200ಕ್ಕೂಹೆಚ್ಚು ಅಹವಾಲುಗಳ ಸಲ್ಲಿಕೆ । ಸಾರ್ವಜನಿಕರೊಂದಿಗೆ ಸೌಜನ್ಯದಿಂದ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ
ಆಡಳಿತವನ್ನು ಜನರ ಬಳಿಗೆ ತೆಗೆದುಕೊಂಡು ಹೋಗಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸುವ ವ್ಯವಸ್ಥೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಜನಸ್ಪಂದನಾ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಈ ಕಾರ್ಯಕ್ರಮವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ.ಸುಧಾಕರ್ ಮನವಿ ಮಾಡಿದರು.
ಜಿಲ್ಲಾಡಳಿತ, ತಾಲೂಕಾಡಳಿತದ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸರ್ಕಾರಿ ಬಾಲಕಿಯರ ಶಾಲಾ ಆವರಣದಲ್ಲಿನ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವ ಹಾಗೂ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪ್ರತಿ ಅರ್ಹರಿಗೂ ದೊರಕಿಸಿಕೊಡುವ ಉದ್ದೇಶದಿಂದ ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎಂದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರ ಬಳಿಗೆ ಸರ್ಕಾರದ ಕಾರ್ಯಕ್ರಮಗಳನ್ನು ನಡೆಸುವ,ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.
ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ಯಂತ್ರವನ್ನು ಚುರುಕುಗೊಳಿಸುವ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಮುಟ್ಟಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ದೇಶನದಂತೆ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದರು.
----
ಭಾಗೇಪಲ್ಲಿಯನ್ನು ಭಾಗ್ಯನಗರವನ್ನಾಗಿಸಿ
ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಾರ್ವಜನಿಕರ ಹಲವು ಸಮಸ್ಯೆಗಳಿಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಸಂಬಂಧಪಟ್ಟ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿದರು. ಉಳಿದ ಸಮಸ್ಯೆಗಳಿಗೆ ಕಾಲಮಿತಿಯೊಳಗೆ ಆಯಾ ಇಲಾಖೆಗಳಿಗೆ ಪರಿಹಾರಕ್ಕೆ ಸೂಚಿಸಿದರು.ಈ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ, ಪುರಸಭೆಗೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಸಮಸ್ಯೆಗಳ ಬಗ್ಗೆ 200 ಕ್ಕೂ ಹೆಚ್ಚಿನ ಅಹವಾಲುಗಳನ್ನು ಸಾರ್ವಜನಿಕರು ಸಚಿವರಿಗೆ ಸಲ್ಲಿಸಿದರು. ಈ ದೂರುಗಳ ಪೈಕಿ ಕಂದಾಯ ಇಲಾಖೆ ಹಾಗೂ ಪುರಸಭೆಗೆ ಸಂಬಂಧಿಸಿದ ದೂರುಗಳೇ ಹೆಚ್ಚಾಗಿದ್ದವು ಎನ್ನುವುದು ವಿಶೇಷವಾಗಿತ್ತು. ------17ಬಿಜಿಪಿ-1: ಬಾಗೇಪಲ್ಲಿಯಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಉದ್ಘಾಟಿಸಿದರು.ಜಿಲ್ಲಾಧಿಕಾರಿಗಳಾದ ರವೀಂದ್ರ ಇದ್ದರು.----