ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಪಣ್ಣೆದೊಡ್ಡಿ ಮಹರ್‍ನಮಿದೊಡ್ಡಿ, ಕೆರೆಮೇಗಳದೊಡ್ಡಿ, ಹೊಂಬಾಳೆಗೌಡನದೊಡ್ಡಿ ಗ್ರಾಮಗಳಲ್ಲಿ 1.40 ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಕೊಪ್ಪ ಹೋಬಳಿಯ ಬೆಸಗರಹಳ್ಳಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಾರ್ಯಗಳು ಜರುಗುತ್ತಿದ್ದು, ಈಗಾಗಲೇ ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ಮುಂದಾಗಿದ್ದೇನೆ. ಕುಡಿಯುವ ನೀರು, ಮಳೆನೀರು ಚರಂಡಿ, ರಸ್ತೆ, ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.ಮುಂದಿನ ತಿಂಗಳೊಳಗೆ ನಾಲಾ ಆಧುನೀಕರಣ ಕಾಮಗಾರಿಗೆ 5.5 ಕೋಟಿ ರು. ಅನುದಾನ ಬಿಡುಗಡೆಯಾಗಿದೆ. ಶೀಘ್ರ ಕಾಮಗಾರಿ ಆರಂಭಿಸಿ ಕೊನೆ ಭಾಗದ ಜಮೀನುಗಳಿಗೆ ಸಮರ್ಪಕವಾಗಿ ನೀರು ಹರಿಯಲು ಕ್ರಮ ವಹಿಸಲಾಗುವುದು. ಪಣ್ಣೆದೊಡ್ಡಿ ಗ್ರಾಮಕ್ಕೆ ಐದೂವರೆ ಕೋಟಿ ಅನುದಾನ ಬಿಡುಗಡೆಗೊಳಿಸಿದ್ದು, ಗ್ರಾಮದವರ ಋಣ ತೀರಿಸಲು ಗ್ರಾಮಾಭಿವೃದ್ಧಿಗೆ ಮುಂದಾಗಿರುವುದಾಗಿ ಹೇಳಿದರು.
ಬೆಳತ್ತೂರು ಗ್ರಾಮದ 25 ಲಕ್ಷ ಅಂದಾಜು ಮೊತ್ತದ ಮತ್ತೊಂದು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಸ್ಥಳೀಯರಿಂದ ಅಹವಾಲು ಸ್ವೀಕರಿಸಿದರು. ಕೊಪ್ಪ ಕೊನೆ ಭಾಗದ ರೈತರ ಜಮೀನುಗಳಿಗೆ ನೀರು ಹರಿಸುವ ಸಂಬಂಧ ನೀರಾವರಿ ನಿಗಮದ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿರುವುದಾಗಿ ಹೇಳಿದರು.ಈ ವೇಳೆ ಮನ್ಮುಲ್ ನಿರ್ದೇಶಕ ಹರೀಶ್‌ಬಾಬು, ಗ್ರಾಪಂ ಮಾಜಿ ಅಧ್ಯಕ್ಷ ಪಣ್ಣೆದೊಡ್ಡಿ ಶೇಖರ್, ಪುಟ್ಟಸ್ವಾಮಿ, ಸದಸ್ಯರಾದ ಗೋವಿಂದು, ಮೂರ್ತಿ, ಶೋಭ, ವೆಂಕಟೇಶ್, ಗ್ರಾಪಂ ಅಧ್ಯಕ್ಷ ತಿಮ್ಮೇಗೌಡ, ಮುಖಂಡರಾದ ಧನಂಜಯ್, ಪಣ್ಣೆದೊಡ್ಡಿ ಸುಧಾಕರ್, ಪುಟ್ಟಸ್ವಾಮಿ, ಗೋಪಾಲ, ಸಿ.ಕೆ.ವೆಂಕಟೇಶ್, ಪ್ರಕಾಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು.