ಕನ್ನಡಪ್ರಭ ವಾರ್ತೆ ಬೀಳಗಿ
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ತಮ್ಮ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟಕ್ಕೆ ಮುಂದಾಗಿರುವುದು ಸರ್ಕಾರದ ಗಮನ ಸೆಳೆಯಬೇಕಾದ ಗಂಭೀರ ವಿಚಾರವಾಗಿದೆ. ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಮತ್ತು ಸಿಬ್ಬಂದಿ ಪಿಂಚಣಿ, ವೇತನ, ಬಡ್ತಿ, ಸೇವಾ ಭದ್ರತೆ ಹಾಗೂ ಇತರ ಸೌಲಭ್ಯಗಳಿಗಾಗಿ ಹೋರಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿರುವುದು ಕಳವಳಕಾರಿ ಸಂಗತಿಯಾಗಿದೆ.
ಶಿಕ್ಷಣ ಸಂಸ್ಥೆಗಳ ನೌಕರರ ಪ್ರಮುಖ ಬೇಡಿಕೆಗಳಲ್ಲಿ 01-04-2006ರ ನಂತರ ನೇಮಕಗೊಂಡ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವುದು, ನ್ಯಾಯಾಲಯದ ಆದೇಶದಂತೆ ಕಾಲ್ಪನಿಕ ವೇತನ ಸೌಲಭ್ಯ ಕಲ್ಪಿಸುವುದು, 1995ರ ನಂತರ ಪ್ರಾರಂಭವಾದ ಅನುದಾನರಹಿತ ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು, ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು, ಆರೋಗ್ಯ ಸಂಜೀವಿನಿ ಯೋಜನೆ ಹಾಗೂ ಮಹಿಳಾ ನೌಕರರಿಗೆ ಮುಟ್ಟಿನ ರಜೆ ಸೌಲಭ್ಯ ಕಲ್ಪಿಸುವುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗುವುದು ಎಂದು ಹೇಳಿದರು.ನವೆಂಬರ್ 17ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಾಗೂ ನವೆಂಬರ್ 18ರಂದು ಶಾಲಾ-ಕಾಲೇಜು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಶಿಕ್ಷಕರ ಹಾಗೂ ಪದವೀಧರರ ಜನಪ್ರತಿನಿಧಿಗಳ, ಶಿಕ್ಷಣ ಸಂಸ್ಥೆಗಳ ನೌಕರರ ಸಂಘಟನೆಗಳೊಂದಿಗೆ ಮಾತುಕತೆ ನಡೆಸಿ, ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಇಲ್ಲವಾದಲ್ಲಿ ಈ ಹೋರಾಟ ಉಗ್ರರೂಪಕ್ಕೆ ತೆರಳಬಹುದು ಎಂದು ಎಚ್ಚರಿಸಿದ ಅವರು,