ಕನ್ನಡಪ್ರಭ ವಾರ್ತೆ ಕೋಲಾರಕಾರ್ಮಿಕ ಸಂಘಟನೆಗಳು, ಸಾರ್ವಜನಿಕರು, ಉದ್ಯೋಗದಾತರು ಹಾಗೂ ಯೋಜನೆಗಳನ್ನು ಅನುಮಾನ ಮಾಡುತ್ತಿರುವ ಸಂಘಟನೆಯ ಪದಾಧಿಕಾರಿಗಳಿಗೆ ಯೋಜನೆ ಮತ್ತು ಕಾನೂನು ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮವನ್ನು ಕಾರ್ಮಿಕ ಇಲಾಖೆಯಿಂದ ಏರ್ಪಡಿಸಲಾಗುತ್ತಿದ್ದು, ಇದರ ಪ್ರಯೋಜನ ಪಡೆಯಬೇಕೆಂದು ಜಿಲ್ಲಾಧಿಕಾರಿ ಅಕ್ರಂಪಾಷ ಹೇಳಿದರು.ನಗರದ ಜಿಲ್ಲಾಡಳಿತ ಆಡಿಟೋರಿಯಂ ಭವನದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆಯಲ್ಲಿ ಅನುಮಾನ ವ್ಯಕ್ತವಾಗುತ್ತಿರುವ ಯೋಜನೆ, ಕಾನೂನುಗಳ ಅರಿವು ಹಾಗೂ ಅಭಿಪ್ರಾಯ ಸಂಗ್ರಹ ಸಂಬಂಧಿತ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಯೋಜನೆಗಳ ಬಗ್ಗೆ ಅರಿವು ಮೂಡಿಸಿ
ಸರ್ಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಕಾರ್ಮಿಕರ ಕೌಶಲ ಹೆಚ್ಚಿಸಲು ಹಲವಾರು ಕಾನೂನು ಹಾಗೂ ನಿಯಮ ಜಾರಿಗೆ ಮಾಡಲಾಗಿದೆ. ಈ ಬಗ್ಗೆ ಅರಿವು ಕಾರ್ಯಕ್ರಮ ರೂಪಿಸಿದರೆ ಮಾತ್ರ ಜನರಲ್ಲಿ ಜಾಗೃತಿ ಮೂಡುತ್ತದೆ. ಕೊರೋನಾ ಸಂದರ್ಭದಲ್ಲಿ ಕಾರ್ಮಿಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದ ಘಟನೆಗಳನ್ನು ನೆನೆಯುತ್ತಾ, ಆ ಸಮಯದಲ್ಲಿ ಕಾರ್ಮಿಕ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭವನ್ನು ನೆನಪಿಸಿಕೊಂಡ ಅವರು, ಸುಮಾರು ೫ ಲಕ್ಷ ಬೇರೆ ರಾಜ್ಯದ ಉದ್ಯೋಗಿಗಳಿಗೆ ಆಹಾರ ಹಾಗೂ ತಮ್ಮ ತಮ್ಮ ಊರುಗಳಿಗೆ ಹೋಗಲು ರೈಲು ಸಂಚಾರ ಒದಗಿಸಲಾಗಿತ್ತು ಎಂದು ಹೇಳಿದರು.ಕಾರ್ಮಿಕರಿಗೆ ಕಾನೂನು ಅರಿವಿಲ್ಲ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ್ ಎಸ್.