ಕೊಪ್ಪಳ: ಬೇರೆ ಧರ್ಮಕ್ಕಿಂತ ಇಸ್ಲಾಂ ಶ್ರೇಷ್ಠ ಎಂಬ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರ ಹೇಳಿಕೆ ಕೀಳುಮಟ್ಟದಿಂದ ಕೂಡಿದೆ. ಹಿಂದುತ್ವದ ವಿರುದ್ಧ ಮಾತನಾಡುವುದು ನೀಚತನ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಹಿಂದೂಗಳು ಎಂದು ಹೇಳಿಕೊಂಡ ಮಾತ್ರಕ್ಕೆ ಇಸ್ಲಾಂ ಅಥವಾ ಕ್ರೈಸ್ತ ಧರ್ಮದ ವಿರೋಧಿಗಳಲ್ಲ. ಎಲ್ಲ ಧರ್ಮಗಳಿಗೂ ಗೌರವ ನೀಡಬೇಕು. ಆದರೆ, ರಾಜಕೀಯ ಲಾಭಕ್ಕಾಗಿ ಇಂತಹ ಹೇಳಿಕೆ ನೀಡುವುದು ಸರಿಯಲ್ಲ. ಇದು ರಾಜಕೀಯ ತಂತ್ರಗಾರಿಕೆಯ ಭಾಗವಾಗಿದೆ ಎಂದು ಟೀಕಿಸಿದರು.
ರಾಯರಡ್ಡಿ ಅವರು ತಮ್ಮ ಹೇಳಿಕೆಗೆ ಹಿಂದೂ ಸಮಾಜದ ಕ್ಷಮೆ ಕೇಳಬೇಕು. ಇಲ್ಲವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಂದರ್ಭಕ್ಕೆ ತಕ್ಕಂತೆ ಏನು ಬೇಕಾದರೂ ಹೇಳುವುದು ಸರಿಯಲ್ಲ. ಇಂತಹ ಹೇಳಿಕೆಗಳನ್ನು ಸಮರ್ಥಿಸುವುದೂ ತಪ್ಪು ಎಂದರು.ರಾಯರಡ್ಡಿ ಅವರ ಹೇಳಿಕೆಯ ಹಿಂದಿನ ರಾಜಕೀಯವನ್ನು ಮುಸ್ಲಿಂ ಸಮುದಾಯ ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್ ಅನ್ನು ಮುಸ್ಲಿಮರು ನಂಬಬಾರದು. ಕಾಂಗ್ರೆಸ್ ಇರುವವರೆಗೂ ಮುಸ್ಲಿಮರಿಗೆ ಭವಿಷ್ಯವಿಲ್ಲ ಎಂದು ಆರೋಪಿಸಿದರು.
ಪಾದಯಾತ್ರೆ 10 ಅಂಶಗಳ ಕಾರ್ಯಕ್ರಮ
ಹಿಂದೆ ಪ್ರಿಯಾಂಕ್ ಖರ್ಗೆ ಆರ್‌ಡಿಪಿಆರ್ ಸಚಿವರಾಗಿದ್ದ ವೇಳೆ ಇಲಾಖೆಯಲ್ಲಿನ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.
ಬಿಜೆಪಿ–ಜೆಡಿಎಸ್‌ನಲ್ಲಿ ಸಮನ್ವಯದ ಕೊರತೆ ಇರುವುದು ನಿಜ. ಈ ಕುರಿತು ಸಮನ್ವಯ ಸಮಿತಿ ರಚಿಸುವಂತೆ ಹಿಂದೆಯೇ ಪಕ್ಷದ ನಾಯಕರಿಗೆ ಮನವಿ ಮಾಡಿದ್ದೆವು. ಪಾದಯಾತ್ರೆ ಸ್ಥಳೀಯ ವಿಚಾರವಾಗಿದ್ದು, ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿರುವುದರಿಂದ ಸ್ಥಳೀಯ ನಾಯಕತ್ವದೊಂದಿಗೆ ಚರ್ಚಿಸಿ ಮುಂದುವರಿಯಬೇಕು. ಎರಡೂ ಪಕ್ಷಗಳಲ್ಲಿ ಸಮನ್ವಯದ ಕೊರತೆ ಇದ್ದು, ಸಮಿತಿ ರಚನೆಯಾಗಬೇಕು ಎಂದು ಹೇಳಿದರು.