ಕನ್ನಡಪ್ರಭ ವಾರ್ತೆ ಮಳವಳ್ಳಿ
ಗ್ರಾಪಂ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಸಮರ್ಪಕ ಕೂಲಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿದರು.
ಕೃಷಿ ಕೂಲಿಕಾರರ ಜಿಲ್ಲಾಧ್ಯಕ್ಷ ಶಿವಮಲ್ಲಯ್ಯ ಮಾತನಾಡಿ, ಕೂಲಿಕಾರರಿಗೆ ಕಾನೂನು ಅಡಿಯಲ್ಲಿ ಸಿಗಬೇಕಾದ ಕೂಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಿಗುತ್ತಿಲ್ಲ. ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಕೂಡಲೇ ಕೂಲಿ ನೀಡದಿದ್ದರೇ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.ತಾಲೂಕು ಅಧ್ಯಕ್ಷ ಟಿ.ಎಚ್.ಆನಂದ್ ಮಾತನಾಡಿ, ಬಡ ಕೂಲಿಕಾರ್ಮಿಕರಿಗೆ ಇರುವ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಕೂಡಲೇ ಅರ್ಜಿ ಸಲ್ಲಿಸಿರುವ ಎಲ್ಲರಿಗೂ ಕೆಲಸ ನೀಡಬೇಕು. ಅಲ್ಲದೇ ಎಲ್‌ಎಂಆರ್ ತೆಗೆಯಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳದಲ್ಲಿಯೇ ಊಟ ತಯಾರಿಸಿ ಪ್ರತಿಭಟನೆ ಮುಂದುವರಿಸಿದ್ದರು. ತಾಪಂ ಇಒ ಎಚ್.ಜಿ.ಶ್ರೀನಿವಾಸ್ ಭೇಟಿ ನೀಡಿ ಮನವಿ ಸ್ವೀಕರಿಸಿ ಕೂಡಲೇ ಎಲ್‌ಎಂಆರ್ ತೆಗೆಯಲು ಪಿಡಿಒ ಅವರಿಗೆ ಸೂಚಿಸಿದರು. ನಂತರ ಪ್ರತಿಭಟನೆ ವಾಪಸ್ ಪಡೆಯಲಾಯಿತು. ಪ್ರತಿಭಟನೆಯಲ್ಲಿ ಮುಖಂಡರಾದ ರಾಮಯ್ಯ, ಗಿರಿಜಮ್ಮ, ಮಹದೇವಮ್ಮ ಸೇರಿದಂತೆ ಇತರರು ಇದ್ದರು.ಅಂಬಿಗರ ಚೌಡಯ್ಯ ಶ್ರೇಷ್ಠ ತತ್ವಜ್ಞಾನಿ ಶಿವಶರಣರ ಪಂಕ್ತಿಯಲ್ಲಿ ಅಗ್ರಸ್ಥಾನ: ಎಂ.ರಘುಕುಮಾರ್ಕನ್ನಡಪ್ರಭ ವಾರ್ತೆ ಮಳವಳ್ಳಿ
ಅಂಬಿಗರ ಚೌಡಯ್ಯ ಶ್ರೇಷ್ಠ ತತ್ವಜ್ಞಾನಿ ಜೊತೆಗೆ ಶಿವಶರಣರ ಪಂಕ್ತಿಯಲ್ಲಿ ಅಗ್ರಸ್ಥಾನ ಪಡೆದಿದ್ದರು ಎಂದು ಶ್ರೀ ಗಂಗಪರಮೇಶ್ವರಿ ಸಹಕಾರ ಸಂಘ ನಿಯಮಿತ ಅಧ್ಯಕ್ಷ ಎಂ.ರಘುಕುಮಾರ್ ತಿಳಿಸಿದರು.ಪಟ್ಟಣದ ಶ್ರೀಗಂಗಪರಮೇಶ್ವರಿ ಸಹಕಾರ ಸಂಘದ ಆವರಣದಲ್ಲಿ ನಡೆದ ಅಂಬಿಗರ ಚೌಡಯ್ಯ ಜಯಂತಿ ಉದ್ಘಾಟಿಸಿ ಮಾತನಾಡಿ, ಅಂಬಿಗರ ಚೌಡಯ್ಯ ದೋಣಿ ನಡೆಸುವ ಜೊತೆಗೆ ಭವಸಾಗರವನ್ನು ದಾಟಿಸುವ ಜ್ಞಾನದ ಅಂಬಿಗ ಎಂದು ಗುರುತಿಸಿಕೊಂಡಿದ್ದರು ಎಂದು ಬಣ್ಣಿಸಿದರು.
ಸಮಾಜದಲ್ಲಿದ್ದ ಮೌಢ್ಯ, ಕಪಟತನ ಮತ್ತು ಜಾತೀಯತೆಯನ್ನು ಅವರು ಕಟುವಾಗಿ ಟೀಕಿಸುತ್ತಿದ್ದರು. ಯಾರ ಮುಲಾಜಿಗೂ ಒಳಗಾಗದೆ ಸತ್ಯವನ್ನು ಹೇಳುವ ಗುಣ ಹೊಂದಿದ್ದರು. ಅಂತರಂಗದ ಶುದ್ಧಿಗೆ ಹೆಚ್ಚಿನ ಒತ್ತು ನೀಡಿದರು. ‘ಅರಿವೇ ಗುರು’ ಎಂಬ ತತ್ವವನ್ನು ಅವರು ಗಾಢವಾಗಿ ನಂಬಿದ್ದರು ಎಂದರು.ಉಪಾಧ್ಯಕ್ಷ ಶಿವಕುಮಾರ್ ಮಾತನಾಡಿ, ಅಂಬಿಗರ ಚೌಡಯ್ಯ ಅವರ ಸಂದೇಶಗಳು ಇಂದಿಗೂ ಪ್ರಸ್ತುತವಾಗಿದೆ. ಅವರ ಅದರ್ಶ ಗುಣಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಶ್ರೀ ಗಂಗಪರಮೇಶ್ವರಿ ಸಹಕಾರ ಸಂಘದ ನಿರ್ದೇಶಕರಾದ ಎಸ್ ಕಂಬರಾಜು, ಮೊಗಣ್ಣ, ಗುರುಸಿದ್ದಯ್ಯ, ಶ್ವೇತಾ, ನಾಗಮ್ಮ ಮುಖಂಡರಾದ ದೊಡ್ಡ ಅರಸಯ್ಯ, ನಂಜುಂಡಯ್ಯ, ವೆಂಕಟೇಶ್ ಸೇರಿದಂತೆ ಇತರರು ಇದ್ದರು.