ಕೊಳ್ಳೇಗಾಲದಲ್ಲಿ ‘ವಿಕಸಿತ ಭಾರತ ರೋಜಗಾರ್ ಆ್ಯಂಡ್ ಆಜೀವಿಕ ಮಿಷನ್’ (ಜಿ ರಾಮ್ ಜಿ) ಅನುಷ್ಠಾನ ಸಭೆ
ತಾಲೂಕಿನಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕಾ ಮಿಷನ್ ಯೋಜನೆಯ ಟಿಟಿಸಿ ಅನುಷ್ಠಾನಗೊಂಡಿದ್ದು, ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಹಾಯಕ ನಿರ್ದೇಶಕ ಬಿ.ಕೆ ಸಂದೇಶ ಅವರು ತಿಳಿಸಿದರು.
ಚಿಕ್ಕಲ್ಲೂರು ಗ್ರಾಮದಲ್ಲಿ ತಾಲೂಕು ಪಂಚಾಯ್ತಿಯಿಂದ ಆಯೋಜಿಸಲಾಗಿದ್ದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕಾ ಮಿಷನ್ ಯೋಜನೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಗ್ರಾಮೀಣ ಜನರನ್ನು ಆರ್ಥಿಕವಾಗಿ ಸ್ವಾವಲಂಬನೆಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯು ಜು.1ರಿಂದ ಅಧಿಕೃತವಾಗಿ ಅನುಷ್ಠಾನಕ್ಕೆ ಬಂದಿದೆ. ಎಲ್ಲರೂ ಈ ಯೋಜನೆಯ ಅನುಕೂಲ ಪಡೆಯಬೇಕು ಎಂದರು.
ಕೃಷಿ ಚಟುವಟಿಕೆಯ ಸಮಯದಲ್ಲಿ 60 ದಿನಗಳ ಕಾಲ ವಿರಾಮ ನೀಡುವ ವಿಶೇಷ ವ್ಯವಸ್ಥೆಯನ್ನು ಮಾಡಲಾಗಿದೆ. ಚಿಕ್ಕಲ್ಲೂರು ಮತ್ತು ತೆಳ್ಳನೂರು ಗ್ರಾಮ ಪಂಚಾಯ್ತಿಯು ಈ ಯೋಜನೆಯನ್ನು ಸಮರ್ಪಕ ಅನುಷ್ಠಾನ ಮಾಡಬೇಕು ಎಂದರು.
ಯೋಜನೆಯಡಿ ಕೆರೆ-ಕಟ್ಟೆ, ಕಾಲುವೆ, ಕುಡಿಯುವ ನೀರು, ಮನೆ ನಿರ್ಮಾಣಕ್ಕೆ ನೆರವು, ಜಲ ಸಂರಕ್ಷಣೆ, ಚೆಕ್‌ಡ್ಯಾಂ ನಿರ್ಮಾಣ, ಕೊಳವೆ ಪುನಃಶ್ಚೇತನ, ಸಿ.ಸಿ ರಸ್ತೆ, ಅಂಗನವಾಡಿ ಕಟ್ಟಡ ದುರಸ್ತಿ, ಪಂಚಾಯತ್ ರಾಜ್ ಕಟ್ಟಡ ದುರಸ್ತಿ ಮತ್ತು ನಿರ್ವಹಣೆ, ಅಡುಗೆ ಕೋಣೆ, ಆಟದ ಮೈದಾನ, ಶಾಲಾ ಶೌಚಾಲಯ, ಸ್ವ-ಸಹಾಯ ಸಂಘದ ಕಟ್ಟಡ ನಿರ್ಮಾಣ ಮತ್ತು ಗೋದಾಮು ನಿರ್ಮಾಣ ಇನ್ನಿತರೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬಹುದಾಗಿದೆ. ಯೋಜನೆಯ ಬದಲಾವಣೆಯಿಂದ ಕೂಲಿಕಾರರು ಉದ್ಯೋಗದಿಂದ ವಂಚಿತರಾಗುವುದಿಲ್ಲ. ಎಲ್ಲಾ ಅರ್ಹರಿಗೆ ನಿರಂತರ ಕೆಲಸ ದೊರೆಯಲಿದೆ ಎಂದು ತಿಳಿಸಿದರು.
---
ಕೊಳ್ಲೇಗಾಲ ತಾಲೂಕಿನ ಚಿಕ್ಕಲ್ಲೂರು ಗ್ರಾಮದಲ್ಲಿ ತಾಲೂಕು ಪಂಚಾಯ್ತಿಯಿಂದ ಆಯೋಜಿಸಿದ್ದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕಾ ಮಿಷನ್ ಯೋಜನೆಯ ಕಾರ್ಯಕ್ರಮವನ್ನು ಸಹಾಯಕ ನಿರ್ದೇಶಕ ಬಿ.ಕೆ ಸಂದೇಶ ಅವರು ಉದ್ಘಾಟಿಸಿದರು.