ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ (ಐಕ್ಯೂಎಸಿ) ಆಂತರಿಕ ಗುಣಮಟ್ಟ ಭರವಸೆ ಕೋಶದ ಅಡಿಯಲ್ಲಿ ನಡೆದ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಉನ್ನತ ಶಿಕ್ಷಣದಲ್ಲಿ ಬೋಧಕರು ಬೋಧನೆ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಂಶೋಧನಾತ್ಮಕ, ವಿಮರ್ಶಾತ್ಮಕ ವಿಚಾರ ಬೆಳೆಸಬೇಕು. ಕಾಲೇಜುಗಳಲ್ಲಿ ಪಾರದರ್ಶಕ ಆಡಳಿತ ನೀಡಿ, ಮೂಲಭೂತ ಸೌಲಭ್ಯ ಒದಗಿಸಬೇಕು. ಕಾಲೇಜಿನ ಅಭಿವೃದ್ಧಿಯಲ್ಲಿ ಬೋಧಕರಷ್ಟೇ ಬೋಧಕೇತರ ಸಿಬ್ಬಂದಿ ಪರಿಶ್ರಮ ಮುಖ್ಯವಾಗಿದೆ ಎಂದು ಹೇಳಿದರು.ಪ್ರಾಂಶುಪಾಲರಾದ ಡಾ.ಅರುಣಕುಮಾರ ಗಾಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನ ಅಭಿವೃದ್ಧಿಗೆ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಹಾಗೂ ಹಳೆಯ ವಿದ್ಯಾರ್ಥಿಗಳು ಪಂಚೇಂದ್ರಿಗಳಿದ್ದಂತೆ. ಇವರೆಲ್ಲರೂ ತಮ್ಮ ಜವಾಬ್ದಾರಿ ಸರಿಯಾಗಿ ನಿಭಾಯಿಸಿದರೆ ಕಾಲೇಜು ಹಾಗೂ ಉನ್ನತ ಶಿಕ್ಷಣ ಅಭಿವೃದ್ಧಿ ಪಡಿಸಲು ಸಾಧ್ಯ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಐಕ್ಯೂಎಸಿ ಸಂಚಾಲಕ ಡಾ.ಪ್ರಭುದೇವ ಮಂಡಿ ಉನ್ನತ ಶಿಕ್ಷಣದಲ್ಲಿ ಐಕ್ಯೂಎಸಿ ಪಾತ್ರ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದರು.ಕನ್ನಡ ವಿಭಾಗ ಸಹ ಪ್ರಾಧ್ಯಾಪಕರಾದ ಡಾ.ಜಿ.ಜಿ.ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಚಾರ ಸಂಕಿರಣದಲ್ಲಿ ವಿವಿಧ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವಪಾಲ್ಗೊಂಡಿದ್ದರು.
ಪ್ರೊ.ಪರಸಪ್ಪ ತಳವಾರ ಪ್ರಾರ್ಥಸಿದರು, ಐಕ್ಯೂಎಸಿ ಸಹ ಸಂಚಾಲಕರಾದ ಡಾ.ಮೂಬಿನ್ ಬೆಳಗಾಮ್ ಸ್ವಾಗತಿಸಿದರು, ಡಾ.ಸುಮಂಗಲಾ ಮೇಟಿ ವಂದಿಸಿದರು, ಡಾ.ಚಂದ್ರಶೇಖರ ಕಾಳನ್ನವರ ನಿರೂಪಿಸಿದರು.