ಹೊಸಮನಿ ಮಾತನಾಡಿ, ಕೇಂದ್ರ-ರಾಜ್ಯ ಸರ್ಕಾರಗಳಿಂದ ಕಾರ್ಮಿಕರಿಗೆ ೩೧ ಕಾನೂನುಗಳು ಇದ್ದರೂ ಸಹ ಅವುಗಳ ಅರಿವಿಲ್ಲದಿರುವುದು ದುರದೃಷ್ಟ ಸಂಗತಿ, ಕಾರ್ಮಿಕರಲ್ಲಿ ಎರಡು ವಿಧಗಳಿವೆ ಸಂಘಟಿತ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರು, ಸಂಘಟಿತ ಕಾರ್ಮಿಕರು ತಮಗೆ ಸಿಗಬೇಕಾದ ಸೌಲಭ್ಯಗಳಿಗೆ ಹೋರಾಡುತ್ತಾರೆ, ಆದರೆ ಅಸಂಘಟಿತ ಕಾರ್ಮಿಕರಲ್ಲಿ ಅರಿವು ಇರುವುದಿಲ್ಲ. ಅಸಂಘಟಿತ ಕಾರ್ಮಿಕರ ಮೇಲೆ ತಮ್ಮ ಮಾಲೀಕರು, ಮಧ್ಯವತಿಗಳು ದಬ್ಬಾಳಿಕೆ ನಡೆಸುತ್ತಿರುತ್ತಾರೆ ಹಾಗೂ ಅವರ ಸೌಲಭ್ಯಗಳನ್ನು ದುರುಪಯೋಗಪಡಿಸುತ್ತಿದ್ದಾರೆ ಎಂದು ಹೇಳಿದರು.ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯಿಂದ ಪಿಂಚಣಿ ಸೌಲಭ್ಯ, ಕುಟುಂಬ ಪಿಂಚಣಿ ಸೌಲಭ್ಯ, ದುರ್ಬಲತೆ ಪಿಂಚಣಿ, ಟೂಲ್‌ಕಿಟ್ ಸೌಲಭ್ಯ, ಹೆರಿಗೆ ಸೌಲಭ್ಯ, ಅಂತ್ಯಕ್ರಿಯೆ ವೆಚ್ಚ ಶೈಕ್ಷಣಿಕ ಸಹಾಯಧನ, ಅಪಘಾತ ಪರಿಹಾರ ಪ್ರಮುಖ ವೈದ್ಯಕೀಯ ಸಹಾಯಧನ, ಮದುವೆ ಸಹಾಯಧನ ಹಾಗೂ ತಾಯಿ-ಮಗು ಸಹಾಯ ಹಸ್ತ ಸೌಲಭ್ಯಗಳನ್ನು ಪಡೆಯಬೇಕೆಂದರು.
ಸೌಲಭ್ಯ ಬಳಸಿಕೊಳ್ಳಲು ಸಲಹೆಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಿಂದ ಅಪಘಾತ ಪರಿಹಾರ ಸೌಲಭ್ಯ ಸಹಜ ಮರಣ ಪರಿಹಾರ ಮತ್ತು ಅಂತ್ಯಕ್ರಿಯೆ ವೆಚ್ಚ ಸೌಲಭ್ಯಗಳು ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಅಪಘಾತ ಪರಿಹಾರ ಶೈಕ್ಷಣಿಕ ಧನ ಸಹಾಯ, ಅಪಘಾತ ಜೀವ ರಕ್ಷಕ ಕಾರ್ಯಕ್ರಮ ಪಡೆದುಕೊಂಡು ತಮ್ಮ ಜೀವನ ಉತ್ತಮಪಡಿಸಿಕೊಳ್ಳಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ಬೆಂಗಳೂರು ೩-ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಸಂತೋ? ಹಿಪ್ಪರಗಿ, ಹೊಸಕೋಟೆ ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯ ಉಪ ನಿರ್ದೇಶಕ ನರಸಿಂಹಮೂರ್ತಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀನಿವಾಸ್.ಕೆ, ಕಾರ್ಮಿಕರ ಭವಿ?ನಿಧಿ ಪ್ರವರ್ತನ ಅಧಿಕಾರಿ ಮಹೇಶ್ ಬಾಬು, ಕೆಜಿಎಫ್ ಇ.ಎಸ್.ಐ ಶಾಖಾ ವ್ಯವಸ್ಥಾಪಕ ರವಿಚಂದ್ರಶೇಖರ್, ಕಾರ್ಮಿಕ ಅಧಿಕಾರಿ ವರಲಕ್ಷ್ಮಿ.ಆರ್ ಇದ್ದರು.