್ಲಿ ತಜ್ಞ ವೈದ್ಯರ ತಂಡ ನಿಯೋಜಿಸಬೇಕು. ಅದೇ ರೀತಿ ಸುವರ್ಣ ವಿಧಾನ ಸೌಧದಲ್ಲಿಯೂ ವೈದ್ಯರ ತಂಡವನ್ನು ಸುಸಜ್ಜಿತ ಆಂಬ್ಯುಲೆನ್ಸ್‌ನೊಂದಿಗೆ ನಿಯೋಜಿಸುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಅಧಿವೇಶನಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಪೂರ್ವ ತಯಾರಿ ಕುರಿತು ವಿವರಿಸಿದರು. ಕಳೆದ ಬಾರಿಯಂತೆ ಹನ್ನೆರೆಡು ಸಮಿತಿಗಳನ್ನು ರಚಿಸಿದ್ದು, ಆಯಾ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕ ರಾಜು(ಆಸೀಫ್) ಸೇಠ್, ವಿಧಾನಸಭೆ ಕಾರ್ಯದರ್ಶಿ ಆರ್.ವಿಶಾಲಾಕ್ಷಿ, ವಿ. ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ, ಎಸ್ಪಿ ಡಾ.ಭೀಮಾಶಂಕರ ಗುಳೇದ, ಜಿಪಂ ಸಿಇಒ ರಾಹುಲ ಶಿಂಧೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ನಂತರ ವಿಧಾನಸಭೆ, ವಿಧಾನ ಪರಿಷತ್ ಸಭಾಂಗಣ, ಸೆಂಟ್ರಲ್ ಹಾಲ್, ಬ್ಯಾಂಕ್ವೆಟ್ ಹಾಲ್ ಮತ್ತಿತರ ಸ್ಥಳಗಳನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪರಿಶೀಲಿಸಿ, ಧ್ವನಿ ವ್ಯವಸ್ಥೆ, ಸ್ವಚ್ಛತೆ ಸೇರಿದಂತೆ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಕೋಟ್
ಯು.ಟಿ.ಖಾದರ್, ವಿಧಾನಸಭೆ ಸಭಾಧ್ಯಕ್ಷ