ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನ ಆಧುನಿಕ ಜೀವನಶೈಲಿಯಲ್ಲಿ ಎದುರಾಗುತ್ತಿರುವ ಒತ್ತಡ, ಆತಂಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಯೋಗ ಸಂಜೀವಿನಿಯಾಗಿದೆ. ಪ್ರತಿನಿತ್ಯ ನಿಯಮಿತವಾಗಿ ಯೋಗಾಭ್ಯಾಸ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಿರೋಗಿ ಹಾಗೂ ಸುಂದರ ಜೀವನ ನಡೆಸಲು ಸಾಧ್ಯ ಎಂದು ಹೇಳಿದರು.
ಮಹಾನಗರ ಪಾಲಿಕೆ ಮೇಯರ್ ಸಿದ್ರಾಮಪ್ಪ ಕರಡಿ, ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ, ಎಸ್‌ಪಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ.ವಿದ್ಯಾವತಿ ಅಥಣಿ, ವಾರ್ತಾಧಿಕಾರಿ ಅಮರೇಶ ದೊಡಮನಿ, ರಾಜಶೇಖರ ದೈವಾಡಿ, ಆರ್.ಎಸ್. ಪಾಟೀಲ, ಡಾ.ಮಹೇಶ ನಾವದಗಿ, ಸಂಜು ಕುಲಕರ್ಣಿ ಸೇರಿ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಪತಂಜಲಿ ಯೋಗ ಸಂಸ್ಥೆ, ವಿವಿಧ ಆಯುರ್ವೇದ, ಯುನಾನಿ ಕಾಲೇಜುಗಳ ಸಿಬ್ಬಂದಿ, ಎನ್‌ಸಿಸಿ ಕೆಡೆಟ್‌ಗಳು ಹಾಗೂ ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.ವಿವಿಧ ಯೋಗಾಸನ ಪ್ರದರ್ಶನ