ಕನ್ನಡಪ್ರಭ ವಾರ್ತೆ ಮಣಿಪಾಲ
ಅವರು ಸೋಮವಾರ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಉಡುಪಿ ಹಾಗೂ ಜಸ್ಟ್ ರೋಲ್ ಫಿಲ್ಮ್ಸ್ ಸಹಯೋಗದೊಂದಿಗೆ ಜಿಲ್ಲೆಯ ಪ್ರವಾಸಿ ತಾಣಗಳನ್ನೊಳಗೊಂಡ, ಸುಮಧುರ ಹಾಡಿನೊಂದಿಗೆ ರಚಿಸಿರುವ ‘ಉಡುಪಿ ಆಂಥೆಮ್’ ಎಂಬ ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸುವ ವೀಡಿಯೋ ಚಿತ್ರಣವನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಸ್ವಾಭಾವಿಕ ಪ್ರಕೃತಿ ಸೌಂದರ್ಯ, ಭೋರ್ಗರೆಯುವ ಕಡಲಕಿನಾರೆಗಳು, ಹಳ್ಳಕೊಳ್ಳ, ತೊರೆನದಿಗಳು, ಪಶ್ಚಿಮ ಘಟ್ಟದ ಶ್ರೇಣಿಗಳು ಹಾಗೂ ಧಾರ್ಮಿಕ ಪ್ರವಾಸಿ ಕೇಂದ್ರಗಳು ಒಳಗೊಂಡಂತೆ 48 ಪ್ರವಾಸಿ ತಾಣಗಳ ಜೊತೆಗೆ 32 ಪ್ರವಾಸಿ ತಾಣಗಳನ್ನು ಹೊಸದಾಗಿ ಗುರುತಿಸುವುದರೊಂದಿಗೆ ಬರುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಜಿಲ್ಲಾಡಳಿತ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಆಧುನಿಕ ತಂತ್ರಜ್ಞಾನಗಳ ಬಳಕೆಯೊಂದಿಗೆ ಹೆಚ್ಚು ಜನರನ್ನು ತಲುಪಿಸುವ ಕೆಲಸವಾಗಬೇಕಿದೆ ಎಂದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು., ವಾರ್ತಾಧಿಕಾರಿ ಮಂಜುನಾಥ್, ಜಸ್ಟ್ ರೋಲ್ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್‌ನ ನಿರ್ದೇಶಕ, ನಿರ್ಮಾಪಕರು ಹಾಗೂ ಸಾಹಿತ್ಯ ಸಂಯೋಜಕರು ಉಪಸ್ಥಿತರಿದ್ದರು.