ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಭಗವಾನ್ ಬುದ್ಧ ಕಾನೂನು ಕಾಲೇಜಿನ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾನೂನು ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಹಲವು ಕ್ಷೇತ್ರಗಳಲ್ಲಿ ಸಾಕಷ್ಟು ಅವಕಾಶಗಳಿವೆ. ಅವುಗಳ ಸಮರ್ಪಕ ಬಳಕೆಗೆ ಮುಂದಾಗಬೇಕು ಎಂದರು.
ಕಾನೂನು ವಿಭಾಗ ಹೊರತು ಪಡಿಸಿ ಇತರೆ ಪದವಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಆ ವಿಷಯಕ್ಕೆ ಮಾತ್ರ ಸೀಮಿತವಾದ ಉದ್ಯೋಗ ಅವಕಾಶಗಳಿವೆ. ಕಾನೂನು ಕ್ಷೇತ್ರದ ಉದ್ಯೋಗವಕಾಶಗಳೊಂದಿಗೆ ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಮುಕ್ತ ಅವಕಾಶ ದಕ್ಕಿಸಿಕೊಳ್ಳಬಹುದು. ಹೀಗಾಗಿ ಇತ್ತೀಚಿನ ದಿನಗಳಲ್ಲಿ ಕಾನೂನು ಪದವಿ ಶಿಕ್ಷಣಕ್ಕೆ ಹೆಚ್ಚಿನ ಆಶಕ್ತಿ ನೀಡಲಾಗುತ್ತಿದೆ ಎಂದರು.ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಹಿರಿಯ ವಿದ್ಯಾರ್ಥಿಗಳು ರ್‍ಯಾಗಿಂಗ್ ಮೂಲಕ ಸ್ವಾಗತಿಸಿದ ಹಿನ್ನೆಲೆಯಲ್ಲಿ 15 ಮೆಡಿಕಲ್ ಕಾಲೇಜುಗಳಿಗೆ ನೋಟಿಸ್ ನೀಡಲಾಗಿದೆ. ಆದರೆ, ಭಗವಾನ್ ಬುದ್ಧ ಶಿಕ್ಷಣ ಇಂಥ ಕಾರ್ಯಕ್ರಮದ ಮೂಲಕ ಸ್ವಾಗತಿಸುತ್ತಿರುವುದು ಸಂತಸ ತಂದಿದೆ. ಅಲ್ಲದೇ, ಹೊಸ ಸಂಪ್ರದಾಯಕ್ಕೆ ಈ ಕಾಲೇಜು ಸಾಕ್ಷಿಯಾಗಿದೆ. ಕಾನೂನಿನ ಜ್ಞಾನವು ಎಲ್ಲರಿಗೂ ಮುಖ್ಯವಾಗಿದೆ. ಓದಿನಿಂದ ಹಲವು ವಿಷಯಗಳು ತಿಳಿಯುತ್ತವೆ ಎಂದು ಶ್ಲಾಘಿಸಿದರು.
ಅಧ್ಯಕ್ಷತೆ ವಹಿಸಿ ಭಗವಾನ್ ಬುದ್ಧ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯಮದೂರು ಸಿದ್ದರಾಜು ಮಾತನಾಡಿ, ಪ್ರಸ್ತುತದ ಸಮಾಜದಲ್ಲಿ ನಡೆಯುತ್ತಿರುವ ಶೋಷಣೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿ ಗ್ರಾಮಗಳಲ್ಲೂ ವಕೀಲರು ಇರಬೇಕು ಎನ್ನುವ ಉದ್ದೇಶದಿಂದ ಕಾನೂನು ಕಾಲೇಜು ಆರಂಭಿಸಲಾಗಿದೆ ಎಂದರು.