ಕನ್ನಡಪ್ರಭ ವಾರ್ತೆ ಮಳವಳ್ಳಿ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಿರ್ಮಿಸಲಾಗಿದ್ದ ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ಎಸ್‌ಸಿಪಿ ಯೋಜನೆಯ ಅರಿವು ಮತ್ತು ಜಾಗೃತಿ ಮೂಡಿಸುವ ವಿಶೇಷ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಜ್ಯ ಸರ್ಕಾರ ಸಾರ್ವಜನಿಕರ ಅಭಿವೃದ್ಧಿಗಾಗಿ ಅನೇಕ ಯೋಜನೆ ರೂಪಿಸಿದೆ. ಸರ್ಕಾರಿ ಯೋಜನೆಗಳ ಕುರಿತಾಗಿ ಸಾರ್ವಜನಿಕರಿಗೆ ತಿಳಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಶ್ರಮಿಸುತ್ತಿದೆ. ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತಿದೆ ಎಂದರು.
ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಸಮರ್ಪಕವಾಗಿ ಸದುಪಯೋಗವಾಗುತ್ತಿದೆ. ಸರ್ಕಾರಿ ಯೋಜನೆಗಳು ಅರ್ಹರನ್ನು ತಲುಪಬೇಕು ಎಂದರು.ವಿಶೇಷ ಛಾಯಾಚಿತ್ರಗಳ ಪ್ರದರ್ಶನ ಸಾರ್ವಜನಿಕ ಗಮನ ಸೆಳೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಮೆ ಎದುರು ಹಾಗೂ ವಿವಿಧ ಛಾಯಾಚಿತ್ರಗಳು ಮುಂದೆ ನಿಂತು ಸಾರ್ವಜನಿಕರು ಸೆಲ್ಫಿ ಕ್ಲಿಕ್ಕಿಸಿಕೊಂಡರು.
ಕಾರ್ಯಕ್ರಮದಲ್ಲಿ ವಾರ್ತಾಧಿಕಾರಿ ಟಿ.ಕೆ.ಹರೀಶ್, ಮಳವಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಾಶ್, ಸಾರಿಗೆ ಇಲಾಖೆ ಸಿಬ್ಬಂದಿ ವರ್ಗದವರು ಹಾಜರಿದ್ದರು.ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ವಕೀಲ ವಿ.ಟಿ.ರವಿಕುಮಾರ್ ಆಯ್ಕೆಮದ್ದೂರು:
ತಾಲೂಕು ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ವಕೀಲ ವಿ.ಟಿ.ರವಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಪಟ್ಟಣದ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ನಿಕಟ ಪೂರ್ವ ಅಧ್ಯಕ್ಷ ಡಿ.ಪಿ.ಶಿವಪ್ಪ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ವಿ.ಟಿ.ರವಿಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಬಳಿಕ ಪದಾಧಿಕಾರಿಗಳಿಂದ ಅಭಿನಂದನೆ ಸ್ವೀಕರಿಸಿದ ಅಧ್ಯಕ್ಷ ವಿ.ಟಿ.ರವಿಕುಮಾರ್, ಒಕ್ಕಲಿಗರ ಸಂಘ ಇದುವರೆಗೆ ಕೇವಲ ಪ್ರತಿಭಟನೆ, ಜಯಂತಿ ಹಾಗೂ ಸಭೆ ಸಮಾರಂಭಗಳಿಗೆ ಮಾತ್ರ ಸೀಮಿತವಾಗಿದೆ. ಸಂಘವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟುವ ಜೊತೆಗೆ ಸಮುದಾಯದಲ್ಲಿ ಹಿಂದುಳಿದ ವರ್ಗದ ಜನರಿಗೆ ಆರ್ಥಿಕ ನೆರವು, ಪರಿಸರ ಅಭಿವೃದ್ಧಿಗೆ ಒಕ್ಕಲಿಗ ಸದಾಕಾಲ ಸಂಘ ಚಟುವಟಿಕೆಯಿಂದ ಇರುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.ಈ ವೇಳೆ ಸಂಘದ ಗೌರವಾಧ್ಯಕ್ಷ ಡಾ.ಬಿ.ಕೃಷ್ಣ, ಉಪಾಧ್ಯಕ್ಷ ಶಂಕರಯ್ಯ, ಪದಾಧಿಕಾರಿಗಳಾದ ದೊರೆಸ್ವಾಮಿ, ಆಲೂರು ಶಿವರಾಮು, ದೇವಕುಮಾರ್, ಚಂದ್ರಶೇಖರ್, ಅಂಬರೀಶ್, ಸಿದ್ದೇಗೌಡ ಹಾಗೂ ತಿಪ್ಪೂರು ರಾಜೇಶ್ ಮತ್ತಿತರರು ಇದ್ದರು.